* ಈ ಬಾರಿಯ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಬಳಗಕ್ಕೆ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಅವರ ಉಪಸ್ಥಿತಿ ಬಹಳ ದೊಡ್ಡ ಬಲ ನೀಡಲಿದೆ ಎಂದಿದ್ದಾರೆ ಮಾಂಟಿ ಪನೆಸರ್. ವಿರಾಟ್ ಕೊಹ್ಲಿ ಅವರ ವಿಶ್ವಕಪ್ ಪ್ರಯಾಣ 2011ರಲ್ಲಿ ಆರಂಭ ಗೊಂಡಿದ್ದು ಭಾರತ ವಿಶ್ವಕಪ್ ಗೆದ್ದ ಆ ತಂಡದ ಎರಡನೇ ಅತಿ ಕಿರಿಯ ಆಟಗಾರ ಎನಿಸಿಕೊಂಡಿದ್ದರು ಕೊಹ್ಲಿ.
* ನ್ಯೂಜಿಲೆಂಡ್ ತಂಡದ ನಾಯಕ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಗಾಯದಿಂದ ಚೇತರಿಸಿಕೊಂಡಿದ್ದು ವಿಶ್ವಕಪ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಆದರೆ ವಿಶ್ವಕಪ್‌ನ ಆರಂಭಿಕ ಪಂದ್ಯದಿಂದ ಕೇನ್ ಹೊರಗುಳಿದಿದ್ದು ಯಾವಾಗ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಪ್ರಶ್ನೆಗಳು ಎದ್ದಿತ್ತು. ಇದೀಗ ಈ ವಿಚಾರವಾಗಿ ನ್ಯೂಜಿಲೆಂಡ್ ತಂಡದ ಮುಖ್ಯ ಕೋಚ್ ಗ್ಯಾರಿ ಸ್ಟೀಡ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಾರಿಯ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ತಂಡದ ಮೂರನೇ ಪಂದ್ಯದಿಂದ ಕೇನ್ ವಿಲಿಯಮ್ಸನ್ ಲಭ್ಯವಿರಲಿದ್ದಾರೆ ಎನ್ನುವ ಮಾಹಿತಿಯನ್ನು ಕಿವೀಸ್ ಕೋಚ್ ಬಹಿರಂಗಪಡಿಸಿದ್ದಾರೆ.

* ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶುಭ್ಮನ್ ಗಿಲ್ ಸದ್ಯ ಇನ್ನೂ ಚೇತರಿಕೆಯ ಹಂತದಲ್ಲಿದ್ದು, ಹೀಗಾಗಿ ಭಾರತದ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. ಈ ಕುರಿತು ಟಾಸ್ ನಂತರ ರೋಹಿತ್ ಶರ್ಮಾ ಸ್ಪಷ್ಟಪಡಿಸಿದ್ದಾರೆ. "ಅಭ್ಯಾಸ ಪಂದ್ಯಗಳಿಗೆ ಮೊದಲು ನಾವು ಎರಡು ಉತ್ತಮ ಸರಣಿಗಳನ್ನು ಆಡಿದ್ದೇವೆ. ನಾವು ಎಲ್ಲಾ ವಿಭಾಗಗಳಲ್ಲಿ ಉತ್ತಮ ತಯಾರಿ ನಡೆಸಿದ್ದೇವೆ. ದುರದೃಷ್ಟವಶಾತ್ ಶುಭ್ಮನ್ ಗಿಲ್ ಈ ಸಮಯಕ್ಕೆ ಚೇತರಿಸಿಕೊಳ್ಳಲಿಲ್ಲ, ನಾವು ಇಂದು ಬೆಳಿಗ್ಗೆ ತನಕ ಕಾಯುತ್ತಿದ್ದೆವು ಮತ್ತು ಅವರು ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ. ಅವರ ಬದಲಿಗೆ ಇಶಾನ್ ಕಿಶನ್ ಆಡಲಿದ್ದು, ನನ್ನೊಂದಿಗೆ ಬ್ಯಾಟಿಂಗ್ ತೆರೆಯಲಿದ್ದಾರೆ," ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ತಿಳಿಸಿದರು.
* ಆಸ್ಟ್ರೇಲಿಯಾ ತಂಡದ ಓರ್ವ ಆಟಗಾರ ವಿಶ್ವಕಪ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದರೂ ಇನ್ನೂ ಭಾರತಕ್ಕೆ ಆಗಮಿಸಿಲ್ಲ. ತವರಿನಲ್ಲಿಯೇ ಉಳಿದಕೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರೇ ಬಹಿರಂಗಪಡಿಸಿದ್ದಾರೆ. ಅಂದಹಾಗೆ ವಿಶ್ವಕಪ್ ತಂಡದಲ್ಲಿದ್ದರೂ ಇನ್ನೂ ಭಾರತಕ್ಕೆ ಬಂದಿಳಿಯದ ಆ ಆಟಗಾರ ಬೇರೆ ಯಾರೂ ಅಲ್ಲ ಆಸ್ಟ್ರೇಲಿಯಾ ತಂಡದ ಮಧ್ಯಮ ಕ್ರಮಾಂಕದ ಆಟಗಾರ ಟ್ರಾವಿಸ್ ಹೆಡ್. ಆಕ್ರಮಣಕಾರಿ ಆಟಕ್ಕೆ ಹೆಸರಾಗಿರುವ ಈ ಆಟಗಾರ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ತವರಿನಲ್ಲಿಯೇ ಇದ್ದು ಚೇತರಿಕೆ ಕಾಣುತ್ತಿದ್ದಾರೆ ಎಂದು ಸ್ವತಃ ಆಸೊಸ್ ನಾಯಕ ಪ್ಯಾಟ್ ಕಮ್ಮಿನ್ಸ್ ವಿವರಿಸಿದ್ದಾರೆ.
* 2021ರಲ್ಲಿ ಹೆಡಿಂಗ್ಲೆಯಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದ ವೇಳೆ ಪಿಚ್‌ನಲ್ಲಿ ಆಕ್ರಮಣ ಮಾಡುವ ತನ್ನ ವರ್ತನೆಗಳಿಗೆ ಹೆಸರುವಾಸಿಯಾದ ಡೇನಿಯಲ್ ಜಾರ್ವೋ ಮತ್ತೊಮ್ಮೆ ಭಾರತದ ವಿಶ್ವಕಪ್ ಪಂದ್ಯದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಈ ಬಾರಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2023ರ ಐಸಿಸಿ ಏಕದಿನ ವಿಶ್ವಕಪ್ ಐದನೇ ಪಂದ್ಯದ ವೇಳೆ ಅವರು ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣಕ್ಕೆ ಪ್ರವೇಶಿಸಲು ಪ್ರಯತ್ನಿಸಿದರು ಮತ್ತು ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಯೊಂದಿಗೆ ಸಂವಾದ ನಡೆಸಿದರು.
* ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಏಕದಿನ ವಿಶ್ವಕಪ್‌ನಲ್ಲಿ ಭಾರತೀಯ ಆಟಗಾರನಿಂದ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿದರು.
* ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಬೌಲಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದು ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು 199 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ರವೀಂದ್ರ ಜಡೇಜಾ ಅದ್ಭುಇತ ಯಶಸ್ಸು ಸಾಧಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಅಪರೂಪದ ದಾಖಲೆಯ ಪಟ್ಟಿಯಲ್ಲಿ ಹರ್ಭಜನ್ ಸಿಂಗ್ ಅವರನ್ನು ಸೇರಿಕೊಂಡಿದ್ದಾರೆ.