* ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮೊದಲ ಚಿನ್ನದ ಪದಕವನ್ನು ಶೂಟಿಂಗ್ ವಿಭಾಗದಲ್ಲಿ ಕೊರಳಿಗೇರಿಸಿಕೊಂಡಿತು. 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ಭಾರತದ ಪುರುಷರ ತಂಡ ವಿಶ್ವದಾಖಲೆಯನ್ನು ಮುರಿದು ಹೊಸ ದಾಖಲೆ ಬರೆದು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮೊದಲ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡಿತು. ರುದ್ರಂಕ್ಷ್ ಬಾಳಾಸಾಹೇಬ್ ಪಾಟೀಲ್, ದಿವ್ಯಾಂಶ್ ಸಿಂಗ್ ಪನ್ವಾರ್ ಮತ್ತು ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಅವರನ್ನು ಒಳಗೊಂಡ ತಂಡವು ಭಾರತದ ಮೊದಲ ಚಿನ್ನದ ಪದಕವನ್ನು ಗೆದ್ದುಕೊಂಡಿದೆ. ಅಲ್ಲದೆ ಈ ಸಂದರ್ಭದಲ್ಲಿ ಭಾರತದ ಪುರುಷರ ತಂಡವಿಶ್ವದಾಖಲೆಯನ್ನು ಕೂಡ ಮುರಿಯುವಲ್ಲಿ ಯಶಸ್ವಿಯಾಗಿದೆ.
* ಟೀಂ ಇಂಡಿಯಾದ ಯುವ ಬ್ಯಾಟ್ಸ್‌ಮನ್ ಶುಬ್ಮನ್ ಗಿಲ್ ಈ ವರ್ಷ ಭರ್ಜರಿ ಫಾರ್ಮ್ ನಲ್ಲಿದ್ದಾರೆ. ಈ ಬಾರಿ ಅಂಗಳದಲ್ಲಿ ರನ್ ಚಿತ್ತಾರ ಬಿಡಿಸಿರುವ ಶುಬ್ಮನ್ ಗಿಲ್, ಅಬ್ಬರಿಸುತ್ತಾ ಬರುತ್ತಿದ್ದಾರೆ. ಯಾರೇ ಎದುರಾಳಿ ಇದ್ದರೂ ಕೆಚ್ಚದೆಯ ಬ್ಯಾಟಿಂಗ್ ಪ್ರದರ್ಶನ ಮಾಡಿ ರನ್ ಮಹಲ್ ಕಟ್ಟಿದ್ದಾರೆ. ಇದೇ ವರ್ಷ ಗಿಲ್ ಹಲವು ಬಾರಿ ದಾಖಲೆಯ ಪುಸ್ತಕಕ್ಕೆ ಕೆಲಸ ನೀಡಿದ್ದಾರೆ. ಇಂದೋರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಶುಬ್ಮನ್ ಗಿಲ್ ಭರ್ಜರಿ ಶತಕ ಸಿಡಿಸುವ ಮೂಲಕ ಮತ್ತೊಂದು ದಾಖಲೆಗೆ ತಮ್ಮ ಹೆಸರು ನಮೂದಿಸಿದ್ದಾರೆ.

* ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯ ಬುಧವಾರ ರಾಜ್‌ಕೋಟ್‌ನಲ್ಲಿ ನಡೆಯಲಿದೆ. ಟೂರ್ನಿಯ ಮೊದಲ ಎರಡು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದ ಅನುಭವಿ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕುಲ್‌ದೀಪ್ ಯಾದವ್ ಈ ಪಂದ್ಯಕ್ಕೆ ಕಮ್‌ಬ್ಯಾಕ್ ಮಾಡಲಿದ್ದಾರೆ. ಆದರೆ ಏಷ್ಯಾಕಪ್‌ನ ಫೈನಲ್ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಅಕ್ಷರ್ ಪಟೇಲ್ ಈ ಪಂದ್ಯಕ್ಕೆ ಹೆಸರಿಸಲಾಗಿದ್ದರೂ ಅವರ ಫಿಟ್‌ನೆಸ್ ದೃಢಪಡಬೇಕಿತ್ತು.
* ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನ ಪುರುಷರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತದ ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಅವರು ಕಂಚಿನ ಪದಕವನ್ನು ಗೆದ್ದಿದ್ದಾರೆ. ಇದು ಶೂಟಿಂಗ್‌ನಲ್ಲಿ ಭಾರತಕ್ಕೆ ನಾಲ್ಕನೇ ಪದಕವಾಗಿತ್ತು. ಐಶ್ವರಿ ಪ್ರತಾಪ್ ಸಿಂಗ್ ತೋಮರ್ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ಚಿನ್ನ ಗೆದ್ದು ವಿಶ್ವದಾಖಲೆ ಬರೆದ ಭಾರತದ ಪುರುಷರ ತಂಡದ ಭಾಗವಾಗಿದ್ದರು.
* ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ರೋಯಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಗಮನಸೆಳೆದಿದೆ. ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಭಾರತದ ರೋಯಿಂಗ್ ವಿಭಾಗ ಈಗಾಗಲೇ 5 ಪದಕಗಳನ್ನು ಗೆದ್ದುಕೊಂಡಿದೆ. ಇದು 2018ರಲ್ಲಿ ನಡೆದ ಕ್ರೀಡಾಕೂಟಕ್ಕಿಂತ ಎರಡು ಹೆಚ್ಚು ಪದಕಗಳಾಗಿದೆ. ಅದ್ಭುತ ಪ್ರದರ್ಶನ ನೀಡಿರುವ ಭಾರತದ ರೋವರ್‌ಗಳು ಇಡೀ ದೇಶವೇ ಹೆಮ್ಮೆ ಪಡುವಂಥಾ ಪ್ರದರ್ಶನ ನೀಡಿದ್ದಾರೆ.
ಈ ಹಿಂದಿನ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದುಕೊಂಡಿದ್ದ ಸುಖ್‌ಮೀತ್ ಸಿಂಗ್ ಸೇರಿದಂತೆ ಬಲಿಷ್ಠ ರೋಯಿಂಗ್ ಪಡೆಯನ್ನು ಭಾರತ ಹೊಂದಿದೆ. ಹೀಗಾಗಿಯೇ ಭಾರತದ ಪುರುಷರ ರೋಯಿಂಗ್‌ನಲ್ಲಿ ಎಲ್ಲಾ ವಿಭಾಗದಲ್ಲಿಯೂ ಭಾರತ ಪದಕ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ ಮಹಿಳೆಯ ರೋಯಿಂಗ್ ತಂಡದಿಂದ ನಿರೀಕ್ಷಿತ ಪ್ರದರ್ಶನ ಬಾರಲಿಲ್ಲ. ಮಹಿಳೆಯ ವಿಭಾಗದಲ್ಲಿ ಒಂದು ಪದಕವನ್ನು ಕುಡ ಭಾರತ ಗೆಲ್ಲಲು ಸಾಧ್ಯವಾಗಲಿಲ್ಲ.
* ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯ ಬುಧವಾರ ಆಯೋಜನೆಯಾಗಲಿದೆ. ಟೀಮ್ ಇಂಡಿಯಾ ಈ ಸರಣಿಯನ್ನು ಈಗಾಗಲೇ ತನ್ನ ವಶಕ್ಕೆ ಪಡೆದುಕೊಂಡಿದೆ. ಸರಣಿಯ ಮೊದಲ ಎರಡು ಪಂದ್ಯಗಳನ್ನು ಗೆದ್ದುಕೊಂಡಿರುವ ಭಾರತ ತಂಡಕ್ಕೆ ಅಂತಿಮ ಪಂದ್ಯದಲ್ಲಿ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ಸ್ಟಾರ್ ಆಟಗಾರರು ಕಮ್‌ಬ್ಯಾಕ್ ಮಾಡಲಿದ್ದಾರೆ. ಆದರೆ ಕೊನೆಯ ಪಂದ್ಯಕ್ಕೆ ಆಯ್ಕೆಯಾಗಿದ್ದ ಮೂವರು ಆಟಗಾರರನ್ನು ವಿಶ್ರಾಂತಿಯ ಹಿನ್ನೆಲೆಯಲ್ಲಿ ಕೈಬಿಡಲಾಗಿದೆ.