Paralympics: ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಪ್ರೀತಿ ಪಾಲ್
ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಅಥ್ಲೀಟ್‌ಗಳು ಅಮೋಘ ಸಾಧನೆ ಮುಂದುವರೆಸಿದ್ದಾರೆ. ಕ್ರೀಡಾ ಕೂಟದ ಎರಡನೇ ದಿನವಾದ ಶುಕ್ರವಾರ ಭಾರತ ಟ್ರ್ಯಾಕ್ ಆಂಡ್ ಫೀಲ್ಡ್ ವಿಭಾಗದಲ್ಲಿ ಒಂದು ಪದಕ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಮೂಲಕ ಪ್ರಸಕ್ತ ಒಲಿಂಪಿಕ್ಸ್‌ನಲ್ಲಿ ಭಾರತ ಮೂರು ಪದಕ ಗೆದ್ದಿದೆ. ಭಾರತಕ್ಕೆ ಮೂರನೇ ಪದಕವನ್ನು ಪ್ರೀತಿ ಪಾಲ್ ತೊಡಿಸಿದ್ದಾರೆ.
ಪ್ರೀತಿ ಪಾಲ್ 100 ಮೀಟರ್ ಓಟದಲ್ಲಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. 23 ವರ್ಷದ ಪ್ರೀತಿ ಮಹಿಳೆಯರ 100 ಮೀಟರ್ ಟಿ-35 ಫೈನಲ್‌ನಲ್ಲಿ ಮೂರನೇ ಸ್ಥಾನ ಪಡೆದರು. ಇದರೊಂದಿಗೆ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಟ್ರ್ಯಾಕ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮಹಿಳೆಯರ 10 ಮೀಟರ್ ಏರ್ ರೈಫಲ್ SH1 ಫೈನಲ್‌ನಲ್ಲಿ ಅವನಿ ಲೆಖರಾ ಚಿನ್ನ, ಮೋನಾ ಅಗರವಾಲ್ ಕಂಚು ಪಡೆದಿದ್ದರು.

Story first published: Friday, August 30, 2024, 17:58 [IST]
Other articles published on Aug 30, 2024
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications