ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

WFI ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ತನಿಖೆಗೆ 7 ಸದಸ್ಯರ ಸಮಿತಿ ರಚನೆ

Sexual allegations against WFI president Brij Bhushan Sharan Singh: IOA forms 7-member committee to probe

ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದೇಶದ ಪ್ರಮುಖ ಮಹಿಳಾ ರೆಸ್ಲರ್‌ಗಳು ಮಾಡಿರುವ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಭಾರತೀಯ ಒಲಿಂಪಿಕ್ಸ್ ಅಸೊಸಿಯೇಶನ್(ಐಒಎ) ಶುಕ್ರವಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಸಲುವಾಗಿ 7 ಸದಸ್ಯರ ಸಮಿತಿಯನ್ನು ರಚಿಸಿದೆ.

ಐಒಎ ರಚಿಸಿರುವ ಸಮಿತಿಯ ಏಳು ಸದಸ್ಯರಲ್ಲಿ ಮೇರಿ ಕೋಮ್, ಡೋಲಾ ಬ್ಯಾನರ್ಜಿ, ಅಲಕಾನಂದ ಅಶೋಕ್, ಯೋಗೇಶ್ವರ್ ದತ್ ಮತ್ತು ಸಹದೇವ್ ಯಾದವ್ (ಐಒಎ ಸದಸ್ಯ) ಸೇರಿದ್ದಾರೆ. ಸಮಿತಿಯು ವಿವರವಾದ ಸಭೆಯನ್ನು ನಡೆಸಿದ್ದು ತನಿಖೆಯ ಭಾಗವಾಗಿ ಸಂಬಂಧಪಟ್ಟ ಎಲ್ಲರನ್ನೂ ಕರೆಯಲಾಗುತ್ತದೆ ಎಂದು ಐಒಎ ಮೂಲಗಳು ಮಾಹಿತಿ ನೀಡಿದೆ.

Ranji Trophy: 43 ವರ್ಷಗಳ ನಂತರ ಮೊದಲ ಬಾರಿಗೆ ಮುಂಬೈ ಸೋಲಿಸಿ ಇತಿಹಾಸ ನಿರ್ಮಿಸಿದ ದೆಹಲಿ!Ranji Trophy: 43 ವರ್ಷಗಳ ನಂತರ ಮೊದಲ ಬಾರಿಗೆ ಮುಂಬೈ ಸೋಲಿಸಿ ಇತಿಹಾಸ ನಿರ್ಮಿಸಿದ ದೆಹಲಿ!

ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳನ್ನು ಮಾಡಿ ಪ್ರತಿಭಟನೆ ನಡೆಸಿರುವ ಕುಸ್ತಿಪಟುಗಳು ಶುಕ್ರವಾರ ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ಗೆ (ಐಒಎ) ಪತ್ರ ಬರೆದು ಆರೋಪಗಳ ತನಿಖೆಗೆ ತನಿಖಾ ಸಮಿತಿಯನ್ನು ರಚಿಸುವಂತೆ ಒತ್ತಾಯಿಸಿದ್ದರು.

ಕುಸ್ತಿಪಟುಗಳು ಐಒಎಗೆ ಬರೆದಿರುವ ಪತ್ರದಲ್ಲಿ ನಾಲ್ಕು ಪ್ರಮುಖ ಬೇಡಿಕೆಗಳನ್ನು ಉಲ್ಲೇಖಿಸಿದ್ದಾರೆ. "ಲೈಂಗಿಕ ಕಿರುಕುಳದ ದೂರುಗಳ ಬಗ್ಗೆ ತನಿಖೆ ನಡೆಸಲು ತಕ್ಷಣವೇ ಸಮಿತಿಯನ್ನು ನೇಮಿಸುವಂತೆ ನಾವು ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಗೆ ವಿನಂತಿಸುತ್ತೇವೆ" ಎಂದು ಬರೆಯಲಾಗಿದೆ.

ಕುಸ್ತಿಪಟುಗಳೊಂದಿಗೆ ಸಮಾಲೋಚಿಸಿ ಡಬ್ಲ್ಯುಎಫ್‌ಐನ ವ್ಯವಹಾರಗಳನ್ನು ನಡೆಸಲು ಹೊಸ ಸಮಿತಿಯನ್ನು ರಚಿಸಬೇಕು ಎಂಬ ಒತ್ತಾಯ ಕೂಡ ಇದರಲ್ಲಿ ಸೇರಿದೆ. ಇನ್ನು ಮುಂದುವರಿದು "ಡಬ್ಲ್ಯುಎಫ್‌ಐ ಅಧ್ಯಕ್ಷರನ್ನು ವಜಾ ಮಾಡುವವರೆಗೂ ನಾವು ಕದಲುವುದಿಲ್ಲ" ಎಂದು ಬರೆದು ಪತ್ರವನ್ನು ಕೊನೆಗೊಳಿಸಿದ್ದಾರೆ ಪ್ರತಿಭಟನಾನಿರತ ರೆಸ್ಲರ್‌ಗಳು.

ಇನ್ನು ಬುಧವಾರ ಪ್ರತಿಭಟನೆಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಸ್ಟಾರ್ ರೆಸ್ಲರ್ ವಿನೀಶ್ ಫೋಗಟ್ ರೆಸ್ಲಿಂಗ್ ಫೆಡರೇಶನ್‌ನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ರೆಸ್ಲರ್‌ಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ವಿನೇಶ್ ಫೋಗಟ್ ಸ್ವತಃ ತನಗೆ ಬ್ರಿಜ್ ಭೂಷಣ್ ಮಾನಸಿಕ ಹಿಂಸೆಯನ್ನು ಕೂಡ ನೀಡುತ್ತಿದ್ದು ಆತ್ಮಹತ್ಯೆಗೂ ತಾನು ಪ್ರಯತ್ನಿಸಿರುವುದಾಗಿ ಹೇಳಿಕೊಂಡಿದ್ದರು.

ಪ್ರಸ್ತುತ ಇಂಡಿಯನ್ ರೆಸ್ಲಿಂಗ್ ಫೆಡರೇಶನ್‌ನ ಮುಖ್ಯಸ್ಥರಾಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೋಕಸಭಾ ಸದಸ್ಯರೂ ಆಗಿದ್ದಾರೆ. ಉತ್ತರ ಪ್ರದೇಶದ ಕೈಸೆರ್ಗಿನಿ ಕ್ಷೇತ್ರವನ್ನು ಪ್ರತಿನಿಧಿಸುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯನ್ನು ಪ್ರತಿನಿಧಿಸುತ್ತಿದ್ದಾರೆ.

Story first published: Friday, January 20, 2023, 21:51 [IST]
Other articles published on Jan 20, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X