Paris Paralympics 2024: ಉದ್ಘಾಟನಾ ಸಮಾರಂಭಕ್ಕೆ ಭಾರತದ ಧ್ವಜಧಾರಿಗಳಾಗಿ ಭಾಗ್ಯಶ್ರೀ -ಸುಮಿತ್ ಆಯ್ಕೆ
ಆಗಸ್ಟ್ 16 ಶುಕ್ರವಾರ, ಮುಂಬರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ 2024ರ ಉದ್ಘಾಟನಾ ಸಮಾರಂಭಕ್ಕೆ ಭಾರತ ಧ್ವಜಧಾರಿಗಳನ್ನು ಘೋಷಿಸಿದೆ. ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಉದ್ಘಾಟನಾ ಸಮಾರಂಭಕ್ಕೆ ಭಾರತದ ಶಾಟ್‌ಪುಟ್ ತಾರೆ ಭಾಗ್ಯಶ್ರೀ ಜಾಧವ್ ಮತ್ತು ಸ್ಟಾರ್ ಜಾವೆಲಿನ್ ಎಸೆತಗಾರ ಸುಮಿತ್ ಆಂಟಿಲ್ ಧ್ವಜಧಾರಿಗಳಾಗಿ ಆಯ್ಕೆಯಾಗಿದ್ದಾರೆ.
ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ ಭಾರತದ 84 ಸದಸ್ಯರ ತಂಡವನ್ನು ಭಾಗ್ಯಶ್ರೀ ಮತ್ತು ಸುಮಿತ್ ಪರೇಡ್ ಆಫ್ ನೇಷನ್‌ನಲ್ಲಿ ಮುನ್ನಡೆಸಲಿದ್ದಾರೆ. ಕಳೆದ ಬಾರಿ 2020ರ ಟೋಕಿಯೊ ಒಲಿಂಪಿಕ್ಸ್‌ಗೆ 54 ಸದಸ್ಯರ ತಂಡವನ್ನು ಭಾರತ ಕಳುಹಿಸಿತ್ತು. ಈ ಬಾರಿ ಪ್ಯಾರಿಸ್‌ಗೆ 84 ಸದಸ್ಯರ ತಂಡವನ್ನು ಕಳುಹಿಸುತ್ತಿರುವುದು ಭಾರತಕ್ಕೆ ವಿಶೇಷ ಕ್ಷಣವಾಗಿದೆ. ಪ್ಯಾರಿಸ್ ಪ್ಯಾರಾಲಿಂಪಿಕ್ ಗೇಮ್ಸ್ ಆಗಸ್ಟ್ 28 ರಿಂದ ಸೆಪ್ಟೆಂಬರ್ 8 ರವರೆಗೆ ನಡೆಯಲಿವೆ.

ಭಾಗ್ಯಶ್ರೀ ಜಾಧವ್ ಯಾರು?
ಮಹಾರಾಷ್ಟ್ರದ ಮೂಲದ ಭಾಗ್ಯಶ್ರೀ ಜಾಧವ್ ಅಂತಾರಾಷ್ಟ್ರೀಯ ಮಟ್ಟದ ಶಾಟ್‌ಪುಟ್ ಸ್ಪರ್ಧೆಯಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. 2022ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಶಾಟ್‌ಪುಟ್ ಎಫ್34 ವಿಭಾಗದಲ್ಲಿ ಬೆಳ್ಳಿ ಪದಕವನ್ನು ಗೆದ್ದರೆ, ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ 7ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
2017ರಲ್ಲಿ ತಮ್ಮ ಕ್ರೀಡಾ ಪ್ರಯಾಣ ಆರಂಭಿಸಿದ ಭಾಗ್ಯಶ್ರೀ ಫೆಝಾ ವಿಶ್ವಕಪ್ ಮತ್ತು ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗೇಮ್ಸ್ ಸೇರಿದಂತೆ ವಿವಿಧ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಪದಕಗಳನ್ನು ಗೆಲ್ಲುವ ಮೂಲಕ ತಮ್ಮ ಛಾಪು ಮೂಡಿಸಿದ್ದಾರೆ. ಇದೀಗ ಪ್ಯಾರಿಸ್ ಪ್ಯಾರಾಲಿಂಪಿಕ್‌ನಲ್ಲಿ ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.
ಸುಮಿತ್ ಆಂಟಿಲ್ ಯಾರು?
ಭಾರತದ ಸ್ಟಾರ್ ಪ್ಯಾರಾ ಜಾವೆಲಿನ್ ಎಸೆತಗಾರ ಸುಮಿತ್ ಆಂಟಿಲ್ ಎಫ್64 ವಿಭಾಗದಲ್ಲಿ ಪ್ರಸ್ತುತ ವಿಶ್ವ ದಾಖಲೆ ಹೊಂದಿದ್ದಾರೆ. ಅವರು ಟೋಕಿಯೊ ಪ್ಯಾರಾಲಿಂಪಿಕ್ಸ್ 2020 ರಲ್ಲಿ ವಿಶ್ವ ದಾಖಲೆಯ 68.55 ಮೀಟರ್ ಎಸೆಯುವ ಮೂಲಕ ಚಿನ್ನದ ಪದಕವನ್ನು ಗೆದಿದ್ದಾರೆ.
ಆಂಟಿಲ್ ಅವರು 2023 ರ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದಾಖಲೆ ಬರೆದಿದ್ದರು. ಇದಕ್ಕೂ ಮುನ್ನ 2022 ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ 73.29 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಹೊಸ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದರು.
ಹೆಚ್ಚು ಪದಕದ ಮೇಲೆ ಭಾರತದ ಕಣ್ಣು
ಭಾರತವು ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ 19 ಪದಕಗಳನ್ನು ಗೆದ್ದಿತ್ತು. ಈಗ ಪ್ಯಾರಿಸ್‌ನಲ್ಲಿ ಭಾರತದ ಗುರಿ ಹೆಚ್ಚು ಪದಕಗಳನ್ನು ಗೆಲ್ಲುವ ಕಡೆ ಇದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಕೇವಲ 6 ಪದಕಗಳೊಂದಿಗೆ 71ನೇ ಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications