* ಅಕ್ಟೋಬರ್ 5ರಿಂದ ಭಾರತದಲ್ಲಿ ಪ್ರಾರಂಭವಾಗುವ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಭಾಗವಹಿಸುವ ಎಲ್ಲಾ ಹತ್ತು ತಂಡಗಳು ತಮ್ಮ ಅತ್ಯುತ್ತಮ ಬಳಗವನ್ನು ನಿರ್ಮಿಸುತ್ತಿವೆ. ಇದೇ ವೇಳೆ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ದೊಡ್ಡ ಹಿನ್ನಡೆಯಾಗಿದೆ. ಸ್ಫೋಟಕ ಬ್ಯಾಟರ್ ಜೇಸನ್ ರಾಯ್ ಅವರು ಇಂಗ್ಲೆಂಡ್‌ನ ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದಾರೆ.
* ಭಾನುವಾರ, ಸೆಪ್ಟೆಂಬರ್ 17ರಂದು ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಐದನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಭರ್ಜರಿ ಗೆಲುವು ದಾಖಲಿಸುವ ಮೂಲಕ ಐದು ಪಂದ್ಯಗಳ ಸರಣಿಯನ್ನು 3-2 ಅಂತರದಲ್ಲಿ ವಶಪಡಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಏಡೆನ್ ಮಾರ್ಕ್ರಾಮ್ ಮತ್ತು ಡೇವಿಡ್ ಮಿಲ್ಲರ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 315 ರನ್ ಕಲೆಹಾಕಿತು.

* ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಟೀಮ್ ಇಂಡಿಯಾ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ವಿಶ್ವಕಪ್ ಸನಿಹದಲ್ಲಿರುವಾಗ ಈ ಸರಣಿ ತಂಡದ ಆಟಗಾರರಿಗೆ ವಿಶ್ವಕಪ್‌ಗಾಗಿ ಸಿದ್ಧತೆ ನಡೆಸಲು ಕೊನೆಯ ಅವಕಾಶವಾಗಿದೆ. ಆದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾದ ಹಲವು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು ಕೆಎಲ್ ರಾಹುಲ್‌ಗೆ ನಾಯಕತ್ವ ನೀಡಲಾಗಿದೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಹಾಗಾಗಿ ಈ ಸರಣಿಯಲ್ಲಿ ವಿಶ್ವಕಪ್‌ಗೆ ಆಯ್ಕೆ ಮಾಡಿ ಮಾಡಿರುವ ತಂಡದಲ್ಲಿ ಸ್ಥಾನ ಪಡೆಯದ ಕೆಲ ಆಟಗಾರರಿಗೂ ಅವಕಾಶ ದೊರೆತಿದೆ. ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ವಾಶಿಂಗ್ಟನ್ ಸುಂದರ್, ಪ್ರಸಿಧ್ಧ್ ಕೃಷ್ಣ ಹಾಗೂ ಆರ್ ಅಶ್ವಿನ್ ಈ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.
* ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಒಟ್ಟಕ್ಕೇರುದ ಬಳಿಕ ಬಿಸಿಸಿಐ ಟಿವಿಯಲ್ಲಿ ಕುಲ್‌ದೀಪ್ ಯಾದವ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಈ ಹಂತವನ್ನು ತಲುಪಲು ತಾನು ಒಂದೂವರೆ ವರ್ಷಗಳ ಕಾಲ ಶ್ರಮಿಸಿದ್ದೆ ಎಂಬುದಾಗಿ ಹೇಳಿಕೊಂಡಿದ್ದಾರೆ. ಕುಲದೀಪ್ ಅವರು ತಮ್ಮ ವೃತ್ತಿಜೀವನ ಆರಂಭದಲ್ಲಿ ಅದ್ಭುತವಾದ ಪ್ರದರ್ಶನ ನೀಡಿ ಭರವಸೆ ಮೂಡಿಸಿದ್ದರು. ಆದರೆ ಕೊರೊನಾಕಾಲದ ಬಳಿಕ ಅವರ ಪ್ರದರ್ಶನದಲ್ಲಿ ಗಣನೀಯ ಇಳಿಕೆ ಕಂಡುಬಂದಿತ್ತು. ಆದರೆ ಇದೀಗ ಯುವ ಎಡಗೈ ಸ್ಪಿನ್ನರ್ ಮತ್ತೆ ಲಯಕ್ಕೆ ಮರಳಿದ್ದು ಅದ್ಭುತ ಯಶಸ್ಸು ಸಾಧಿಸಿಕೊಂಡು ಬಂದಿದ್ದಾರೆ.
