ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

Union Budget 2023: ಕಳೆದ ಬಾರಿಗಿಂತ 700 ಕೋಟಿ ರೂ. ಅಧಿಕ ಪಡೆದ ಕ್ರೀಡಾ ಸಚಿವಾಲಯ

Sports Budget 2023: Sports Ministry Receives Rs 700 Cr-plus Boost In Union Budget

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ, ಫೆಬ್ರವರಿ 1ರಂದು ಸಂಸತ್ತಿನಲ್ಲಿ 2023-24ರ ಆರ್ಥಿಕ ವರ್ಷಕ್ಕೆ 45,03,097 ಕೋಟಿ ರೂ. ಮೊತ್ತದ ಆಯವ್ಯಯ ಮಂಡಿಸಿದರು.

2023-24ರ ಕೇಂದ್ರ ಬಜೆಟ್‌ನಲ್ಲಿ ಭಾರತೀಯ ಕ್ರೀಡಾ ಕ್ಷೇತ್ರಕ್ಕೆ ಇತಿಹಾಸದಲ್ಲಿಯೇ ಅತ್ಯಧಿಕ ಮೊತ್ತ ಅಂದರೆ, 3,397.32 ಕೋಟಿ ರೂ. ಅನುದಾನ ನೀಡಲಾಗಿದೆ. ಕಳೆದ ಆರ್ಥಿಕ ವರ್ಷಕ್ಕಿಂತ 700 ಕೋಟಿ ರೂಪಾಯಿಗಳು ಅನುದಾನದಲ್ಲಿ ಹೆಚ್ಚಳವಾಗಿದೆ.

IND vs AUS: ಭಾರತಕ್ಕೆ ಹಿನ್ನಡೆ; ಬಾರ್ಡರ್-ಗವಾಸ್ಕರ್ ಟ್ರೋಫಿ ಮೊದಲ ಟೆಸ್ಟ್‌ನಿಂದ ಸ್ಟಾರ್ ಬ್ಯಾಟರ್ ಔಟ್!IND vs AUS: ಭಾರತಕ್ಕೆ ಹಿನ್ನಡೆ; ಬಾರ್ಡರ್-ಗವಾಸ್ಕರ್ ಟ್ರೋಫಿ ಮೊದಲ ಟೆಸ್ಟ್‌ನಿಂದ ಸ್ಟಾರ್ ಬ್ಯಾಟರ್ ಔಟ್!

ದೇಶದಲ್ಲಿ ಕ್ರೀಡಾಪಟುಗಳಿಗೆ ರಾಷ್ಟ್ರೀಯ ಶಿಬಿರಗಳನ್ನು ಆಯೋಜಿಸುವುದು, ಕ್ರೀಡಾಪಟುಗಳಿಗೆ ಮೂಲಸೌಕರ್ಯ ಮತ್ತು ಸಲಕರಣೆಗಳನ್ನು ಒದಗಿಸುವುದು, ತರಬೇತುದಾರರ ನೇಮಕ ಮತ್ತು ಕ್ರೀಡಾ ಮೂಲಸೌಕರ್ಯ ನಿರ್ವಹಣೆ ಸೇರಿದಂತೆ ಇತರ ಕಾರ್ಯಗಳನ್ನು ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ಈ ವರ್ಷ 785.52 ಕೋಟಿ ರೂಪಾಯಿಗಳು ಸಿಗಲಿದೆ.

ಇನ್ನು ಪ್ರತಿ ವರ್ಷ ನಡೆಯುವ ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ನಿಗದಿತ ಅವಧಿಯಲ್ಲಿ ಯಾವುದೇ ಭಾರತೀಯ ಕ್ರೀಡಾ ಘಟಕಕ್ಕಿಂತ ಅತಿ ಹೆಚ್ಚು ಅಂದರೆ, 1045 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. 2023-24ರ ಅವಧಿಯಲ್ಲಿ ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿಗೆ 15 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.

Sports Budget 2023: Sports Ministry Receives Rs 700 Cr-plus Boost In Union Budget

ಇತ್ತೀಚಿನ ದಿನಗಳಲ್ಲಿ ಕ್ರೀಡಾ ವಿಜ್ಞಾನದಲ್ಲಿನ ಪ್ರಗತಿಯ ಪ್ರಾಮುಖ್ಯತೆ ಮತ್ತು ಪ್ರಸ್ತುತತೆಯನ್ನು ಅರಿತು, ಈ ವರ್ಷದ ಬಜೆಟ್‌ನಲ್ಲಿ ರಾಷ್ಟ್ರೀಯ ಕ್ರೀಡಾ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರಕ್ಕೆ 13 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ.

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ರಾಷ್ಟ್ರೀಯ ಡೋಪಿಂಗ್ ವಿರೋಧಿ ಏಜೆನ್ಸಿ (NADA) 21.73 ಕೋಟಿ ರೂಪಾಯಿಗಳನ್ನು ಸ್ವೀಕರಿಸಿದೆ. ಇದೇ ವೇಳೆ ಪರೀಕ್ಷೆಗಳನ್ನು ನಡೆಸುವ ರಾಷ್ಟ್ರೀಯ ಔಷಧ ಪರೀಕ್ಷಾ ಪ್ರಯೋಗಾಲಯಕ್ಕೆ(NDTL) 19.5 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ.

2023ರ ಏಷ್ಯನ್ ಗೇಮ್ಸ್ ಮತ್ತು ಪ್ಯಾರಿಸ್ ಒಲಿಂಪಿಕ್ಸ್ ಪಂದ್ಯಾವಳಿಗಾಗಿ ಕ್ರೀಡಾಪಟುಗಳಿಗೆ ಮೂಲಸೌಕರ್ಯ, ತರಬಬೇತಿ ನೀಡಬೇಕಾಗುತ್ತದೆ. ಕ್ರೀಡಾ ವಲಯಕ್ಕೆ ಹೆಚ್ಚುವರಿ ನಿಧಿಯನ್ನು ಒದಗಿಸುವ ಮೂಲಕ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತ ಪದಕ ಗೆಲ್ಲುವ ಅವಕಾಶವನ್ನು ಹೆಚ್ಚಿಸುವಂತೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

IND vs NZ 3rd T20: ಭಾರತ vs ನ್ಯೂಜಿಲೆಂಡ್ ಫ್ಯಾಂಟಸಿ ಡ್ರೀಮ್ ಟೀಂ, ಆಡುವ ಬಳಗ, ಲೈವ್ ಸ್ಟ್ರೀಮಿಂಗ್ ವಿವರIND vs NZ 3rd T20: ಭಾರತ vs ನ್ಯೂಜಿಲೆಂಡ್ ಫ್ಯಾಂಟಸಿ ಡ್ರೀಮ್ ಟೀಂ, ಆಡುವ ಬಳಗ, ಲೈವ್ ಸ್ಟ್ರೀಮಿಂಗ್ ವಿವರ

2022ರಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿದರು. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 61 ಪದಕಗಳನ್ನು ಬುಟ್ಟಿಗೆ ಹಾಕಿಕೊಂಡಿತು. ಅದರಲ್ಲಿ 22 ಚಿನ್ನ, 16 ಬೆಳ್ಳಿ ಮತ್ತು 23 ಕಂಚಿನ ಪದಕಗಳು ಸೇರಿವೆ.

ಕ್ರೀಡಾ ಅಭಿವೃದ್ಧಿಗಾಗಿ ಎಲ್ಲ ರಾಜ್ಯಗಳಲ್ಲಿ ಖೇಲೋ ಇಂಡಿಯಾ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಉತ್ತಮ ಪ್ರತಿಕ್ರಿಯೆ ಗಳಿಸಿದೆ ಮತ್ತು ಇದು ಭಾರತದ ಗ್ರಾಮೀಣ ಪ್ರದೇಶಗಳಲ್ಲಿನ ಪ್ರತಿಭೆಗಳನ್ನು ಹೊರತೆಗೆಯಲು ಸಹಾಯ ಮಾಡಿದೆ.

Story first published: Wednesday, February 1, 2023, 17:53 [IST]
Other articles published on Feb 1, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X