* ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ 100 ಪದಕಗಳ ಐತಿಹಾಸಿಕ ಮೈಲಿಗಲ್ಲನ್ನು ತಲುಪಿದ ನಂತರ, ಪ್ರಧಾನಿ ನರೇಂದ್ರ ಮೋದಿ ಭಾರತೀಯ ಕ್ರೀಡಾಪಟುಗಳನ್ನು ಅಭಿನಂದಿಸಿದರು. ಇದೇ ಅಕ್ಟೋಬರ್ 10ರಂದು ದೆಹಲಿಯ ತಮ್ಮ ನಿವಾಸದಲ್ಲಿ ಅಭಿನಂದನಾ ಸಮಾರಂಭಕ್ಕೆ ಆತಿಥ್ಯ ವಹಿಸುವುದಾಗಿ ಮತ್ತು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸುವುದಾಗಿ ನರೇಂದ್ರ ಮೋದಿ ಬಹಿರಂಗಪಡಿಸಿದರು.
* ಅಕ್ಟೋಬರ್ 8ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾರತ ತಂಡ 2023ರ ವಿಶ್ವಕಪ್‌ನ ತನ್ನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಸೆಣಸಾಡಲಿದೆ. ಈಗಾಗಲೇ ಉಭಯ ತಂಡಗಳು ಚೆನ್ನೈನಲ್ಲಿ ಉತ್ತಮ ತಯಾರಿ ನಡೆಸುತ್ತಿವೆ. ಇದೇ ವೇಳೆ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಆರಂಭಿಕ ಹಿನ್ನಡೆ ಉಂಟಾಗಿದ್ದು, ಯುವ ಆರಂಭಿಕ ಬ್ಯಾಟರ್ ಶುಭ್ಮನ್ ಗಿಲ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಆಡುವ ಸಾಧ್ಯತೆ ಕಡಿಮೆಯಾಗಿದೆ.

* ಶನಿವಾರ, ಅಕ್ಟೋಬರ್ 7ರಂದು ನಡೆದ 2023ರ ಏಷ್ಯನ್ ಗೇಮ್ಸ್‌ನ ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ಫೈನಲ್‌ನಲ್ಲಿ ಕೊರಿಯಾದ ಜೋಡಿ ವಿರುದ್ಧ ಗೆಲುವು ಸಾಧಿಸಿದ ಭಾರತದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಜೋಡಿಯು ಐತಿಹಾಸಿಕ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಪುರುಷರ ಡಬಲ್ಸ್ ಫೈನಲ್‌ನಲ್ಲಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿಯು 21-18, 21-16 ಅಂತರದಲ್ಲಿ ರಿಪಬ್ಲಿಕ್ ಕೊರಿಯಾದ ಚೊಯ್ ಸೊಲ್ಗ್ಯು ಮತ್ತು ಕಿಮ್ ವೊನ್ಹೊ ಜೋಡಿಯನ್ನು 56 ನಿಮಿಷಗಳಲ್ಲಿ ಸೋಲಿಸಿ ಭಾರತದ ಚೊಚ್ಚಲ ಏಷ್ಯನ್ ಗೇಮ್ಸ್ ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿತು.
* ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕದ ಬೇಟೆ ಮುಂದುವರಿದಿದೆ. ಪುರಷರ ಕಬಡ್ಡಿಯಲ್ಲಿಯೂ ಭಾರತ ತಂಡ ಇರಾನ್ ತಂಡವನ್ನು ಮಣಿಸಿ ಚಿನ್ನದ ಪದಕವನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ತೀವ್ರ ಪೈಪೋಟಿಯಿಂದ ಕೂಡಿದ್ದ ಈ ಪಂದ್ಯದ ಅಂತಿಮ ಘಟ್ಟದಲ್ಲಿ ಭಾರೀ ವಿವಾದ ಉಂಟಾಗಿದ್ದು ಸುಮಾರು ಒಂದು ಗಂಟೆಗಳ ಕಾಲ ಪಂದ್ಯ ಮುಂದುವರಿಯಲು ಅವಕಾಶ ದೊರೆಯಲಿಲ್ಲ. ಪಂದ್ಯ ಮುಂದುವರಿದ ಬಳಿಕ ಭಾರತ ಪಂದ್ಯವನ್ನು ತನ್ನ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಭಾರತದ ಚಿನ್ನದ ಪದಕಗಳ ಪಟ್ಟಿಗೆ ಮತ್ತೊಂದು ಪದಕ ಸೇರ್ಪಡೆಯಾಗಿದೆ.
* ಶನಿವಾರ, ಅಕ್ಟೋಬರ್ 7ರಂದು ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಮೂರನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಅಫ್ಘಾನಿಸ್ತಾನ ವಿರುದ್ಧ ಭರ್ಜರಿ ಗೆಲುವಿನ ಮೂಲಕ ಶುಭಾರಂಭ ಮಾಡಿದೆ. ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ಆಲ್‌ರೌಂಡ್ ಪ್ರದರ್ಶನ ನೀಡಿದ ಬಾಂಗ್ಲಾದೇಶ ತಂಡ ಅಫ್ಘಾನಿಸ್ತಾನ ವಿರುದ್ಧ ವಿಕೆಟ್‌ಗಳ ಗೆಲುವು ದಾಖಲಿಸಿದೆ.