* ವಿಶ್ವಕಪ್‌ಗೆ ಭಾರತ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ಈ ಮಹತ್ವದ ಟೂರ್ನಿಗೂ ಮುನ್ನ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೂ ಇದೀಗ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಲಾಗಿದೆ. ಈ ತಂಡದಲ್ಲಿ ಅನುಭವಿ ಆಟಗಾರ ಆರ್ ಅಶ್ವಿನ್‌ಗೆ ಸ್ಥಾನ ದೊರೆಯುವ ಮೂಲಕ ಕುತೂಹಲ ಮೂಡಿಸಿದೆ. ವಿಶ್ವಕಪ್ ತಂಡದಲ್ಲಿಲ್ಲದಿದ್ದರೂ ಅಶ್ವಿನ್‌ಗೆ ಅವಕಾಶ ದೊರೆತಿರುವುದು ವಿಶ್ವಕಪ್ ತಂಡದಲ್ಲಿ ಬದಲಾವಣೆಗಳಾಗಲಿದೆಯೇ ಎನ್ನುವ ಕುತೂಹಲ ಮೂಡಲು ಕಾರಣವಾಗಿದೆ.
* ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಇಂದು ಟೀಮ್ ಇಂಡಿಯಾ ಬಳಗವನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಆಲ್‌ರೌಂಡರ್ ಅಕ್ಷರ್ ಪಟೇಲ್ ಗಾಯದ ಕುರಿತಾಗಿ ಅಗರ್ಕರ್ ಮಾಹಿತಿ ಹಂಚಿಕೊಂಡಿದ್ದಾರೆ. ಅಕ್ಷರ್ ಪಟೇಲ್ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಿಗೂ ಅಲಭ್ಯವಾಗಿದ್ದಾರೆ.
* ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಚೇತೇಶ್ವರ್ ಪೂಜಾರ ನೇತೃತ್ವದ ಸಸ್ಸೆಕ್ಸ್ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ಲೀಸೆಸ್ಟರ್‌ಶೈರ್ ವಿರುದ್ಧದ ವಿವಾದಾತ್ಮಕ ಗೆಲುವಿನ ನಂತರ 12 ಅಂಕಗಳ ಪೆನಾಲ್ಟಿಗೆ ತುತ್ತಾಗಿದೆ. ಅಲ್ಲದೆ ಸ್ವತಃ ನಾಯಕ ಚೇತೇಶ್ವರ್ ಪೂಜಾರ ಒಂದು ಪಂದ್ಯದ ನಿಷೇಧಕ್ಕೆ ಒಳಗಾಗಿದ್ದಾರೆ. ಆರಂಭದಲ್ಲಿ ಅದ್ಭುತ ಪ್ರದರ್ಶನದ ಮೂಲಕ ಗಮನಸೆಳೆದಿದ್ದ ಸಸ್ಸೆಕ್ಸ್ ತಂಡ ಈಗ ಭಾರೀ ಹಿನ್ನಡೆಗೆ ಒಳಗಾಗಿದೆ.
* ವಿಶ್ವಕಪ್‌ಗೆ ಟೀಮ್ ಇಂಡಿಯಾದ ಸಿದ್ಧತೆ ಭರ್ಜರಿಯಾಗಿ ನಡೆದಿದೆ. ಏಷ್ಯಾಕಪ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿರುವ ಭಾರತ ತಂಡ ಮುಂದಿನ ವಿಶ್ವಕಪ್ ಟೂರ್ನಿಗೆ ತಾನು ಸಿದ್ಧ ಎನ್ನುವುದನ್ನು ಸಾರಿದೆ. ಈ ಟೂರ್ನಿಯ ಮೂಲಕ ಟೀಮ್ ಇಂಡಿಯಾ ಆಡುವ ಕ್ರಮಾಂಕದಲ್ಲಿ ಸಾಕಷ್ಟು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ 8ನೇ ಕ್ರಮಾಂಖದ ಬಗ್ಗೆ ಇರ್ಫಾನ್ ಪಠಾಣ್ ಕುತೂಹಲಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ.