For Quick Alerts
ALLOW NOTIFICATIONS  
For Daily Alerts

ಸೆಪ್ಟೆಂಬರ್ 22: ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ; ಏಷ್ಯನ್ ಗೇಮ್ಸ್ ವೀಸಾ ವಿವಾದ: ಕ್ರೀಡಾ ಲೋಕದ ಇಂದಿನ ಸುದ್ದಿ

* ಶನಿವಾರ ಚೀನಾದ ಹ್ಯಾಂಗ್‌ಝೌನಲ್ಲಿ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಅಧಿಕೃತವಾಗಿ ಆರಂಭವಾಗಲಿದೆ. ಆದರೆ ಈ ಕ್ರೀಡಾಕೂಟದ ಆರಂಭಕ್ಕೂ ಮುನ್ನವೇ ವಿವಾದವೊಂದು ತಲೆಯೆತ್ತಿದೆ. ಭಾರತದ ಮೂವರು ಅಥ್ಲೀಟ್‌ಗಳಿಗೆ ಚೀನಾ ವೀಸಾ ನಿಡಲು ನಿರಾಕರಿಸಿದೆ ಎಂದು ಆರೋಪಿಸಿದೆ. ಅರುಣಾಚಲ ಪ್ರದೇಶ ಮೂಲದ ಈ ಮೂವರು ಅಥ್ಲೀಟ್‌ಗಳಿಗೆ ಚೀನಾ ವೀಸಾ ನೀಡದಿರುವುದು ಸಾಕಷ್ಟು ಖಂಡನೆಗೂ ಗುರಿಯಾಗಿದೆ.

* ವಿಶ್ವಕಪ್‌ ಸನಿಹದಲ್ಲಿರುವಾಗ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ಆರಂಭದಲ್ಲಿ ಮೊಹಮ್ಮದ್ ಶಮಿ ಅವರ ಬೌಲಿಂಗ್‌ನಿಂದಾಗಿ ಆಸ್ಟ್ರೇಲಿಯಾ ಬ್ಯಾಟಿಂಗ್ ವಿಭಾಗದ ವಿರುದ್ಧ ಅದ್ಭುತ ಮೇಲುಗೈ ಸಾಧಿಸಿದ್ದ ಭಾರತ ಬಳಿಕ ಬ್ಯಾಟಿಂಗ್‌ನಲ್ಲಿಯೂ ಅದ್ಭುತ ಪ್ರದರ್ಶನ ನೀಡಿತು. ಹೀಗಾಗಿ 5 ವಿಕೆಟ್‌ಗಳ ಅಂತರದ ಅದ್ಭುತ ಗೆಲುವು ಸಾಧಿಸಿದಂತಾಗಿದೆ.

September 22, what happened in sports World: Todays Top sports news and headlines

* ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಈ ಗೆಲುವಿನ ಜೊತೆಗೆ ಭಾರತ ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನವನ್ನು ಹಿಂದಕ್ಕೆ ತಳ್ಳಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಇದರೊಂದಿಗೆ ಈಗ ಭಾರತ ಎಲ್ಲಾ ಮೂರು ಮಾದರಿಯಲ್ಲಿಯೂ ನಂ.1 ತಂಡ ಎನಿಸಿಕೊಂಡಿದೆ.

* ಭಾರತದಲ್ಲಿ ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗಾಗಿ ತಂಡಗಳ ಸಲ್ಲಿಕೆ ಗಡುವು ಹತ್ತಿರವಾಗುತ್ತಿದೆ. ಈಗಾಗಲೇ ಹಲವು ತಂಡಗಳು ತಯಾರಿ ನಡೆಸುತ್ತಲೇ ತಮ್ಮ ವಿಶ್ವಕಪ್ ತಂಡಗಳನ್ನು ಪ್ರಕಟಿಸಿವೆ. ಇದೀಗ ಐಸಿಸಿ ಟ್ರೋಫಿ ಗೆಲ್ಲುವ ನೆಚ್ಚಿನ ಸ್ಪರ್ಧಿಗಳಲ್ಲಿ ಒಂದಾಗಿರುವ ಪಾಕಿಸ್ತಾನ ಕೂಡ ಶುಕ್ರವಾರ, ಸೆಪ್ಟೆಂಬರ್ 22ರಂದು ಪ್ರಮುಖ ಪಂದ್ಯಾವಳಿಗಾಗಿ 15 ಸದಸ್ಯರ ತಮ್ಮ ತಂಡವನ್ನು ಪ್ರಕಟಿಸಿದೆ. ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಸೌದ್ ಶಕೀಲ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಹಸನ್ ಅಲಿ, ಉಸಾಮಾ ಮಿರ್, ಮೊಹಮ್ಮದ್ ವಾಸಿಂ ಜೂನಿಯರ್.

* ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಎರಡು ತಂಡಗಳು ಕೂಡ ಕಣಕ್ಕಿಳಿದು ಕಾದಾಟ ನಡೆಸುತ್ತಿದೆ. ಇನ್ನು ಈ ಪಂದ್ಯದ ಮೂಲಕ ಟೀಮ್ ಇಂಡಿಯಾದ ಅನುಭವಿ ಆಟಗಾರ ಆರ್ ಅಶ್ವಿನ್ ಸುದೀರ್ಘ 18 ತಿಂಗಳುಗಳಿಗೂ ಅಧಿಕ ಸಮಯದ ಬಳಿಕ ಭಾರತ ಏಕದಿನ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

* ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ವಾಲಿಬಾಲ್ ತಂಡದ ಅಬ್ಬರದ ಪ್ರದರ್ಶನ ಮುಂದುವರಿದಿದ್ದು ಕ್ವಾರ್ಟರ್‌ಫೈನಲ್‌ಗೆ ಪ್ರವೇಶ ಪಡೆದಿದೆ. ಹ್ಯಾಂಗ್‌ಝೂನಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಇಂದು 12ರ ಹಂತದ ಪಂದ್ಯದಲ್ಲಿ ಭಾರತ ವಾಲಿಬಾಲ್ ತಂಡ ತೈವಾನ್ ಪಡೆಯನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಭಾರತ 3-0 ಅಂತರದಿಂದ ಗೆಲುವು ಸಾಧಿಸಿ ಕ್ವಾರ್ಟರ್‌ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ.

* ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತೊರೆಯಲಿದ್ದಾರಾ? ಹೀಗೊಂದು ಸುದ್ದಿ ಜೋರಾಗಿ ಹರಡುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತೊರೆದು ಗೌತಮ್ ಗಂಭೀರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಸೇರಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಸುದ್ದಿಗೆ ಪೂರಕವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕರೂ ಆಗಿರುವ ಶಾರೂಖ್ ಖಾನ್ ಅವರನ್ನು ಗಂಭೀರ್ ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

Story first published: Friday, September 22, 2023, 23:49 [IST]
Other articles published on Sep 22, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+