ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಮತ್ತೆ ಅಂಗಳದಲ್ಲಿ ಜೊತೆಯಾದ ಧೋನಿ, ಸಚಿನ್: ಆದರೆ ಕ್ರಿಕೆಟ್ ಮೈದಾನದಲ್ಲಿ ಅಲ್ಲ!

Sachin Tendulkar and MS Dhoni Reunion in Tennis Court for special Tennis Match

ಭಾರತೀಯ ಕ್ರಿಕೆಟ್‌ನ ಇಬ್ಬರು ದಿಗ್ಗಜ ಆಟಗಾರರಾದ ಸಚಿನ್ ತೆಂಡೂಲ್ಕರ್ ಹಾಗೂ ಎಂಎಸ್ ಧೋನಿ ಮತ್ತೆ ಮೈದಾನದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಆದರೆ ಈ ದಿಗ್ಗಜರಿಬ್ಬರು ಜೊತೆಯಾಗಿದ್ದು ಕ್ರಿಕೆಟ್ ಮೈದಾನದಲ್ಲಿ ಅಲ್ಲ, ಬದಲಾಗಿ ಟೆನಿಸ್ ಅಂಗಳದಲ್ಲಿ. ಜಾಹೀರಾತಿನ ಶೂಟಿಂಗ್‌ಗಾಗಿ ಈ ಇಬ್ಬರು ಆಟಗಾರರು ಭಾಗವಹಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಈ ಇಬ್ಬರು ಫೋಟೋಗಳು ಬಹಳಷ್ಟು ವೈರಲ್ ಆಗಿದೆ.

ಈ ಇಬ್ಬರು ಕ್ರಿಕೆಟಿಗರು ಕೂಡ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. ಅದರಲ್ಲಿ ಎಂಎಸ್ ಧೋನಿ 2011ರ ಏಕದಿನ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾವನ್ನು ನಾಯಕನಾಗಿ ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದರು. 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್ ಗೆದ್ದ ಈ ಭಾರತ ತಂಡದಲ್ಲಿ ಸಚಿನ್ ತೆಂಡೂಲ್ಕರ್ ಹಿರಿಯ ಆಟಗಾರನಾಗಿ ಪ್ರಮುಖ ಭಾಗವಾಗಿದ್ದರು.

T20 World Cup: ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ಭಾರತ ತಂಡಕ್ಕೆ ದೊಡ್ಡ ಸಮಸ್ಯೆಯಲ್ಲ ಎಂದ ಮಾಜಿ ಆಟಗಾರT20 World Cup: ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ಭಾರತ ತಂಡಕ್ಕೆ ದೊಡ್ಡ ಸಮಸ್ಯೆಯಲ್ಲ ಎಂದ ಮಾಜಿ ಆಟಗಾರ

ಸಚಿನ್ ತೆಂಡೂಲ್ಕರ್ ಹಾಗೂ ಎಂಎಸ್ ಧೋನಿ ಟೆನಿಸ್ ಅಂಗಳದಲ್ಲಿ ಜೊತೆಯಾಗಿ ಕಾಣಿಸಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈಲರ್ ಆಗಿದೆ. ಇಬ್ಬರು ಕ್ರಿಕೆಟ್ ದಿಗ್ಗಜರು ಕೈಯಲ್ಲಿ ರಾಕೆಟ್‌ಗಳೊಂದಿಗೆ ಟೆನಿಸ್ ಕೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲ ಚಿತ್ರಗಳಲ್ಲಿ ಈ ಜೋಡಿ ಮಾತುಕತೆಯಲ್ಲಿ ತೊಡಗಿರುವುದನ್ನು ಕೂಡ ಕಾಣಬಹುದಾಗಿದೆ.