* ಶನಿವಾರ, ಅಕ್ಟೋಬರ್ 7ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಬೃಹತ್ ಮೊತ್ತ ಕಲೆಹಾಕಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 50 ಓವರ್‌ಗಳಲ್ಲಿ5 ವಿಕೆಟ್ ನಷ್ಟಕ್ಕೆ 428 ರನ್‌ಗಳನ್ನು ಗಳಿಸಿತು. ಈ ವೇಳೆ ಮೂವರು ಬ್ಯಾಟರ್‌ಗಳು ಶತಕ ಬಾರಿಸಿ ದಾಖಲೆ ನಿರ್ಮಿಸಿದರು.
* ವಿಶ್ವಕಪ್ ಟೂರ್ನಿಯಲ್ಲಿ ಇಂದು ಶ್ರೀಲಂಕಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದೆ. ಹೈಸ್ಕೋರಿಂಗ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಶ್ರೀಲಂಕಾ ವಿರುದ್ಧ 102 ರನ್‌ಗಳ ಅಂತರದ ಬೃಹತ್ ಗೆಲುವು ಸಾಧಿಸಿದೆ. ಈ ಮೂಲಕ ಟೆಂಬಾ ಬವುಮಾ ಪಡೆ ಭರ್ಜರಿ ಆರಂಭವನ್ನು ಪಡೆದುಕೊಂಡಿದೆ. ಮತ್ತೊಂದೆಡೆ ಶ್ರೀಲಂಕಾ ತಂಡ ಈ ಪಂದ್ಯದಲ್ಲಿ ಸೋಲು ಅನುಭವಿಸಿದ ಹೊರತಾಗಿಯೂ ಬ್ಯಾಟಿಂಗ್ ವಿಭಾಗದಲ್ಲಿ ನೀಡಿದ ಹೋರಾಟ ಸಹಜವಾಗಿಯೇ ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿರುವುದರಲ್ಲಿ ಅನುಮಾನವಿಲ್ಲ.
* ಏಷ್ಯನ್ ಗೇಮ್ಸ್ ಇತಿಹಾಸದಲ್ಲಿ ಭಾರತದ ಕ್ರೀಡಾಪಟುಗಳು ಈ ಹಿಂದೆಂದೂ ಮಾಡಲಾಗದ ಸಾಧನೆಯನ್ನು ಮಾಡಿದ್ದು ಹೆಮ್ಮೆಯಿಂದ ಬೀಗುವಂತೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಭಾರತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ನೂರಕ್ಕೂ ಅಧಿಕ ಪದಕ ಗೆದ್ದ ಸಾಧನೆ ಮಾಡಿದ್ದು ಒಟ್ಟಾರೆಯಾಗು 107 ಪದಕಗಳನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಭಾರತದ ಏಷ್ಯನ್ ಗೇಮ್ಸ್ ಅಭಿಯಾನ ಅಂತ್ಯಕಂಡಿದೆ. ಭಾರತ ಇಲ್ಲಿಯವರೆಗೆ ಕಳೆದ ಆವೃತ್ತಿಯ ಏಷ್ಯನ್ ಗೇಮ್ಸ್ ಜಗಾರ್ತಾದಲ್ಲಿ ನಡೆದಾಗ 70 ಪದಕಗಳನ್ನು ಗೆದ್ದಿರುವುದು ಅತಿ ದೊಡ್ಡ ಸಾಧನೆಯಾಗಿತ್ತು. ಹೀಗಾಗಿ ಈ ಬಾರಿ ಆ ಸಾಧನೆಯನ್ನು ಮೀರಿ ನೂರಕ್ಕೂ ಅಧಿಕ ಪದಕ ಗೆಲ್ಲಬೇಕು ಎನ್ನುವ ಗುರಿಯೊಂದಿಗೇ ಭಾರತ ಕ್ರೀಡಾಕೂಟಕ್ಕೆ ಕಣಕ್ಕಿಳಿದಿತ್ತು. ತನ್ನ ಧ್ಯೇಯವಾಕ್ಯಕ್ಕೆ ತಕ್ಕದಾದ ಪ್ರದರ್ಶನ ನೀಡಿದ ಭಾರತೀಯ ಕ್ರೀಡಾಪಟುಗಳು 107 ಪದಕಗಳನ್ನು ಗೆದ್ದ ಸಾಧನೆ ಮಾಡಿದ್ದಾರೆ. ಈ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಭಾರತ ಸರಿಯಾದ ದಿಕ್ಕಿನತ್ತ ಸಾಗುತ್ತಿದೆ ಎನ್ನುವುದು ಸ್ಪಷ್ಟವಾಗಿದೆ.