Ram mandir: ರಾಮ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಭಾಗಿ, ಗಮನ ಸೆಳೆಯುತ್ತಿದೆ ವೀರೇಂದ್ರ ಸೆಹ್ವಾಗ್ ಪೋಸ್ಟ್
ಸೋಮವಾರ ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ಆಯೋಜಿಸಲಾಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆ ತಲುಪಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆ ತಲುಪಿದ್ದಾರೆ.
ಈ ಕಾರ್ಯಕ್ರಮಕ್ಕೆ ಭಾರತದ ಹಲವು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಆಗಮಿಸಿದ್ದಾರೆ. ಸೋಮವಾರ ಬೆಳಗ್ಗೆ ಮುಂಬೈನಿಂದ ತೆರಳಿದ್ದರು. ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ರಾಮ ಮಂದಿರದ ಬಗ್ಗೆ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಅಭಿಮಾನಿಗಳ ಪ್ರತಿಕ್ರಿಯೆಯೂ ಕಂಡು ಬಂದಿದೆ. ಸೆಹ್ವಾಗ್ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಸೋಮವಾರಕ್ಕಾಗಿ ಕಾತರದಿಂದ ಕಾಯುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. "ಬಹುಶಃ ಇದು ಸೋಮವಾರದಂದು ತುಂಬಾ ಕುತೂಹಲದಿಂದ ಕಾಯುತ್ತಿರುವ ಮೊದಲ ಭಾನುವಾರವಾಗಿದೆ. ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್." ಸೆಹ್ವಾಗ್ ಅವರ ಈ ಪೋಸ್ಟ್ ಅನ್ನು ಸಾವಿರಾರು ಜನರು ಇಷ್ಟಪಟ್ಟಿದ್ದಾರೆ. ಈ ಬಗ್ಗೆ ಅಭಿಮಾನಿಗಳು ಕೂಡ ಸಾಕಷ್ಟು ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.
ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಕೂಡ ಅಯೋಧ್ಯೆ ತಲುಪಿದ್ದಾರೆ. ಅಯೋಧ್ಯಾ ತಲುಪಿದ ಬಳಿಕ ವೆಂಕಟೇಶ್ ಪ್ರಸಾದ್ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಕ್ರಿಕೆಟ್ ದೇವರು ಖ್ಯಾತಿಯ ಸಚಿನ್ ತೆಂಡೂಲ್ಕರ್ ಅವರು ಸಂಪ್ರದಾಯಿಕ ಉಡುಗೆಯಲ್ಲಿ ರಾಮ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಲಂಡನ್ ಓಲಿಂಪಿಕ್ಸ್‌ನಲ್ಲಿ ಕಂಚಿನ ಸಾಧನೆ ಮಾಡಿರುವ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಕೂಡ ಅಯೋಧ್ಯೆಯಲ್ಲಿದ್ದಾರೆ. ಇದು ನಮಗೆಲ್ಲರಿಗೂ ಬಹಳ ದೊಡ್ಡ ದಿನವಾಗಿದೆ. ಇಲ್ಲಿಗೆ ಬರುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ರಾಮ್ ಜಿಯವರ ದರ್ಶನ ಆಗುತ್ತದೆ. ನಾವೆಲ್ಲರೂ ದರ್ಶನ ಪಡೆಯುವ ಕ್ಷಣಕ್ಕಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರನ್ನು ರಾಮಮಂದಿರ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಮಾಧ್ಯಮಗಳ ವರದಿ ಪ್ರಕಾರ ಕೊಹ್ಲಿ ಅಯೋಧ್ಯೆ ತಲುಪಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಟೀಮ್ ಇಂಡಿಯಾದ ಮಾಜಿ ಕೋಚ್ ಅನಿಲ್ ಕುಂಬ್ಳೆ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಈ ಬಗ್ಗೆ ತಮ್ಮ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಬಾಲಿವುಡ್ ನ ಶ್ರೇಷ್ಠ ನಟರಾದ ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್ ಕೂಡ ಆಗಮಿಸಿದ್ದಾರೆ. ಮಾಧುರಿ ದೀಕ್ಷಿತ್ ಮತ್ತು ಅನುಪಮ್ ಖೇರ್ ಕೂಡ ಆಗಮಿಸಿದ್ದಾರೆ. ರಣಬೀರ್ ಕಪೂರ್, ಆಲಿಯಾ ಭಟ್, ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ರಾಮಮಂದಿರವನ್ನು ತಲುಪಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications