ಸೆಪ್ಟೆಂಬರ್ 21: ಏಷ್ಯಾಡ್‌ನಲ್ಲಿ ಸೆಮಿಫೈನಲ್‌ಗೆ ಮಹಿಳಾ ಕ್ರಿಕೆಟ್ ತಂಡ; ಆಸಿಸ್ ಸರಣಿಗೆ ಭಾರತ ಸಜ್ಜು: ಕ್ರೀಡಾ ಲೋಕದ ಇಂದಿನ ಸುದ್ದ
* ಗುರುವಾರ, ಸೆಪ್ಟೆಂಬರ್ 21ರಂದು ಚೀನಾದ ಹ್ಯಾಂಗ್‌ಝೌನಲ್ಲಿರುವ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್‌ನಲ್ಲಿ ನಡೆದ 2023ರ ಏಷ್ಯನ್ ಗೇಮ್ಸ್ ಕ್ವಾರ್ಟರ್‌ಫೈನಲ್ 1 ಪಂದ್ಯದಲ್ಲಿ ಭಾರತ ಮತ್ತು ಮಲೇಷ್ಯಾ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಆದರೆ, ಮಳೆಯಿಂದ ಪೂರ್ಣ ಫಲಿತಾಂಶ ಕಾಣದೆ ಪಂದ್ಯ ರದ್ದುಗೊಂಡಿತು. ಪಂದ್ಯಾವಳಿಯಲ್ಲಿ ತಮ್ಮ ಆರಂಭಿಕ ಪಂದ್ಯವು ಮಳೆಯಿಂದ ರದ್ದುಗೊಂಡ ನಂತರ, ಭಾರತೀಯ ಮಹಿಳಾ ತಂಡವು 2023ರ ಏಷ್ಯನ್ ಗೇಮ್ಸ್‌ನ ಸೆಮಿಫೈನಲ್ ಅರ್ಹತೆ ಪಡೆದಿದೆ.
* ಟೀಮ್ ಇಂಡಿಯಾದ ಯುವ ಆಟಗಾರ ಶುಬ್ಮನ್ ಗಿಲ್ ಈ ವರ್ಷ ಟೀಮ್ ಇಂಡಿಯಾ ಪರವಾಗಿ ಆರಂಭಿಕ ಆಟಗಾರನಾಗಿ ಅದ್ಭುತ ಪ್ರದರ್ಶನ ನೀಡಿ ರನ್ ಮಳೆ ಹರಿಸಿದ್ದಾರೆ. ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿಯೂ ಶುಬ್ಮನ್ ಗಿಲ್ ತಮ್ಮ ರನ್ ಮಳೆ ಹರಿಸುವುದನ್ನು ಮುಂದುವರಿಸಲಿದ್ದಾರೆ ಎಂದು ರೈನಾ ಹೇಳಿಕೆ ನೀಡಿದ್ದಾರೆ. 2019ರಲ್ಲಿ ನಡೆದ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಅವರು ನಿರ್ವಹಿಸಿದ ಪಾತ್ರವನ್ನು ಈ ಬಾರಿ ಗಿಲ್ ನಿರ್ವಹಿಸಲಿದ್ದಾರೆ ಎನ್ನುವ ಭರವಸೆಯ ಮಾತುಗಳನ್ನು ಕೂಡ ಅವರು ಹೇಳಿದ್ದಾರೆ.

* ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯ ಸ್ಟಾರ್ ಸ್ಪೋರ್ಟ್ಸ್ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಸದ್ದು ಮಾಡುತ್ತಿದೆ. ಅಲ್ಲದೆ ಇದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಇಕ್ಕಟ್ಟಿನ ಪರಿಸ್ಥಿತಿಗೆ ತಂದಿರಿಸಿದೆ. ವಿಡಿಯೋದಲ್ಲಿ ವಿರಾಟ್ ಕೊಹ್ಲಿ, ಮಕ್ಕಳು ಆಟ ಆಡುವ ಮೈದಾನಗಳ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ. ಆದರೆ, ಈ ವಿಡಿಯೋ ಬಿಡುಗಡೆಯಾದ ಬಳಿಕ ಇದೀಗ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ಉತ್ತರಾಖಂಡ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡು ವಿಚಾರಣೆ ನಡೆಸಿದೆ.
* ವಿರಾಟ್ ಕೊಹ್ಲಿಗೆ ಪದೇ ಪದೇ ವಿಶ್ರಾಂತಿ ನೀಡುತ್ತಿರುವ ಹಿಂದೆ ದುರಾಲೋಚನೆಯೊಂದು ಇದೆ ಎಂದು ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಆಡಂ ಗಿಲ್‌ಕ್ರಿಸ್ಟ್ ಹೇಳಿದ್ದಾರೆ ಎನ್ನುವ ಟ್ವೀಟ್ ಸಾಕಷ್ಟು ವೈರಲ್ ಆಗಿತ್ತು. ಇದು ಅಭಿಮಾನಿಗಳ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೂ ಕಾರಣವಾಗಿತ್ತು. ಆದರೆ ಈ ವೈರಲ್ ಟ್ವೀಟ್ ವಿಚಾರವಾಗಿ ಸ್ವತಃ ಆಡಂ ಗಿಲ್‌ಕ್ರಿಸ್ಟ್ ಸ್ಪಷ್ಟನೆಯನ್ನು ನೀಡಿದ್ದಾರೆ. ಈ ಮೂಲಕ ತನ್ನದು ಎನ್ನಲಾದ ಹೇಳಿಕೆಯನ್ನು ಅವರು ನೇರವಾಗಿ ಅಲ್ಲಗಳೆದಿದ್ದಾರೆ.
* ವಿಶ್ವಕಪ್ ಸನಿಹದಲ್ಲಿರುವಾಗ ಸಿದ್ಧತೆಯ ಭಾಗವಾಗಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗುತ್ತಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಟೂರ್ನಿಗಾಗಿ ತಂಡದ ಸಂಯೋಜನೆಯನ್ನು ಸರಿಪಡಿಸಿಕೊಳ್ಳಲು ಇದು ಕೊನೆಯ ಅವಕಾಶವಾಗಿದೆ. ಹೀಗಾಗಿ ಈ ಸರಣಿಯ ಮೇಲೆ ಈಗ ಎಲ್ಲರ ಕುತೂಹಲ ನೆಟ್ಟಿದೆ. ಈ ಸರಣಿಯ ಮೂಲಕ ಆಸ್ಟ್ರೇಲಿಯಾ ತಂಡ ಭಾರತದಲ್ಲಿ ಈ ವರ್ಷ ಎರಡನೇ ಬಾರಿಗೆ ಏಕದಿನ ಸರಣಿಯಲ್ಲಿ ಮುಖಾಮುಖಿಯಾದಂತಾಗಿದೆ.
* ಶುಕ್ರವಾರ, ಸೆಪ್ಟೆಂಬರ್ 22ರಂದು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ. ಇದೇ ವೇಳೆ ಪ್ರವಾಸಿ ಆಸ್ಟ್ರೇಲಿಯಾ ತಂಡಕ್ಕೆ ಹಿನ್ನಡೆ ಉಂಟಾಗಿದ್ದು, ಇಬ್ಬರು ಸ್ಟಾರ್ ಆಟಗಾರರು ಹೊರಗುಳಿಯಲಿದ್ದಾರೆ. ವಿಶ್ವಕಪ್‌ಗೆ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಗಾಯದ ಸಮಸ್ಯೆ ಕಾಡುತ್ತಿದ್ದು, ಐಸಿಸಿ ಪಂದ್ಯಾವಳಿಗೆ ತಂಡ ಸಂಪೂರ್ಣ ಫಿಟ್ ಆಗಿಲ್ಲವೇ ಎಂಬ ಪ್ರಶ್ನೆ ಕಾಡುತ್ತಿದೆ. ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಮತ್ತು ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಭಾರತ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಿಂದ ಹೊರಗುಳಿಯುವ ಮೂಲಕ ಆಸ್ಟ್ರೇಲಿಯಾ ದೊಡ್ಡ ಹೊಡೆತ ಅನುಭವಿಸುತ್ತಿದೆ
* 2023ರ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಮೊದಲ ಪದಕವನ್ನು ಗೆದ್ದುಕೊಂಡಿದ್ದಾರೆ ಯುವ ರೆಸ್ಲರ್ ಅಂತಿಮ್ ಪಂಘಲ್. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಭಾರತದ ಈ ಯುವ ರೆಸ್ಲರ್ ಎಮ್ಮಾ ಜೊನ್ನಾ ಮಾಲ್ಮ್‌ಗ್ರೆನ್ ಅವರನ್ನು ಎದುರಿಸಿದರು. 53 ಕೆಜಿ ವಿಭಾಗದ ಈ ಸ್ಪರ್ಧೆಯಲ್ಲಿ ಭಾರತದ ರೆಸ್ಲರ್ ಅದ್ಭುತ ಗೆಲುವು ಸಾಧಿಸಿದ್ದಾರೆ. ಈ ಗೆಲುವಿನಿಂದಿಗೆ ಅವರು ಮುಂದಿನ ಪ್ಯಾರಿಸ್ ಒಲಿಂಪಿಕ್ಸ್‌ಗೆ ಕೂಡ ಅರ್ಹತೆಯನ್ನು ಸಂಪಾದಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications