Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಐಒಸಿ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಭಾರತ ಅಧ್ಯಕ್ಷತೆ ವಹಿಸಿದ್ದ ಜಿ-20 ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಈಗಾಗಲೇ ಎಲ್ಲೆಡೆಯಿಂದ ಮೆಚ್ಚುಗೆ ಕೇಳಿಬಂದಿದೆ. ಆ ಯಶಸ್ವಿ ಸಮಾವೇಶದ ನಂತರ ಇದೀಗ ಭಾರತದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ನಡೆಯಲಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ (IOC) 141ನೇ ಅಧಿವೇಶನ ಮುಂಬೈನಲ್ಲಿ ಇರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಇದೇ ಅಕ್ಟೋಬರ್ 15ನೇ ತಾರೀಕಿನಿಂದ 17ರ ತನಕ ನಡೆಯಲಿದೆ. ಅಕ್ಟೋಬರ್ 14ರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಐಒಸಿ ಅಧಿವೇಶನದ ಉದ್ಘಾಟನೆ ಆಗಲಿದೆ. ಇದರಲ್ಲಿ ಕ್ರೀಡೆಗೆ ಸಂಬಂಧಿಸಿದಂತೆ ಭಾರತ ಮತ್ತು ವಿದೇಶದ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಕತಾರ್, ಜೋರ್ಡಾನ್, ಮೊನಾಕೊ, ಲಕ್ಸಂಬರ್ಗ್ ಮತ್ತು ಭೂತಾನ್ ದೇಶಗಳ ಮುಖ್ಯಸ್ಥರು, ಗ್ರೇಟ್ ಬ್ರಿಟನ್ ಮತ್ತು ಲಿಕ್ಟನ್ ಸ್ಟೈನ್‌ನ ರಾಜಮನೆತನದ ಸದಸ್ಯರೊಂದಿಗೆ ಈ ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ ಆಗಲಿದ್ದಾರೆ.

PM Narendra Modi will inaugurate the IOC session at the Jio World Center in Mumbai

ಒಲಿಂಪಿಕ್ ಕ್ರೀಡೆಯಲ್ಲಿ ಈಜು ವಿಭಾಗದಲ್ಲಿ ಏಳು ಬಾರಿ ಪದಕ ವಿಜೇತ ಕಿರ್ಸ್ಟಿ ಕೊವೆಂಟ್ರಿ, ಎರಡು ಬಾರಿ ಒಲಿಂಪಿಕ್ ಪೋಲ್ ವಾಲ್ಟ್ ಚಿನ್ನದ ಪದಕ ವಿಜೇತೆ ಯೆಲೆನಾ ಇಸೆನ್‌ಬಾಯೆವಾ, ಒಲಿಂಪಿಕ್ 10,000 ಮೀಟರ್ ವಿಭಾಗದ ಎರಡು ಬಾರಿ ಬೆಳ್ಳಿ ಪದಕ ವಿಜೇತರು ಮತ್ತು ಕೀನ್ಯಾದ ರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧ್ಯಕ್ಷರಾದ ಪಾಲ್ ತುರ್ಗಾಟ್, ಒಲಿಂಪಿಕ್ ಪೋಲ್ ವಾಲ್ಟ್ ಚಿನ್ನದ ಪದಕ ವಿಜೇತರಾದ ಸೆರ್ಗೆಯ್ ಬುಬ್ಕಾ ಮತ್ತು ಒಲಿಂಪಿಕ್ ಶೂಟಿಂಗ್ ಚಾಂಪಿಯನ್ ಅಭಿನವ್ ಬಿಂದ್ರಾ, ಒಲಂಪಿಕ್ 1500 ಮೀ ಚಾಂಪಿಯನ್ ಮತ್ತು ವಿಶ್ವ ಅಥ್ಲೆಟಿಕ್ಸ್ ಅಧ್ಯಕ್ಷರಾದ ಸೆಬಾಸ್ಟಿಯನ್ ಕೋ ಮತ್ತು ಫಿಫಾ ಅಧ್ಯಕ್ಷರಾದ ಗಿಯಾನಿ ಇನ್ಫಾಂಟಿನೊ ಸಹ ಈ ಸಂದರ್ಭದಲ್ಲಿ ಹಾಜರಿರುತ್ತಾರೆ.

ಇವರ ಜತೆಗೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧ್ಯಕ್ಷ ಥಾಮಸ್ ಬಾಖ್, ಭಾರತೀಯ ಒಲಿಂಪಿಕ್ ಸಂಸ್ಥೆ ಸೇರಿದಂತೆ ವಿವಿಧ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

2022ರ ಫೆಬ್ರವರಿಯಲ್ಲಿ ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ನೀತಾ ಅಂಬಾನಿ ನೇತೃತ್ವದಲ್ಲಿ ಐಒಸಿ ಅಧಿವೇಶನಕ್ಕಾಗಿ ಬಿಡ್ಡಿಂಗ್ ನಲ್ಲಿ ಭಾಗವಹಿಸಲಾಯಿತು. ಈ ಐತಿಹಾಸಿಕ ಸಭೆಯಲ್ಲಿ ಭಾರತದ ಪರವಾಗಿ 75 ಮತಗಳು ಚಲಾವಣೆಯಾಗಿದ್ದು, ವಿರೋಧವಾಗಿ ಕೇವಲ 1 ಮತ ಚಲಾವಣೆಯಾಯಿತು. 40 ವರ್ಷಗಳ ನಂತರ ಭಾರತದಲ್ಲಿ ಈ ಬಾರಿಯ ಐಒಸಿ ಅಧಿವೇಶನ ನಡೆಯುತ್ತಿದ್ದು, ಈ ಅಂಶದಿಂದಲೇ ಸಭೆ ಎಷ್ಟು ಮಹತ್ವದ್ದಾಗಿದೆ ಎಂಬುದನ್ನು ಅಳೆಯಬಹುದು.

ಐಒಸಿ ಅಧಿವೇಶನವು ಒಲಿಂಪಿಕ್ ಕ್ರೀಡಾಕೂಟದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಸರ್ವೋಚ್ಚ ಸಂಸ್ಥೆಯಾಗಿದೆ. ಇದು ಒಲಿಂಪಿಕ್ ಚಾರ್ಟರ್ ಅನ್ನು ಅಳವಡಿಸಿಕೊಳ್ಳುವುದು ಅಥವಾ ಪರಿಷ್ಕರಿಸುವುದು, ಐಒಸಿ ಸದಸ್ಯರು ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡುವುದು ಹಾಗೂ ಒಲಿಂಪಿಕ್ಸ್‌ನ ಆತಿಥೇಯ ನಗರವನ್ನು ಆಯ್ಕೆ ಮಾಡುವುದು ಒಳಗೊಂಡಿರುತ್ತದೆ. ಉದಾಹರಣೆಗೆ, ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಸೇರಿಸುವ ಚರ್ಚೆಯು ಭರದಿಂದ ಸಾಗುತ್ತಿದೆ ಮತ್ತು ಅದನ್ನು 2028ರ ಲಾಸ್ ಏಂಜಲೀಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಸೇರಿಸಲು ನಿರ್ಧಾರ ತೆಗೆದುಕೊಂಡಲ್ಲಿ ಮುಂಬೈನಲ್ಲಿ ನಡೆಯುವ ಐಒಸಿ ಅಧಿವೇಶನದಲ್ಲಿ ಅದನ್ನು ಘೋಷಿಸಲಾಗುತ್ತದೆ.

Story first published: Friday, October 13, 2023, 19:04 [IST]
Other articles published on Oct 13, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+