Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಸೆಪ್ಟೆಂಬರ್ 3: ಏಷ್ಯಾಡ್‌ನಲ್ಲಿ ಭಾರತೀಯರ ಸಾಹಸ; ಭಾರತದ ಅಭ್ಯಾಸ ಪಂದ್ಯಕ್ಕೆ ಮಳೆ ಅಡ್ಡಿ : ಕ್ರೀಡಾ ಲೋಕದ ಇಂದಿನ ಸುದ್ದಿ

* ಮಂಗಳವಾರ, ಅಕ್ಟೋಬರ್ 3ರಂದು ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 2023ರ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ನೇಪಾಳ ವಿರುದ್ಧ ಬಲಿಷ್ಠ ಭಾರತ ತಂಡ ಭರ್ಜರಿ ಗೆಲುವು ದಾಖಲಿಸುವ ಮೂಲಕ ಸೆಮಿಫೈನಲ್ ಪ್ರವೇಶಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿತ್ತು.

* ಮಂಗಳವಾರ, ಅಕ್ಟೋಬರ್ 3ರಂದು ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 2023ರ ಏಷ್ಯನ್ ಗೇಮ್ಸ್‌ನ ಮಹಿಳಾ ಹಾಕಿ ಸ್ಪರ್ಧೆಯಲ್ಲಿ ಭಾರತೀಯ ಮಹಿಳಾ ತಂಡವು ಹಾಂಗ್‌ಕಾಂಗ್ ಮಹಿಳಾ ತಂಡವನ್ನು 13-0 ಅಂತರದಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿತು. ಭಾರತದ ಸ್ಟ್ರೈಕರ್‌ಗಳಾದ ವಂದನಾ ಕಟಾರಿಯಾ, ಉಪನಾಯಕಿ ದೀಪ್ ಗ್ರೇಸ್ ಎಕ್ಕಾ ಮತ್ತು ದೀಪಿಕಾ ತಲಾ ಹ್ಯಾಟ್ರಿಕ್ ಗೋಲು ಗಳಿಸಿದರು. ಭಾರತದ ಕೊನೆಯ ಪೂಲ್ ಪಂದ್ಯದಲ್ಲಿನ ಈ ಗೆಲುವು ತಂಡವನ್ನು ಸೆಮಿಫೈನಲ್‌ಗೆ ಮುನ್ನಡೆಸಿದ್ದು, ಪದಕದ ಆಸೆ ಜೀವಂತವಾಗಿರಿಸಿತು.

October 3, what happened in sports World: Todays Top sports news and headlines

* 2023ರ ಏಷ್ಯನ್ ಗೇಮ್ಸ್ ಚಿನ್ನದ ಪದಕಕ್ಕಾಗಿ ಭಾರತದ ಪುರುಷರ ಕಬಡ್ಡಿ ತಂಡವು ತನ್ನ ಕಾರ್ಯಾಚರಣೆ ಆರಂಭಿಸಿದ್ದು, ಚೀನಾದ ಹ್ಯಾಂಗ್‌ಝೌನಲ್ಲಿರುವ ಕ್ಸಿಯೋಶನ್ ಗುವಾಲಿ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ನಡೆದ ಬಾಂಗ್ಲಾದೇಶದ ವಿರುದ್ಧದ ಮೊದಲ ಪಂದ್ಯದಲ್ಲಿ 55-18 ಗೆಲುವು ಸಾಧಿಸಿತು. ಏಷ್ಯನ್ ಗೇಮ್ಸ್‌ನ ಏಳು ಬಾರಿ ಚಾಂಪಿಯನ್ ಆಗಿರುವ ದಾಖಲೆಯೊಂದಿಗೆ ಭಾರತೀಯ ಕಬಡ್ಡಿ ತಂಡವು 2018ರ ಆವೃತ್ತಿಯಲ್ಲಿ ಕಂಚಿನ ಪದಕಕ್ಕೆ ಜಾರಿದ ನಂತರ, ಏಷ್ಯನ್ ಗೇಮ್ಸ್ ಚಿನ್ನದ ಪದಕವನ್ನು ಮರಳಿ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ.

