For Quick Alerts
ALLOW NOTIFICATIONS  
For Daily Alerts

ಸೆಪ್ಟೆಂಬರ್ 20: ಸಿರಾಜ್ ನಂ 1 ಬೌಲರ್; ದ. ಕೊರಿಯಾಗೆ ಆಘಾತ ನೀಡಿದ ಭಾರತ ವಾಲಿಬಾಲ್ ತಂಡ: ಕ್ರೀಡಾ ಲೋಕದ ಇಂದಿನ ಸುದ್ದಿ

* ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಅತ್ಯಮೋಘ ಬೌಲಿಂಗ್ ಪ್ರದರ್ಶಿಸಿ ಅಬ್ಬರಿಸಿದ್ದ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿಯೂ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಶ್ರೀಲಂಕಾ ವಿರುದ್ಧ ನೀಡಿದ ಶ್ರೇಷ್ಠ ಬೌಲಿಂಗ್ ಪ್ರದರ್ಶನದ ಬಳಿಕ ಮೊಹಮ್ಮದ್ ಸಿರಾಜ್ ಏಕದಿನ ಮಾದರಿಯ ಬೌಲಿಂಗ್ ವಿಭಾಗದ ಶ್ರೇಯಾಂಕ ಪಟ್ಟಿಯಲ್ಲಿ 9ನೇ ಸ್ಥಾನದಿಂದ ನೇರವಾಗಿ ನಂಬರ್ 1 ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

* ಭಾರತದ ಪುರುಷರ ವಾಲಿಬಾಲ್ ತಂಡ ಏಷ್ಯನ್ ಗೇಮ್ಸ್‌ನಲ್ಲಿ ಬೃಹತ್ ಬೇಟೆಯಾಡಿದೆ. ಕಳೆದ ಬಾರಿಯ ಬೆಳ್ಳಿ ಪದಕ ವಿಜೇತ ತಂಡ ದಕ್ಷಿಣ ಕೊರಿಯಾವನ್ನು ಭಾರತ ಮಣಿಸಿದ್ದು ರೋಚಕ ಗೆಲುವು ಸಾಧಿಸಿದೆ. ಐದು ಸೆಟ್‌ಗಳ ರೋಚಕ ಕದನದಲ್ಲಿ ಗೆಲುವು ಸಾಧಿಸಿದ ಭಾರತ ತಂಡ ನಾಕೌಟ್‌ಗೆ ಪ್ರವೇಶ ಪಡೆದುಕೊಂಡಿದೆ.

September 20, what happened in sports World: Todays Top sports news and headlines

* ಮಂಗಳವಾರ, ಸೆಪ್ಟೆಂಬರ್ 19ರಂದು ಐಸಿಸಿ ಮಹಿಳಾ ಏಕದಿನ ಶ್ರೇಯಾಂಕದ ಇತ್ತೀಚಿನ ಅಪ್‌ಡೇಟ್‌ನಲ್ಲಿ ಭಾರತದ ಅಗ್ರ ಬ್ಯಾಟರ್‌ಗಳಾದ ಸ್ಮೃತಿ ಮಂಧಾನ ಮತ್ತು ಹರ್ಮನ್‌ಪ್ರೀತ್ ಕೌರ್ ತಲಾ ಒಂದು ಸ್ಥಾನ ಮೇಲಕ್ಕೆ ಏರಿದ್ದಾರೆ. ಸ್ಮೃತಿ ಮಂಧಾನ 708 ರೇಟಿಂಗ್ ಪಾಯಿಂಟ್‌ಗಳೊಂದಿಗೆ 4ನೇ ಸ್ಥಾನಕ್ಕೆ ಏರಿದರೆ, ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ 694 ರೇಟಿಂಗ್ ಪಾಯಿಂಟ್‌ಗಳೊಂದಿಗೆ 6ನೇ ಸ್ಥಾನಕ್ಕೆ ಏರಿದ್ದಾರೆ.

* ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲೇ ನಡೆಯಲಿರುವ 2023ರ ಐಸಿಸಿ ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯ ಅಧಿಕೃತ ಗೀತೆಯಲ್ಲಿ ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಕಾಣಿಸಿಕೊಂಡಿದ್ದಾರೆ. 'ದಿಲ್ ಜಶ್ನ್ ಬೋಲೆ' ಎಂಬ ಶೀರ್ಷಿಕೆಯ ಈ ಗೀತೆಯನ್ನು ಪ್ರೀತಮ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಎಕ್ಸ್ (ಟ್ವಿಟ್ಟರ್)ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗೀತೆಯೆ ಮೊದಲ ಪೋಸ್ಟರ್ ಅನ್ನು ಹಂಚಿಕೊಂಡಿದ್ದು, "ಅತ್ಯುತ್ತಮ ಕ್ರಿಕೆಟಿಂಗ್ ಜಶ್ನ್ ಬಹುತೇಕ ಬರಲಿದೆ, ಮಧ್ಯಾಹ್ನ 12 ಗಂಟೆಗೆ, ಕ್ರಿಕೆಟ್ ವಿಶ್ವಕಪ್ 2023,'' ಎಂದು ಶೀರ್ಷಿಕೆ ನೀಡಲಾಗಿದೆ.

* ಭಾರತ ಮಹಿಳಾ ಹಾಕಿ ತಂಡವು ಮಂಗಳವಾರ, ಸೆಪ್ಟೆಂಬರ್ 19ರ ರಾತ್ರಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚೀನಾದ ಕ್ರೀಡಾ ಗ್ರಾಮಕ್ಕೆ ಪ್ರಯಾಣ ಬೆಳೆಸಿದೆ. ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯಲಿರುವ 2023ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕೊರಿಯಾ, ಮಲೇಷ್ಯಾ, ಹಾಂಕಾಂಗ್ ಚೀನಾ ಮತ್ತು ಸಿಂಗಾಪುರದೊಂದಿಗೆ ಪೂಲ್ ಎ ನಲ್ಲಿ ಸ್ಥಾನ ಪಡೆದಿದೆ.

* 2023ರ ಏಷ್ಯಾ ಕಪ್ ಪಂದ್ಯಾವಳಿ ಫೈನಲ್‌ನಲ್ಲಿ ಭಾರತ ವಿರುದ್ಧ 50 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಹೀನಾಯ ಪ್ರದರ್ಶನ ನೀಡಿದ ನಂತರ, ಶ್ರೀಲಂಕಾ ತಂಡದಲ್ಲಿ ದೊಡ್ಡ ಬಿರುಗಾಳಿ ಎದ್ದಿದೆ. ಕಳೆದ ಬಾರಿ ಶ್ರೀಲಂಕಾ ತಂಡವನ್ನು ಟಿ20 ಮಾದರಿಯಲ್ಲಿ ಏಷ್ಯಾ ಕಪ್ ಚಾಂಪಿಯನ್ ಮಾಡಿದ್ದ ನಾಯಕ ದಸುನ್ ಶನಕ ಈ ಬಾರಿ ವಿಫಲರಾದರು. ಹೀಗಾಗಿ ತಂಡದ ನಾಯಕತ್ವ ತ್ಯಜಿಸಲು ಮುಂದಾಗಿದ್ದಾರೆ.

* ಕನ್ನಡಿಗ ಅನುಭವಿ ಬ್ಯಾಟರ್ ಕರುಣ್ ನಾಯರ್ ಕೌಂಟಿ ಚಾಂಪಿಯನ್‌ಶಿಪ್‌ನ ಡಿವಿಶನ್ 1 ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಗಮನಸೆಳೆದಿದ್ದಾರೆ. ನಾರ್ಥಾಂಪ್ಟನ್‌ಶೈರ್ ಪರವಾಗಿ ಆಡುತ್ತಿರುವ ಕರುಣ್ ನಾಯರ್ ಸರ್ರೆ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಕರ್ನಾಟಕದ ಅನುಭವಿ ಆಟಗಾರ ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದರು.

Story first published: Wednesday, September 20, 2023, 23:55 [IST]
Other articles published on Sep 20, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+