Rohit Sharma: ಡಿಸ್ನಿಲ್ಯಾಂಡ್‌ನಲ್ಲಿ ಕುಟುಂಬದೊಂದಿಗೆ ಮೋಜು-ಮಸ್ತಿ ಮಾಡುತ್ತಿರುವ ರೋಹಿತ್ ಶರ್ಮಾ
ಆಸ್ಟ್ರೇಲಿಯಾ ವಿರುದ್ಧ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ಸೋಲಿನ ನಂತರ ಭಾರತ ಕ್ರಿಕೆಟ್ ತಂಡ ಮುಂಬರುವ ಸರಣಿಗಾಗಿ ವೆಸ್ಟ್ ಇಂಡೀಸ್‌ಗೆ ಪ್ರಯಾಣಿಸುವ ಮೊದಲು ಒಂದು ತಿಂಗಳು ವಿಶ್ರಾಂತಿಯಲ್ಲಿದೆ.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ತನ್ನ ಮುಂದಿನ ಸರಣಿಯನ್ನು ವೆಸ್ಟ್ ಇಂಡೀಸ್ ವಿರುದ್ಧ ಜುಲೈ 12ರಿಂದ ಟೆಸ್ಟ್ ಸರಣಿಯೊಂದಿಗೆ ಆರಂಭವಾಗಲಿದೆ.

ಸದ್ಯ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ತಮ್ಮ ಪತ್ನಿ ರಿತಿಕಾ ಸಜ್ದೇಹ್ ಮತ್ತು ಮಗಳು ಸಮೈರಾ ಜೊತೆ ವಿದೇಶ ಪ್ರವಾಸದಲ್ಲಿದ್ದು, ತಮ್ಮ ಕುಟುಂಬಕ್ಕೆ ಗುಣಮಟ್ಟದ ಸಮಯ ನೀಡುವ ಮೂಲಕ ವಿಶ್ರಾಂತಿಯ ಸಂಪೂರ್ಣ ಲಾಭ ಪಡೆಯುತ್ತಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ಮತ್ತು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) 2023ರ ಫೈನಲ್ ಪಂದ್ಯದ ಹೀನಾಯ ಸೋಲಿನ ನಂತರ ರೋಹಿತ್ ಶರ್ಮಾ ಪ್ರಸ್ತುತ ಕ್ರಿಕೆಟ್‌ನಿಂದ ವಿಶ್ರಾಂತಿ ಅನುಭವಿಸುತ್ತಿದ್ದಾರೆ.
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಇತ್ತೀಚೆಗೆ ಡಿಸ್ನಿಲ್ಯಾಂಡ್‌ನ ವಾಲ್ಟ್ ಡಿಸ್ನಿ ವರ್ಲ್ಡ್‌ನಲ್ಲಿ ತನ್ನ ಕುಟುಂಬದೊಂದಿಗಿರುವ ಅತಿ ಸುಂದರವಾದ ಕ್ಷಣಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ.
ಬುಧವಾರ, ಜೂನ್ 21ರಂದು ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ರೋಹಿತ್ ಶರ್ಮಾ ತಮ್ಮ ಅಭಿಮಾನಿಗಳಿಗೆ ಕ್ರಿಕೆಟ್ ರಜೆಯ ನೋಟವನ್ನು ನೀಡಲು ಸಣ್ಣ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ರೋಹಿತ್ ಶರ್ಮಾ ಪೋಸ್ಟ್‌ಗೆ "ಮ್ಯಾಜಿಕಲ್ ಸಂಜೆ' ಶೀರ್ಷಿಕೆ ನೀಡಿದ್ದಾರೆ.
ಸದ್ಯ ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಫಾರ್ಮ್ ಮತ್ತೊಂದು ಕಳಪೆಯಾಗಿ ಸಾಗುತ್ತಿದ್ದು, ಅವರ ಬ್ಯಾಟಿಂಗ್ ಬಗ್ಗೆ ಪ್ರಶ್ನೆಗಳು ಎದ್ದಿವೆ. ಭಾರತ ತಂಡದ ಆರಂಭಿಕ ಬ್ಯಾಟರ್ ಆಸ್ಟ್ರೇಲಿಯಾ ವಿರುದ್ಧ 2023ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಗಮನಾರ್ಹ ಪರಿಣಾಮ ಬೀರಲು ವಿಫಲರಾದರು. ಮೊದಲ ಇನ್ನಿಂಗ್ಸ್‌ನಲ್ಲಿ 15 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 43 ರನ್ ಗಳಿಸಿದರು.
ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 209 ರನ್‌ಗಳ ಸೋಲು ರೋಹಿತ್ ಶರ್ಮಾ ಪಡೆಗೆ ಮತ್ತೊಂದು ಆಘಾತ ಎದುರಿಸುವಂತಾಯಿತು. ದಶಕದ ನಂತರವೂ ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಮತ್ತೊಮ್ಮೆ ಕಳೆದುಕೊಂಡಿತು.
ಐಪಿಎಲ್ 2023ರಲ್ಲಿ ಬ್ಯಾಟ್‌ನೊಂದಿಗೆ ಕಳಪೆ ಪ್ರದರ್ಶನ ನೀಡಿದಾಗ ರೋಹಿತ್ ಶರ್ಮಾ ಅನೇಕರಿಂದ ಟೀಕೆಗೆ ಗುರಿಯಾದರು. ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ 16 ಪಂದ್ಯಗಳಿಂದ 20.75ರ ಸರಾಸರಿಯಲ್ಲಿ 332 ರನ್‌ಗಳನ್ನು ಗಳಿಸಲು ಮಾತ್ರ ಸಾಧ್ಯವಾಯಿತು.
ವೆಸ್ಟ್ ಇಂಡೀಸ್ ವಿರುದ್ಧ ರೋಹಿತ್ ಶರ್ಮಾ ಎಲ್ಲಾ ಸರಣಿಯನ್ನು ಆಡುವ ಸಾಧ್ಯತೆ ಇಲ್ಲ
ಭಾರತ ತಂಡವು ಜುಲೈನಲ್ಲಿ ವೆಸ್ಟ್ ಇಂಡೀಸ್‌ಗೆ ಬಹು ಮಾದರಿಯ ಸರಣಿಗಾಗಿ ಪ್ರವಾಸ ಕೈಗೊಳ್ಳುವ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲಿದೆ. ಉಭಯ ತಂಡಗಳು ಎರಡು ಟೆಸ್ಟ್ ಪಂದ್ಯಗಳು, ಮೂರು ಏಕದಿನ ಪಂದ್ಯಗಳು ಮತ್ತು ಐದು ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಲಿವೆ. ವರದಿಗಳ ಪ್ರಕಾರ, ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಕೆಲವು ಸರಣಿಗೆ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲು ಭಾರತೀಯ ಆಯ್ಕೆ ಸಮಿತಿ ಪರಿಗಣಿಸುತ್ತಿದೆ.
"ಐಪಿಎಲ್ ಮತ್ತು ಇಂಗ್ಲೆಂಡ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಸ್ವಲ್ಪ ದಣಿದಂತೆ ಕಾಣುತ್ತಿದ್ದರು. ಆಯ್ಕೆಗಾರರು ವೆಸ್ಟ್ ಇಂಡೀಸ್ ಪ್ರವಾಸದ ಕೆಲವು ಭಾಗಕ್ಕೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ".
"ರೋಹಿತ್ ಶರ್ಮಾ ಟೆಸ್ಟ್ ಸರಣಿ ಅಥವಾ ಎಂಟು ಪಂದ್ಯಗಳ ವೈಟ್-ಬಾಲ್ ಸರಣಿಯನ್ನು ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ. ಭಾರತೀಯ ಆಯ್ಕೆಗಾರರು ರೋಹಿತ್ ಶರ್ಮಾ ಜೊತೆ ಮಾತನಾಡುತ್ತಾರೆ ಮತ್ತು ನಂತರ ನಿರ್ಧಾರ ತೆಗೆದುಕೊಳ್ಳುತ್ತಾರೆ," ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಎರಡು ಟೆಸ್ಟ್ ಪಂದ್ಯಗಳಿಗೆ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿದರೆ, ತಂಡಕ್ಕೆ ಮರಳಿರುವ ಅಜಿಂಕ್ಯ ರಹಾನೆ ರೆಡ್ ಬಾಲ್ ಸರಣಿಯ ನಾಯಕತ್ವದ ಜವಾಬ್ದಾರಿ ಪಡೆದುಕೊಳ್ಳಬಹುದು. ರೋಹಿತ್ ಶರ್ಮಾ ವೈಟ್ ಬಾಲ್ ಸರಣಿಯಿಂದ ಹೊರಗುಳಿದರೆ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕನಾಗಿ ಮುನ್ನಡೆಸುವ ಸಾಧ್ಯತೆ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications