ಸೆಪ್ಟೆಂಬರ್ 15: ಭಾರತಕ್ಕೆ ಬಾಂಗ್ಲಾ ಎದುರಾಳಿ; ಆಸಿಸ್ ವಿರುದ್ಧ ಕ್ಲಾಸೆನ್ ಅಬ್ಬರ: ಕ್ರೀಡಾ ಲೋಕದ ಇಂದಿನ ಸುದ್ದಿ
* ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಕೊನೆಯ ಪಂದ್ಯ ಇಂದು ಶ್ರೀಲಂಕಾದ ಕೊಲಂಬೋದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಭಾರೀ ಬದಲಾವಣೆಯೊಂದಿಗೆ ಕಣಕ್ಕಿಳಿದಿದ್ದು ತೀವ್ರ ಕುತೂಹಲ ಮೂಡಿಸಿದೆ. ಭಾರತ ತಂಡ ಈಗಾಗಲೇ ಫೈನಲ್‌ಗೆ ಪ್ರವೇಶ ಪಡೆದುಕೊಂಡಿರುವ ಕಾರಣ ಪ್ರಮುಕ ಆಟಗಾರರಿಗೆ ವಿಶ್ರಾಂತಿ ನೀಡಿ ಅವಕಾಶ ದೊರೆಯದ ಕೆಲ ಆಟಗಾರರಿಗೆ ಆಡುವ ಬಳಗದಲ್ಲಿ ಸ್ಥಾನವನ್ನು ನೀಡಲಾಗಿದೆ. ಟೀಮ್ ಇಂಡಿಯಾದಲ್ಲಿ ಈ ಪಂದ್ಯದಕ್ಕಾಗು ಬರೊಬ್ಬರಿ ಐದು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಯುವ ಆಟಗಾರ ತಿಲಕ್ ವರ್ಮಾ ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಏಕದಿನ ಮಾದರಿಗೆ ಪದಾರ್ಪಣೆ ಮಾಡಿದ್ದು ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬೂಮ್ರಾ ಕೂಡ ಈ ಪಂದ್ಯದಿಂದ ಹೊರಗುಳಿದಿದ್ದಾರೆ.
* ಶ್ರೀಲಂಕಾ ವಿರುದ್ಧದ ನಿರ್ಣಾಯಕ ಸೋಲಿನ ಬಳಿಕ ಪಾಕಿಸ್ತಾನ ಭಾರೀ ಆಘಾತಕ್ಕೆ ಒಳಗಾಗಿದೆ. ವಿಶ್ವಕಪ್ ಸನಿಹದಲ್ಲಿರುವಾಗ ಏಷ್ಯಾಕಪ್ ಗೆದ್ದು ಅದ್ಭುತವಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎನ್ನುವ ಲೆಕ್ಕಾಚಾರದಲ್ಲಿದ್ದ ಪಾಕಿಸ್ತಾನ ತಂಡ ಫೈನಲ್‌ಗೆ ಕೂಡ ಪ್ರವೇಶಿಸಲು ಸಾಧ್ಯವಾಗದಿರುವುದು ಆ ತಂಡಕ್ಕೆ ಭಾರೀ ಹಿನ್ನಡೆಯುಂಟು ಮಾಡಿದೆ. ಈ ಆಘಾತಕಾರಿ ಸೋಲಿನ ಬಳಿಕ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಹೇಳಿಕೆ ನೀಡಿದ್ದಾರೆ. "ನಾವು ನಮ್ಮ ಅತ್ಯುತ್ತಮ ಬೌಲಿಂಗ್ ಮಾಡಲು ನಿರ್ಧರಿಸಿದೆವು. ಕೊನೇಯದಕ್ಕಿಂತ ಹಿಂದಿನ ಓವರ್ ಮಾಡುವಂತೆ ಶಾಹೀನ್ ಅಫ್ರಿದಿಯಲ್ಲಿ ಕೇಳಿಕೊಂಡಿದ್ದೆ ಮತ್ತು ಜಮಾನ್ ಮೇಲೆ ನಂಬಿಕೆಯಿಟ್ಟೆ. ಶ್ರೀಲಂಕಾ ಇಲ್ಲಿ ಬಹಳ ಅದ್ಭಯತವಾಗಿ ಆಡಿದೆ. ನಮಗಿಂತ ಅವರು ಉತ್ತಮ ಕ್ರಿಕೆಟ್ ಆಡಿದರು" ಎಂದು ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಹೇಳಿಕೆ ನೀಡಿದ್ದಾರೆ.

* ಕೊಲಂಬೊದಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನ 2 ವಿಕೆತ್ ಗಳ ಸೋಲನ್ನು ಕಂಡಿತು. ಈ ಸೋಲಿನೊಂದಿಗೆ ಪಾಕಿಸ್ತಾನ ತಂಡ 2023ರ ಏಷ್ಯನ್ ಕಪ್ ನಿಂದ ಹೊರಬಿದ್ದಿದೆ. ಈ ಗೆಲುವಿನೊಂದಿಗೆ ಶ್ರೀಲಂಕಾ 11 ಬಾರಿಗೆ ಏಷ್ಯಾ ಕಪ್ ಫೈನಲ್ ಗೆ ಲಗ್ಗೆ ಇಟ್ಟ ಹಾಗಾಗಿದೆ. ಈ ಸೋಲಿನ ಮೂಲಕ ಪಾಕ್ ಏಕದಿನ ಶ್ರೇಯಾಂಕದಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಅದೇ ಸಮಯದಲ್ಲಿ, ಟೀಮ್ ಇಂಡಿಯಾ ಎರಡನೇ ಸ್ಥಾನಕ್ಕೆ ಜಿಗಿದಿದೆ. ಇತ್ತೀಚಿನ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಪಾಕಿಸ್ತಾನ ತಂಡ ಮೂರನೇ ಸ್ಥಾನಕ್ಕೆ ಇಳಿದಿದೆ. ಪಾಕ್ 3,102 ಅಂಕಗಳನ್ನು ಹೊಂದಿದ್ದು, 115 ರೇಟಿಂಗ್ ಪಾಯಿಂಟ್ ಹೊಂದಿದೆ.
* ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಒಟ್ಟಾರೆ ಪ್ರದರ್ಶನದ ಬಳಿಕ ಮಾತನಾಡಿದ ಶೋಯೆಬ್ ಅಖ್ತರ್ ತಂಡದ ನಾಯಕ ಬಾಬರ್ ಅಜಂ ತಮ್ಮ ನಾಯಕತ್ವದಲ್ಲಿ ಮತ್ತಷ್ಟು ಚುರುಕಾಗಬೇಕು ಎನ್ನುವ ಮಾತನ್ನು ಹೇಳಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಅವರು ಪಾಕಿಸ್ತಾನ ಏಷ್ಯಾಕಪ್‌ನಿಂದ ಹೊರಬಿದ್ದಿರುವುದು 'ಮುಖಭಂಗ' ಎನ್ನುವ ಮಾತನ್ನು ಕೂಡ ಹೇಳಿದ್ದಾರೆ.
* ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಬಾಂಗ್ಲಾದೇಶ ತಂಡವನ್ನು ಎದುರಿಸಿದೆ. ಈಗಾಗಲೇ ಭಾರತ ಫೈನಲ್‌ಗೆ ಪ್ರವೇಶಿಸಿರುವ ಕಾರಣ ಈ ಪಂದ್ಯದಲ್ಲಿ ಸಾಕಷ್ಟು ಬದಲಾವಣೆಯೊಂದಿಗೆ ಕಣಕ್ಕಿಳಿದಿದ್ದು ಬೆಂಚ್ ಸಾಮರ್ಥ್ಯ ಪರೀಕ್ಷಿಸುವ ಅವಕಾಶ ಪಡೆದುಕೊಂಡಿದೆ. ಹೀಗಾಗಿ ವಿರಾಟ್ ಕೊಹ್ಲಿ ಜಸ್ಪ್ರೀತ್ ಬೂಮ್ರಾ ಸೇರಿದಂತೆ ಐವರು ಆಟಗಾರರ ಬದಲಾವಣೆ ಮಾಡಿ ಇಂದು ಕಣಕ್ಕಿಳಿಯಿತು.
* ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ತಂಡ ಪ್ರಸ್ತುತ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗಿಯಾಗಿದೆ. ಇಂದು ಈ ಸರಣಿಯ ನಾಲ್ಕನೇ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ಆಸ್ಟ್ತೃಲಿಯಾ ಬೌಲಿಂಗ್ ವಿಭಾಗದ ವಿರುದ್ಧ ದಕ್ಷಿಣ ಆಫ್ರಿಕಾ ಬ್ಯಾಟರ್‌ಗಳು ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಹೆನ್ರಿಕ್ ಕ್ಲಾಸೆನ್ ಅಮೋಘ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಈ ಅರ್ಭಟದಿಂದಾಗಿ ಆಸ್ಟ್ರೇಲಿಯಾ ತಂಡಕ್ಕೆ ದಕ್ಷಿಣ ಆಫ್ರಿಕಾ ಬರೊಬ್ಬರಿ 417 ರನ್‌ಗಳ ಗುರಿ ನೀಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications