ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಒಲಿಂಪಿಕ್ಸ್‌ಗೆ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ 10 ಲಕ್ಷ ರೂ. ಸಹಾಯ ಧನ

Olympics 2021: Rs 10 Lakh Incentives for Karnataka Athletes who Selected; Minister Narayana Gowda
Tokyo Olympics 2021 ವಿಚಾರವಾಗಿ ಸರ್ಕಾರ ತಗೊಂಡಿರೊ ದೊಡ್ಡ ನಿರ್ಧಾರ | Oneindia Kannada

ಬೆಂಗಳೂರು: ಜಪಾನ್‌ನ ಟೋಕಿಯೋದಲ್ಲಿ ನಡೆಯಲಿರುವ ಒಲಿಂಪಿಕ್ಸ್‌ಗೆ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ 10 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣ ಗೌಡ ಹೇಳಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ಗೆ ರಾಜ್ಯದಿಂದ 5 ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿದ್ದಾರೆ.

'ಗ್ರೇಟ್‌ವಾಲ್‌-2' ಪೂಜಾರಗೆ ಮುಂದೆ ಭಾರತ ತಂಡದಲ್ಲಿ ಜಾಗ ಇಲ್ವಾ?!'ಗ್ರೇಟ್‌ವಾಲ್‌-2' ಪೂಜಾರಗೆ ಮುಂದೆ ಭಾರತ ತಂಡದಲ್ಲಿ ಜಾಗ ಇಲ್ವಾ?!

2020ರಲ್ಲಿ ನಡೆಯಲಿದ್ದ ಟೋಕಿಯೋ ಒಲಿಂಪಿಕ್ಸ್ ಈ ವರ್ಷ ಜುಲೈ 23ರಿಂದ ಆಗಸ್ಟ್‌ 8ರ ವರೆಗೆ ನಡೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣ ಗೌಡ ಈ ಸಂಬಂಧ ಸಭೆ ನಡೆಸಿದ್ದಾರೆ. ಪ್ರತಿಷ್ಠಿಯ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸೋದು ನಮ್ಮ ಕರ್ತವ್ಯ ಎಂದು ನಾರಾಯಣ ಗೌಡ ಹೇಳಿದ್ದಾರೆ.

ರಾಜ್ಯದ ಈಕ್ವೆಸ್ಟ್ರಿಯನ್ ಕ್ರೀಡಾಪಟು ಟೋಕಿಯೋ ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದಾರೆ. ರಾಜ್ಯದ ಇನ್ನೂ ನಾಲ್ವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಆಯ್ಕೆಯಾದವರಿಗೆ ಪ್ರೋತ್ಸಾಹ ಧನ ನೀಡಿ ಬೆಂಬಲಿಸಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20ಐಗೆ ವೆಸ್ಟ್ ಇಂಡೀಸ್ ಬಲಿಷ್ಠ ತಂಡ ಪ್ರಕಟ!ದಕ್ಷಿಣ ಆಫ್ರಿಕಾ ವಿರುದ್ಧದ ಟಿ20ಐಗೆ ವೆಸ್ಟ್ ಇಂಡೀಸ್ ಬಲಿಷ್ಠ ತಂಡ ಪ್ರಕಟ!

ಆಯ್ಕೆಯಾಗಲಿರುವ ಐವರೂ ಕ್ರೀಡಾಪಟುಗಳು ರಾಜ್ಯದ, ರಾಷ್ಟ್ರದ ಕೀರ್ತಿಪತಾಕೆಯನ್ನು ಜಪಾನ್‌ನ ಟೋಕಿಯೋದಲ್ಲಿ ಹಾರಿಸಲಿ. ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲಬೇಕೆಂದರೆ ಅಲ್ಲಿ ಸಾಕಷ್ಟು ಶ್ರಮ ವಹಿಸಬೇಕು. ಹೀಗಾಗಿ ಕ್ರೀಡಾಳುಗಳಿಗೆ ತಲಾ 10 ಲಕ್ಷ ರೂ. ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದು ಗೌಡ ಮಾಹಿತಿ ನೀಡಿದ್ದಾರೆ.

Story first published: Saturday, June 26, 2021, 17:50 [IST]
Other articles published on Jun 26, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X