* ಇದೀಗ ಎಂಎಸ್ ಧೋನಿ ಮತ್ತೆ ತಮ್ಮ ಹೊಸ ಲುಕ್‌ನ ಕಾರಣಕ್ಕಾಗಿಯೇ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಟಿಂಗ್‌ನಲ್ಲಿದ್ದಾರೆ. ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಇದೀಗ ತಮ್ಮ ವೃತ್ತಿ ಜೀವನದ ಆರಂಭಿಕ ದಿನಗಳ ರೀತಿಯಲ್ಲಿ ಉದ್ದನೆಯ ಕೂದಲಿನೊಂದಿಗೆ ಮತ್ತಷ್ಟು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

* ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಒಲಿಂಪಿಕ್ಸ್ ಪದಕ ವಿಜೇತೆ ಭಾರತದ ಸ್ಟಾರ್ ಬಾಕ್ಸರ್ ಲೊವ್ಲಿನಾ ಬೊರ್ಗೋಹೈನ್ ಮಹಿಳೆಯರ 75 ಕೆಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದ್ದಾರೆ. ಏಷ್ಯನ್ ಗೇಮ್ಸ್‌ನ ಫೈನಲ್‌ಗೆ ಪ್ರವೇಶ ಪಡೆಯುವುದರ ಜೊತೆಗೆ ಲೊವ್ಲಿನಾ 2024ರ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೂ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.

* ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳ ಅದ್ಭುತ ಪ್ರದರ್ಶನ ಮುಂದುವರಿದಿದೆ. ಪಾರೂಲ್ ಚೌಧರಿ ಚಿನ್ನದ ಪದಕವನ್ನು ಗೆದ್ದ ನಂತರ ಮತ್ತೋರ್ವ ಮಹಿಳಾ ಅಥ್ಲೀಟ್ ಅನ್ನು ರಾಣಿ ಚಿನ್ನದ ಪದಕವನ್ನು ಗೆದ್ದು ಬೀಗಿದ್ದಾರೆ. ಜಾವೆಲಿನ್ ಎಸೆತದಲ್ಲಿ ಅನ್ನು ರಾಣಿ ಚಿನ್ನದ ಎಸೆತವನ್ನು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ 71 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಈ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕವನ್ನು ಗೆದ್ದ ಭಾರತದ ಮಹಿಳಾ ಅಥ್ಲೀಟ್ ಎನಿಸಿಕೊಂಡಿದ್ದಾರೆ.

* ಭಾರತದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರನ್ನು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) 2023ರ ಏಕದಿನ ವಿಶ್ವಕಪ್‌ನ ಜಾಗತಿಕ ರಾಯಭಾರಿಯಾಗಿ ನೇಮಕ ಮಾಡಿದೆ. ವಿಶ್ವ ಕ್ರಿಕೆಟ್‌ನಲ್ಲಿ ಸಾರ್ವಕಾಲಿಕ ಶ್ರೇಷ್ಠ ಆಟಗಾರಲ್ಲಿ ಅಗ್ರಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ ಅನೇಕ ದಾಖಲೆಗಳನ್ನು ಹೊಂದಿದ್ದಾರೆ. ಅತಿ ಹೆಚ್ಚು ರನ್, 100 ಶತಕ ಸೇರಿದಂತೆ ಬೃಹತ್ ದಾಖಲೆಗಳನ್ನು ಹೊಂದಿರುವ ಸಚಿನ್ ತೆಂಡೂಲ್ಕರ್ ಅಹ್ಮದಾಬಾದ್‌ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯಕ್ಕೂ ಮುನ್ನ ಟ್ರೋಫಿಯ ಜೊತೆಗೆ ಅಂಗಳಕ್ಕಿಳಿಯಲಿದ್ದು ಈ ಮೂಲಕ ಟೂರ್ನಿಯ ಉದ್ಘಾಟನೆಯನ್ನು ಘೋಷಿಸಲಿದ್ದಾರೆ.

Story first published: Tuesday, October 3, 2023, 23:58 [IST]
Other articles published on Oct 3, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+