ಏಷ್ಯನ್ ಗೇಮ್ಸ್ ನಲ್ಲಿ ಪಾಲ್ಗೊಳ್ಳುವ ಭಾರತ ತಂಡಕ್ಕೆ ಮೋದಿ ಶುಭ ಹಾರೈಕೆ

ನವದೆಹಲಿ, ಆಗಸ್ಟ್ 18: ಇಂಡೋನೇಷ್ಯಾದ ಜಕಾರ್ತಾದಲ್ಲಿ ಇಂದು (ಆಗಸ್ಟ್ 18) ಆರಂಭಗೊಂಡಿರುವ 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ಭಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ.
'ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 2018ರ ಏಷ್ಯನ್ ಗೇಮ್ಸ್ ಗಾಗಿ ತೆರಳಿರುವ ಭಾರತ ತಂಡಕ್ಕೆ ಶುಭ ಹಾರೈಕೆಗಳು. ನಮ್ಮ ಕ್ರೀಡಾಪಟುಗಳ ಬಗ್ಗೆ ನಮಗೆ ಅತೀವ ಹೆಮ್ಮೆಯಿದೆ. ಸ್ಪರ್ಧೆಗಳ ಮೂಲಕ ಅವರು ಉತ್ತಮ ಪ್ರದರ್ಶನ ನೀಡುತ್ತಾರೆಂದು ನಮಗೆ ಭರವಸೆಯಿದೆ' ಎಂದು ಮೋದಿ ಸ್ವೀಟ್ ಮಾಡಿದ್ದಾರೆ.
ಇಂಡೋನೇಷ್ಯಾದ ಕೇಂದ್ರವಾದ ಜಕಾರ್ತಾ ಮತ್ತು ಪಾಲೆಂಬಂಗ್ ನಲ್ಲಿ ಗೇಮ್ಸ್ ಆರಂಭೊತ್ಸವ ನಡೆದಿದೆ. 45 ರಾಷ್ಟ್ರಗಳಿಂದ ಸುಮಾರು 11,000 ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರತಿಷ್ಠಿತ ಈ ಕ್ರೀಡಾಕೂಟ ಸೆಪ್ಟೆಂಬರ್ 2ರ ವರೆಗೆ ನಡೆಯಲಿದೆ.
ಈ ಬಾರಿ ಭಾರತ ತಂಡದಿಂದ 572 ಕ್ರೀಡಾಪಟುಗಳು ಸ್ಪರ್ಧಿಸುತ್ತಿದ್ದಾರೆ. 2014ರಂದು ಸೌತ್ ಕೊರಿಯಾದ ಇಂಚಿಯಾನ್ ನಲ್ಲಿ ನಡೆದಿದ್ದ ಏಷ್ಯಾನ್ ಗೇಮ್ಸ್ ಕೂಟದಲ್ಲಿ ಭಾರತಕ್ಕೆ ಒಟ್ಟು 57 ಪದಕಗಳು ಲಭಿಸಿದ್ದವು. ಇದರಲ್ಲಿ 11 ಬಂಗಾರ ಸೇರಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications