ರಿಯೋ ಪ್ಯಾರಾಲಿಂಪಿಕ್ಸ್ : ಭಾರತಕ್ಕೆ ಮತ್ತೊಂದು ಚಿನ್ನ

By ಕ್ರೀಡಾ ಡೆಸ್ಕ್

ರಿಯೋ ಡಿ ಜನೈರೋ ಸೆ 14 : ಬ್ರೆಜಿಲ್‌ನ ರಿಯೋ ಡಿ ಜನೈರೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಲಭಿಸಿದೆ. ಕ್ರೀಡಾಕೂಟದಲ್ಲಿ ಇದುವರೆಗೂ ಭಾರತ 4 ಪದಕಗಳನ್ನು ಪಡೆದಿದೆ.

ಪುರುಷರ ಜಾವೆಲಿನ್ ಥ್ರೋನಲ್ಲಿ ರಾಜಸ್ಥಾನ ಮೂಲದ ದೇವೇಂದ್ರ ಜಝಾರಿಯಾ ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಗಳಿಸಿದ್ದಾರೆ. ಇದರೊಂದಿಗೆ ಭಾರತ ರಿಯೋ ಪ್ಯಾರಾಲಿಂಪಿಕ್ಸ್ ನ ಪದಕ ಪಟ್ಟಿಯಲ್ಲಿ ಎರಡನೇ ಚಿನ್ನದ ಪದಕ ಪಡೆದಂತಾಗಿದೆ.

Devendra Jhajharia

ಪುರುಷರ ಎಫ್ 46 ವಿಭಾಗದಲ್ಲಿ 63.97 ಮೀಟರ್ ಜಾವೆಲಿನ್ ಎಸೆದು ದಾಖಲೆಯೊಂದಿಗೆ ದೇವೇಂದ್ರ ಅವರು ಚಿನ್ನದ ಪದಕ ಪಡೆದಿದ್ದಾರೆ. 2004 ರ ಅಥೆನ್ಸ್ ಗೇಮ್ಸ್ ನಲ್ಲಿ ಇವರು 62.15 ಮೀ. ಜಾವೆಲಿನ್ ಎಸೆದು ದಾಖಲೆ ಮಾಡಿದ್ದರು.

ತಮ್ಮ ಹೆಸರಿನಲ್ಲಿದ್ದ ಹಳೆಯ ದಾಖಲೆಯನ್ನು ಪ್ಯಾರಾಲಿಂಪಿಕ್ಸ್‌ನಲ್ಲಿ ಮುರಿದು ದೇವೇಂದ್ರ ಚಿನ್ನಕ್ಕೆ ಕೊರಳೊಡಿದ್ದಾರೆ. ಮರಿಯಪ್ಪನ್ ತಂಗವೇಲ್ ಮತ್ತು ವರುಣ್ ಭಾಟಿ ಅವರು ಕ್ರೀಡಾಕೂಟದಲ್ಲಿ ಪುರುಷರ ಹೈ ಜಂಪ್‌ನಲ್ಲಿ ಕ್ರಮವಾಗಿ ಚಿನ್ನ ಹಾಗೂ ಕಂಚಿನ ಪದಕ ಪಡೆದಿದ್ದರು.

ದೇವೇಂದ್ರ ಅವರ ಸಾಧನೆಗೆ ಪ್ರಧಾನಿ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ

ಮಹಿಳೆಯರ ಶಾಟ್ ಪುಟ್ ವಿಭಾಗದಲ್ಲಿ ಭಾರತದ ಹೆಮ್ಮೆಯ ಪುತ್ರಿ ದೀಪಾ ಮಲಿಕ್ ಬೆಳ್ಳಿ ಪದಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದರು. ಭಾರತಕ್ಕೆ ಪ್ಯಾರಾಲಿಂಪಿಕ್ಸ್ ನಲ್ಲಿ 2 ಚಿನ್ನ, 1 ಬೆಳ್ಳಿ ಹಾಗೂ 1 ಕಂಚಿನ ಪದಕ ಸಿಕ್ಕಿದೆ.

For Quick Alerts
ALLOW NOTIFICATIONS
For Daily Alerts

    Story first published: Wednesday, September 14, 2016, 10:03 [IST]
    Other articles published on Sep 14, 2016
    POLLS

    myKhel ನಿಂದ ತಾಜಾ ಸುದ್ದಿಗಳನ್ನು ಪಡೆಯಿರಿ

    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Mykhel sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Mykhel website. However, you can change your cookie settings at any time. Learn more