* ಭಾರತ ಮಹಿಳಾ ಟೇಬಲ್ ಟೆನಿಸ್ ತಂಡ ಗ್ರೂಪ್-ಎಫ್ ಸೆಣೆಸಾಟದಲ್ಲಿ ನೇಪಾಳ ತಂಡವನ್ನು ಎದುರಿಸಿದ್ದು ನೇರ ಗೇಮ್‌ಗಳಲ್ಲಿ ಸೋಲಿಸುವಲ್ಲಿ ಯಶಸ್ವಿಯಾಗಿದೆ. ಈ ಗೆಲುವಿನೊಂದಿಗೆ ಏಷ್ಯನ್ ಗೇಮ್ಸ್ 2023 ರ ಮುಂದಿನ ಸುತ್ತಿಗೆ ಮುನ್ನಡೆ ಪಡೆದುಕೊಂಡಿದೆ. ದಿಯಾ ಪರಾಗ್ ಚಿತಾಲೆ, ಐಹಿಕಾ ಮುಖರ್ಜಿ ಮತ್ತು ಸುತೀರ್ಥ ಮುಖರ್ಜಿ ಅವರು ಗ್ರೂಪ್-ಎಫ್‌ನಲ್ಲಿ ನೇಪಾಳವನ್ನು 3-0 ಗೋಲುಗಳಿಂದ ಸೋಲಿಸಿದ್ದಾರೆ.
* ಅವಕಾಶ ಸಿಕ್ಕಾಗ ಹೇಗೆ ಬಳಸಿಕೊಳ್ಳಬೇಕು ಎಂಬುದನ್ನು ಈ ಬೌಲರ್ ನೊಡಿಯೇ ಕಲಿಯಬೇಕು. ನಿಜಕ್ಕೂ ಈ ಬೌಲರ್ ವಾತಾವರಣದ ಹಾಗೂ ಪಿಚ್ ಲಾಭ ಪಡೆದು, ಬೌಲ್ ಮಾಡಿದ ರೀತಿ ಅಮೋಘ. ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಆರಂಭವಾದ ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಸಿರಾಜ್ ಸ್ಥಾನದಲ್ಲಿ ಆಡುವ ಅವಕಾಶವನ್ನು ಪಡೆದ ಈ ವೇಗಿ ನೀಡಿದ ಪಂಚ್ ಗೆ ಆಸೀಸ್ ತಬ್ಬಿಬ್ಬಾಗಿದೆ. ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ವೇಗಿ, ತಮ್ಮನ್ನು ಹಗುರವಾಗಿ ಪರಿಗಣಿಸಬಾರದು ಎಂದು ಎಲ್ಲ ತಂಡಗಳಿಗೆ ಮೊಹಾಲಿಯಿಂದ ಸಂದೇಶ ಸಾರಿದ್ದಾರೆ. ಶುಕ್ರವಾರ ಭಾರತದ ಗೆಲುವಿನಲ್ಲಿ ಹೀರೋ ರೀತಿ ಮಿಂಚಿದ ಆಟಗಾರ ಸ್ವಿಂಗ್ ಸ್ಪೆಷಲಿಸ್ಟ್ ಮೊಹಮ್ಮದ್ ಶಮಿ.

* ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಅಮೋಘ ಅರ್ಧ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಈ ಮೂಲಕ ಎಷ್ಯಾಕಪ್ ಟೂರ್ನಿಯಲ್ಲಿ ಪ್ರದರ್ಶಿಸಿದ್ದ ಫಾರ್ಮ್ ಮುಂದುವರಿಸಿದ್ದಾರೆ. ಆದರೆ ಈ ಇನ್ನಿಂಗ್ಸ್ ಶುಬ್ಮನ್ ಗಿಲ್ ಪಾಲಿಗೆ ಮತ್ತಷ್ಟು ವಿಶೇಷ. ಅದಕ್ಕೆ ಕಾರಣ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯ ನಡೆದಿದ್ದು ಅವರ ತವರು ಪಂಜಾಬ್‌ನ ಮೊಹಾಲಿಯ ಕ್ರೀಡಾಂಗಣದಲ್ಲಿ.
* ವಿಶ್ವಕಪ್‌ಗೆ ಕೊನೆಯ ಹಂತದ ಸಿದ್ಧತೆ ನಡೆಸುತ್ತಿರುವ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಸರಣಿಯ ಮೂಲಕ ತಂಡದ ಸಂಯೋಜನೆಯನ್ನು ಅಂತಿಮಗೊಳಿಸುವ ಪ್ರಯತ್ನ ನಡೆಸುತ್ತಿದೆ. ಇಂಥಾ ಸಂದರ್ಭದಲ್ಲಿ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆಯುವತ್ತಿರುವ ಬಹುತೇಕ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದು ತಂಡಕ್ಕೆ ಸಕಾರಾತ್ಮಕ ತಲೆನೋವಿಗೆ ಕಾರಣವಾಗುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊಹಮ್ಮದ್ ಶಮಿ ಅವರ 5 ವಿಕೆಟ್‌ಗಳ ಗೊಂಚಲು ಇದಕ್ಕೆ ಮತ್ತೊಂದು ಉದಾಹರಣೆ.
* ಉತ್ತರಪ್ರದೇಶದ ವಾರಣಾಸಿಯಲ್ಲಿ ನಿರ್ಮಾಣವಾಗಲಿರುವ ನೂತನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಕ್ರೀಡಾಂಗಣ 2025ರ ಡಿಸೆಂಬರ್‌ಗೆ ಸಂಪೂರ್ಣಗೊಳ್ಳುವ ನಿರೀಕ್ಷೆಯಿದ್ದು ಇದು ಉತ್ತರ ಪ್ರದೇಶದ ಮೂರನೇ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನವಾಗಿರಲಿದೆ. ಕಾನ್ಪುರ ಹಾಗೂ ಲಕ್ನೋದಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಇದೆ.
* ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಭಾನುವಾರ ನಡೆಯಲಿದೆ. ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಗೆಲುವು ಸಾಧಿಸಿದ ಬಳಿಕ ಎರಡನೇ ಪಂದ್ಯ ಇಂದೋರ್‌ನ ಹೊಲ್ಕೆರೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯ ಮೊದಲ ಪಂದ್ಯ ಗೆದ್ದಿರುವ ಭಾರತ ಎರಡನೇ ಪಂದ್ಯವನ್ನೂ ಗೆದ್ದರ ಸರಣಿಯನ್ನು ವಶಕ್ಕೆ ಪಡೆಯುವ ಲೆಕ್ಕಾಚಾರದಲ್ಲಿದೆ.
* ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ನ್ಯೂಜಿಲೆಂಡ್ ತಂಡ ಎರಡನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ ಭಾರೀ ಆಘಾತ ನೀಡಿದೆ. ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳಿರುವಾಗ ನಡೆಯುತ್ತಿರುವ ಈ ಏಕದಿನ ಸರಣಿಯಲ್ಲಿ ಬಾಂಗ್ಲಾದೇಶ ತಂಡದ ಬ್ಯಾಟಿಂಗ್ ವಿಭಾಗ ದೌರ್ಬಲ್ಯ ಮತ್ತೊಮ್ಮೆ ಬಹಿರಂಗವಾಗಿದ್ದು ಭಾರೀ ಹಿನ್ನಡೆಯುಂಟಾಗಿದೆ.