For Quick Alerts
ALLOW NOTIFICATIONS  
For Daily Alerts

Paralympics 2024 Archery: ಹರ್ವಿಂದರ್ ಸಿಂಗ್‌ ಬಂಗಾರದ ನಗು

ಪ್ಯಾರಿಸ್‌ನಲ್ಲಿ ಭಾರತೀಯ ಅಥ್ಲೀಟ್‌ಗಳ ಅಮೋಘ ಪ್ರದರ್ಶನ ಮುಂದುವರೆದಿದೆ. ಬುಧವಾರ ನಡೆದ ಪುರುಷರ ವೈಯಕ್ತಿಕ ರಿಕರ್ವ್ ಫೈನಲ್‌ ಪಂದ್ಯದಲ್ಲಿ ಭಾರತದ ಹರ್ವಿಂದರ್ ಸಿಂಗ್ ಭರ್ಜರಿ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಭಾರತ ಪಡೆದ ಪದಕಗಳ ಸಂಖ್ಯೆ 22ಕ್ಕೆ ಏರಿಕೆ ಆಗಿದೆ.

ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಪಡೆದು ಭರವಸೆ ಮೂಡಿಸಿದ್ದ ಆರ್ಚರಿ ಅಥ್ಲೀಟ್‌ ಹರ್ವಿಂದರ್‌ ಸಿಂಗ್‌ ಸ್ಥಿರ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಭಾರತ ಪ್ಯಾರಿಸ್ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್‌ನಲ್ಲಿ ಆರ್ಚರಿಯಲ್ಲಿ ಮೊದಲ ಬಂಗಾರದ ಸಾಧನೆಯನ್ನು ಮಾಡಿದೆ.

Paris Paralympics 2024 Harvinder Singh Clinches Gold in Recurve Archery

ಚಿನ್ನದ ಸಾಧನೆ

ಫೈನಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಹರ್ವಿಂದರ್ ಸಿಂಗ್‌, ಪೋಲೆಂಡ್‌ನ ಲುಕಾಸ್ ಸಿಸ್ಜೆಕ್ ಆಟಗಾರನನ್ನು ಸೋಲಿಸಿದರು. ಪದಕದ ಸುತ್ತಿನ ಪಂದ್ಯದಲ್ಲಿ ಹರ್ವಿಂದರ್ 28-24, 28-27, 29-25 ರಿಂದ ಪೋಲೆಂಡ್‌ ಆಟಗಾರನನ್ನು ಮಣಿಸಿ, 6-0ಯಿಂದ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ಇದಕ್ಕೂ ಮೊದಲು ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಹರ್ವಿಂದರ್‌ ಮೊದಲ ಸೆಟ್‌ ಹಾಗೂ ಎರಡನೇ ಸುತ್ತಿನಲ್ಲಿ ಕೊಂಚ ಅಂಕಗಳನ್ನು ಕಲೆ ಹಾಕುವಲ್ಲಿ ಹಿಂದೆ ಬಿದ್ದರು. ಈ ವೇಳೆ ಸ್ಕೋರ್‌ 1-3 ಆಗಿತ್ತು. ಆದರೆ ಮೂರನೇ, ನಾಲ್ಕನೇ ಹಾಗೂ ಐದನೇ ಸುತ್ತಿನಲ್ಲಿ ಅಮೋಘ ಆಟದ ಪ್ರದರ್ಶನ ನೀಡಿದ ಹರ್ವಿಂದರ್‌ 7-3ರಿಂದ ಜಯ ಸಾಧಿಸಿ, ಫೈನಲ್‌ಗೆ ಅರ್ಹತೆ ಪಡೆದಿದ್ದರು.

ಇನ್ನೂ ಒಂದು ಪದಕದ ಭರವಸೆ

ಪುರುಷರ ವೈಯಕ್ತಿಕ ರಿಕರ್ವ್ ನಲ್ಲಿ ಚಿನ್ನದ ಸಾಧನೆ ಮಾಡಿರುವ ಹರ್ವಿಂದರ್ ಸಿಂಗ್ ಅವರು, ಪ್ರಸಕ್ತ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮತ್ತೊಂದು ಪದಕ ಗೆಲ್ಲುವ ಸಾಧ್ಯತೆ ಇದೆ. ಹರ್ವಿಂದರ್‌ ಸಿಂಗ್, ಪೂಜಾ ಜಟಾಯನ್ ಅವರೊಂದಿಗೆ ರಿಕರ್ವ್ ಆರ್ಚರಿ ಮಿಶ್ರ ತಂಡ ವಿಭಾಗದಲ್ಲಿ ಸ್ಪರ್ಧೆ ನಡೆಸಲಿದ್ದಾರೆ. ಮಿಶ್ರ ತಂಡದಲ್ಲಿ ಭಾರತದ ಅಥ್ಲೀಟ್‌ಗಳು ಗುರುವಾರ ಅಂಗಳ ಪ್ರವೇಶಿಸಲಿದ್ದಾರೆ. ಹರ್ವಿಂದರ್‌ ಈ ಸ್ಪರ್ಧೆಯಲ್ಲೂ ಚಿನ್ನದ ಸಾಧನೆ ಮಾಡುವಲ್ಲಿ ಯಶಸ್ವಿಯಾದರೆ, ಒಂದೇ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಎರಡು ಚಿನ್ನದ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಭಾರತಕ್ಕೆ 22 ಪದಕ

ಹರ್ವಿಂದರ್ ಸಿಂಗ್ ಆರ್ಚರಿಯಲ್ಲಿ ಚಿನ್ನದ ಪದಕವನ್ನು ಗೆಲ್ಲುವುದರೊಂದಿಗೆ, ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಭಾರತವು 22 ಪದಕಗಳನ್ನು ಪಡೆದು ದಾಖಲೆ ಬರೆದಿದೆ. ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಇದುವರೆಗಿನ ಭಾರತದ ಅತ್ಯುತ್ತಮ ಪ್ರದರ್ಶನ ಇದಾಗಿದೆ. ಭಾರತ 4 ಚಿನ್ನ, 8 ಬೆಳ್ಳಿ ಹಾಗೂ 10 ಕಂಚು ಗೆದ್ದಿದ್ದು ಈ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಇದೆ.

Story first published: Thursday, September 5, 2024, 0:42 [IST]
Other articles published on Sep 5, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+