ಐಪಿಎಲ್‌ನಲ್ಲಿ ಸಕ್ರಿಯವಾಗಿದ್ದಾರೆ ಧೋನಿ: ಎಂಎಸ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ 2020ರಲ್ಲಿ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆದರೆ ಅದಾದ ಬಳಿಕವೂ ಮಾಹಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಇನ್ನು ಮತ್ತೊಂದೆಡೆ ಸಚಿನ್ ತೆಂಡೂಲ್ಕರ್ 2013ರಲ್ಲಿಯೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆದರೆ ಇತ್ತೀಚೆಗೆ ರೋಡ್‌ ಸೇಫ್ಟಿ ವರ್ಲ್ಡ್ ಸಿರೀಸ್‌ನಲ್ಲಿ ಇಂಡಿಯಾ ಲೆಜೆಂಡ್ಸ್ ತಂಡದ ಪರವಾಗಿ ಆಡುತ್ತಿದ್ದು ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಮೂಲಕ ಮತ್ತೊಮ್ಮೆ ಸಚಿನ್ ತೆಂಡೂಲ್ಕರ್ ಬ್ಯಾಟಿಂಗ್‌ಅನ್ನು ಆಸ್ವಾದಿಸುವ ಅವಕಾಶ ಭಾರತೀಯ ಕ್ರಿಕೆಟಿಗರಿಗೆ ದೊರೆಯುತ್ತಿದೆ.

ಅಗ್ನಿ ಪರೀಕ್ಷೆಗೆ ಸಿದ್ದವಾದ 3 ಕ್ರಿಕೆಟಿಗರು: ದ. ಆಫ್ರಿಕಾ ವಿರುದ್ಧ ಏಕದಿನ ಸರಣಿ ಈ ಮೂವರ ಪಾಲಿಗೆ ಅತ್ಯಂತ ಮಹತ್ವಅಗ್ನಿ ಪರೀಕ್ಷೆಗೆ ಸಿದ್ದವಾದ 3 ಕ್ರಿಕೆಟಿಗರು: ದ. ಆಫ್ರಿಕಾ ವಿರುದ್ಧ ಏಕದಿನ ಸರಣಿ ಈ ಮೂವರ ಪಾಲಿಗೆ ಅತ್ಯಂತ ಮಹತ್ವ

ಇತ್ತೀಚೆಗಷ್ಟೇ ಎಂಎಸ್ ಧೋನಿ ಯುಎಸ್ ಓಪನ್‌ನಲ್ಲಿ ಭಾರತದ ಮತ್ತೋರ್ವ ದಿಗ್ಗಜ ಕ್ರಿಕೆಟಿಗ ಕಪಿಲ್ ದೇವ್‌ ಜೊತೆಗೆ ಕಾಣಿಸಿಕೊಂಡಿದ್ದರು. ಅದಕ್ಕೂ ಮುನ್ನ ಅವರು ಈ ವರ್ಷದ ಆರಂಭದಲ್ಲಿ ವಿಂಬಲ್ಡನ್‌ನಲ್ಲಿಯೂ ಭಾಗಿಯಾಗಿ ಪಂದ್ಯವನ್ನು ಆಸವಾದಿಸಿದ್ದರು. ಇನ್ನು ಸಚಿನ್ ತೆಂಡೂಲ್ಕರ್ ಕೂಡ ಟೆನಿಸ್ ಕ್ರೀಡೆಯ ಬಗ್ಗೆ ಅಪಾರ ಅಭಿಮಾನ ಹೊಂದಿದ್ದು ಆಲ್ ಇಂಗ್ಲೆಂಡ್ ಕ್ಲಬ್‌ಗೆ ಆಗಾಗ್ಗೆ ಭೇಟಿ ನೀಡುತ್ತಾರೆ. ಜೊತೆಗೆ ಇತ್ತೀಚೆಗೆ ನಿವೃತ್ತರಾದ ರೋಜರ್ ಫೆಡರರ್ ಅವರೊಂದಿಗೆ ಸಚಿನ್ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ.

Story first published: Thursday, October 6, 2022, 17:35 [IST]
Other articles published on Oct 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X