For Quick Alerts
ALLOW NOTIFICATIONS  
For Daily Alerts

ಸೆಪ್ಟೆಂಬರ್ 30: ಏಷ್ಯಾಡ್ ಸ್ಕ್ವಾಷ್, ಟೆನಿಸ್‌ನಲ್ಲಿ ಭಾರತಕ್ಕೆ ಚಿನ್ನ; ವಿಶ್ವಕಪ್‌ಗೆ ಮಳೆ ಭೀತಿ: ಕ್ರೀಡಾ ಲೋಕದ ಇಂದಿನ ಸುದ್ದಿ

* ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಶೂಟಿಂಗ್ ವಿಭಾಗದಲ್ಲಿ ಭಾರತದ ಅದ್ಭುತ ಪ್ರದರ್ಶನ ಶನಿವಾರವೂ ಮುಂದುವರಿದಿದೆ. ಶನಿವಾರ ನಡೆದ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಫೈನಲ್‌ನಲ್ಲಿ ಭಾರತದ ಜೋಡಿಯಾದ ಸರಬ್ಜೋತ್ ಸಿಂಗ್ ಮತ್ತು ದಿವ್ಯಾ ಥಡಿಗೋಲ್ ವೀರಾವೇಶದ ಪ್ರಯತ್ನವನ್ನು ಮಾಡಿದರು. ಆದರೆ ಚಿನ್ನದ ಪದಕಕ್ಕೆ ಮುತ್ತಿಕ್ಕಲು ಸಫಲವಾಗದೆ ನಿರಾಸೆ ಅನುಭವಿಸಿದರು ಕೂಡ ಅರ್ಹವಾಗಿಯೇ ಬೆಳ್ಳಿ ಪದಕವನ್ನು ಕೊರಳಿಗೇರಿಸಿಕೊಂಡಿದ್ದಾರೆ.

* ಭಾರತದ ಟೆನಿಸ್ ಜೋಡಿ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಅವರು ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನ ಮಿಶ್ರ ಡಬಲ್ಸ್‌ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಹ್ಯಾಂಗ್‌ಝೌ ಒಲಿಂಪಿಕ್ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ನಡೆದ ರೋಚಕ ಫೈನಲ್‌ನಲ್ಲಿ ಭಾರತದ ಈ ಡೈನಾಮಿಕ್ ಜೋಡಿ 2-6, 6-3, 10-4 ಅಂಕಗಳೊಂದಿಗೆ ತೈವಾನ್ ಜೋಡಿಯಾದ ತ್ಸುಂಗ್-ಹಾವೊ ಹುವಾಂಗ್ ಮತ್ತು ಎನ್-ಶುವೊ ಲಿಯಾಂಗ್ ವಿರುದ್ಧ ಜಯಗಳಿಸಿ ಈ ಸಾಧನೆ ಮಾಡಿದೆ.

September 30, what happened in sports World: Todays Top sports news and headlines

* 2023ರ ODI ವಿಶ್ವಕಪ್ ಅಕ್ಟೋಬರ್ 5 ರಿಂದ ಭಾರತದಲ್ಲಿ ಪ್ರಾರಂಭವಾಗಲಿದೆ. ಇದಕ್ಕೂ ಮುನ್ನ ಶುಕ್ರವಾರ, ಸೆಪ್ಟೆಂಬರ್ 29 ರಿಂದ ಅಭ್ಯಾಸ ಪಂದ್ಯಗಳು ಆರಂಭವಾಗಿವೆ. ಕ್ರಿಕೆಟ್‌ನ ಅತಿ ದೊಡ್ಡ ಮಹಾಕುಂಭ ಮೇಳ ಆರಂಭಕ್ಕೂ ಮುನ್ನ ಬಾಂಗ್ಲಾದೇಶ ಕ್ರಿಕೆಟ್ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ತಂಡದ ನಾಯಕ ಶಕೀಬ್ ಅಲ್ ಹಸನ್ ಫುಟ್ಬಾಲ್ ಆಡುವಾಗ ಗಾಯಗೊಂಡಿದ್ದಾರೆ. ವರದಿಯ ಪ್ರಕಾರ, ಶಕೀಬ್ ಅಭ್ಯಾಸ ಪಂದ್ಯ ಮತ್ತು ವಿಶ್ವಕಪ್‌ನ ಮೊದಲ ಪಂದ್ಯ ಎರಡರಿಂದಲೂ ಹೊರಗುಳಿದಿದ್ದಾರೆ.

* ಪುರುಷರ ಸ್ಕ್ವಾಷ್ ತಂಡ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತ ಬದ್ಧ ಎದುರಾಳಿ ಪಾಕಿಸ್ತಾನವನ್ನು ಭರ್ಜರಿಯಾಗಿ ಮಣಿಸಿದ್ದು ಚಿನ್ನದ ಪದಕವನ್ನು ಗೆದ್ದುಕೊಂಡಿದೆ. ಸೌರವ್ ಘೋಷಾಲ್, ಅಭಯ್ ಸಿಂಗ್ ಮತ್ತು ಮಹೇಶ್ ಮಂಗಾವ್‌ಂಕರ್ ಅವರನ್ನು ಒಳಗೊಂಡ ತಂಡ ರೋಚಕ ಸೆಣೆಸಾಟದಲ್ಲಿ ಗೆದ್ದು ಬೀಗಿದೆ.

* ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯ ಮಳೆಗೆ ಆಹುತಿಯಾದ ಕಾರಣ ಈ ಸಂದರ್ಭದಲ್ಲಿ ಮಾಜಿ ನಾಯಕಿ ಹಾಗೂ ಕಾಮೆಂಟೇಟರ್ ಅಂಜುಮ್ ಚೋಪ್ರಾ ಜೊತೆಗೆ ಮಾತನಾಡಿದ ಆರ್ ಅಶ್ವಿನ್ ತಮ್ಮ ನಿವೃತ್ತಿಯ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಆರ್ ಅಶ್ವಿನ್ ಇದು ತನ್ನ ಕೊನೆಯ ವಿಶ್ವಕಪ್ ಟೂರ್ನಿಯಾಗಿರಬಹುದು ಎಂದು ಹೇಳುವ ಮೂಲಕ ಆರ್ ಅಶ್ವಿನ್ ನಿವೃತ್ತಿಯ ಸುಳಿವು ನೀಡಿದ್ದಾರೆ. ಗಮನಾರ್ಹ ಅಂಶವೆಂದರೆ ಆರ್ ಅಶ್ವಿನ್ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂಲಕ ಸುದೀರ್ಘ ಕಾಲದ ಬಳಿಕ ತಂಡಕ್ಕೆ ಕಮ್‌ಬ್ಯಾಕ್ ಮಾಡಿ ಎರಡು ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಅದಕ್ಕೂ ಮುನ್ನ ಅವರು ಆಡಿದ್ದ 2022ರ ಜನವರಿಯಲ್ಲಿ ದಕ್ಷಿಣ ಆಪ್ರಿಕಾ ವಿರುದ್ಧದ ಸರಣಿಯಲ್ಲಿ. ಹೀಗಾಗಿ ಅವರು ಏಕದಿನ ವಿಶ್ವಕಪ್‌ನ ಯೋಜನೆಯಲ್ಲಿಯೇ ಇರಲಿಲ್ಲ.

* ವಿಶ್ವಕಪ್‌ ಟೂರ್ನಿಯ ಆರಂಭಕ್ಕೂ ಮುನ್ನ ನಡೆಯುತ್ತಿರುವ ಅಭ್ಯಾಸ ಪಂದ್ಯಗಳಿಗೆ ಮಳೆ ಭಾರೀ ಕಾಟವನ್ನು ನೀಡಲು ಆರಂಭಿಸಿದೆ. ಇಂದು ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಎರಡು ಪ್ರಮುಖ ತಂಡಗಳಾದ ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಅಭ್ಯಾಸ ಪಂದ್ಯ ಕೂಡ ಮಳೆಗೆ ಆಹುತಿಯಾಗುವ ಮೂಲಕ ಭಾರೀ ನಿರಾಸೆಯುಂಟು ಮಾಡಿದೆ. ಅಲ್ಲದೆ ಇದು ವಿಶ್ವಕಪ್ ಟೂರ್ನಿಗೂ ಹಿನ್ನಡೆಯುಂಟು ಮಾಡುವ ಆತಂಕ ಮೂಡಿಸಿದೆ.

* ಮತ್ತೊಂದೆಡೆ ಆಸ್ಟ್ರೇಲಿಯಾ ಹಾಗೂ ನೆದರ್ಲೆಂಡ್ಸ್ ವಿರುದ್ಧದ ಪಂದ್ಯಕ್ಕೂ ಮಳೆ ಅಡ್ಡಿಯುಂಟು ಮಾಡಿದೆ. ಆದರೆ ಬಳಿಕ ಮಳೆ ಪಂದ್ಯ ನಡೆಯಲು ಅವಕಾಶ ನಿಡಿರುವ ಕಾರಣ 23 ಓವರ್‌ಗಳಿಗೆ ಸೀಮಿತಗೋಲಿಸಿ ಪಂದ್ಯವನ್ನು ಆರಂಭಿಸಲಾಗಿದೆ. ಆಸ್ಟ್ರೇಲಿತಾ ತಂಡ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

* ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಕ್ರಿಕೆಟಿಗ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಭಾರತೀಯ ಚಿತ್ರರಂಗದ ಪ್ರತಿಭಾನ್ವಿತ ನಟಿ ಅನುಷ್ಕಾ ಶರ್ಮಾ ದಂಪತಿಗಳು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ? ಹೌದು ಎನ್ನುತ್ತಿವೆ ಕೆಲ ವರದಿಗಳು. ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಗರ್ಭಿಣಿಯಾಗಿದ್ದು ಹಾಗಾಗಿಯೇ ಅವರು ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎಂದು ವರದಿಯಾಗಿದೆ. ಅಂದಹಾಗೆ ಒಂದು ತಿಂಗಳ ಹಿಂದೆಯೇ 'ರೆಡ್ಡಿಟ್' ನಟಿ ಅನುಷ್ಕಾ ಶರ್ಮಾ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ರೂಮರ್‌ಗಳನ್ನು ಪ್ರಕಟಿಸಿತ್ತು. ಇದೀಗ ಹಿಂದೂಸ್ತಾನ್ ಟೈಮ್ಸ್ ಈ ಬಗ್ಗೆ ವರದಿ ಮಾಡಿದ್ದು ಆ ರೂಮರ್‌ಗಳು ನಿಜವಾಗಿರುವ ಸಾಧ್ಯತೆಯಿದೆ ಎಂದು ವರದಿ ಮಾಡಿದೆ. ಮುಂದಿನ ದಿನಗಳಲ್ಲಿ ಸ್ಟಾರ್ ದಂಪತಿಯೇ ಈ ವಿಚಾರವನ್ನು ಅಧಿಕೃತವಾಗಿ ಬಹಿರಂಗಪಡಿಸಲಿದ್ದಾರೆ ಎನ್ನಲಾಗಿದೆ.

Story first published: Saturday, September 30, 2023, 21:30 [IST]
Other articles published on Sep 30, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+