ಟೋಕಿಯೋ ಒಲಿಂಪಿಕ್ಸ್: ನಿರಾಸೆ ಮೂಡಿಸಿದ ಭಾರತದ ದ್ಯುತಿ ಚಾಂದ್

ಟೋಕಿಯೋ ಒಲಿಂಪಿಕ್ಸ್ ಆರಂಭವಾಗಿ 10 ದಿನಗಳೇ ಕಳೆದಿದ್ದು ಇದುವರೆಗೂ ಭಾರತ 1 ಬೆಳ್ಳಿ ಮತ್ತು 1 ಕಂಚಿನ ಪದಕವನ್ನು ಗೆದ್ದಿದೆ. ಭಾನುವಾರ ನಡೆದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ಕಂಚಿನ ಪದಕದ ಸುತ್ತಿನಲ್ಲಿ ಚೀನಾದ ಬ್ಯಾಡ್ಮಿಂಟನ್ ಆಟಗಾರ್ತಿ ಹಿ ಬಿಂಗ್ ಜಿಯಾವೊ ವಿರುದ್ಧ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಜಯ ಗಳಿಸುವುದರ ಮೂಲಕ ಪ್ರಸ್ತುತ ನಡೆಯುತ್ತಿರುವ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡನೇ ಪದಕವನ್ನು ತಂದುಕೊಟ್ಟರು.
ಇನ್ನು ಟೋಕಿಯೋ ಒಲಿಂಪಿಕ್ಸ್‌ನ ಹನ್ನೊಂದನೇ ದಿನವಾದ ಇಂದು (ಆಗಸ್ಟ್ 2) ಕ್ರೀಡಾಪಟು ದ್ಯುತಿ ಚಾಂದ್ ಅಥ್ಲೆಟಿಕ್ಸ್ ಮಹಿಳೆಯರ ವಿಭಾಗದ 200 ಮೀ ಹಿಟ್ 4 ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಬೆಳಗಿನ ಜಾವ 7.24ಕ್ಕೆ ಆರಂಭವಾದ ಈ ಸ್ಪರ್ಧೆಯಲ್ಲಿ ಭಾರತದ ದ್ಯುತಿ ಚಾಂದ್ ಕೊನೆಯ ಸ್ಥಾನವನ್ನು ಪಡೆದುಕೊಳ್ಳುವುದರ ಮೂಲಕ ನಿರಾಸೆ ಮೂಡಿಸಿದ್ದಾರೆ. 7 ಸ್ಪರ್ಧಿಗಳು ಭಾಗವಹಿಸಿದ್ದ ಈ ಸುತ್ತಿನಲ್ಲಿ ಮೊದಲ 3 ಸ್ಪರ್ಧಿಗಳು ಮುಂದಿನ ಸುತ್ತಿಗೆ ಪ್ರವೇಶಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ. 200 ಮೀಟರ್‌ನ್ನು ಮುಟ್ಟಲು 23.85 ಸೆಕೆಂಡ್‌ಗಳನ್ನು ತೆಗೆದುಕೊಂಡ ಭಾರತದ ದ್ಯುತಿ ಚಾಂದ್ ಮುಂದಿನ ಸುತ್ತಿಗೆ ಅರ್ಹತೆ ಯನ್ನು ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.
ಇನ್ನು ಟೋಕಿಯೋ ಒಲಿಂಪಿಕ್ಸ್‌ನ ಹನ್ನೊಂದನೇ ದಿನವಾದ ಇಂದು (ಆಗಸ್ಟ್ 2) ಭಾರತದ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಸುತ್ತಿನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಮಹಿಳಾ ಹಾಕಿ ತಂಡದ ವಿರುದ್ಧ ಸೆಣಸಾಟ ನಡೆಸಲಿದೆ. ಆರಂಭದ ಪಂದ್ಯಗಳಲ್ಲಿ ಹ್ಯಾಟ್ರಿಕ್ ಸೋಲು ಕಂಡು ತದನಂತರ ಪುಟಿದೆದ್ದಿರುವ ಭಾರತೀಯ ಮಹಿಳಾ ಹಾಕಿ ತಂಡ ಟೋಕಿಯೋ ಒಲಿಂಪಿಕ್ಸ್ 2020ರಲ್ಲಿ ಸೋಲನ್ನೇ ಕಾಣದ ಬಲಿಷ್ಠ ಆಸ್ಟ್ರೇಲಿಯಾ ಮಹಿಳಾ ಹಾಕಿ ತಂಡವನ್ನು ಎದುರಿಸುತ್ತಿದ್ದು ಈ ಪಂದ್ಯದಲ್ಲಿ ಗೆದ್ದರೆ ಭಾರತ ಮಹಿಳಾ ಹಾಕಿ ತಂಡ ಸೆಮಿಫೈನಲ್ ಪ್ರವೇಶವನ್ನು ಪಡೆದುಕೊಳ್ಳಲಿದೆ.
ಹಾಗೂ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾನುವಾರ (ಆಗಸ್ಟ್ 1) ನಡೆದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ಕಂಚಿನ ಪದಕದ ಸುತ್ತಿನಲ್ಲಿ ಭಾರತದ ಪಿ ವಿ ಸಿಂಧು ಚೀನಾದ ಹಿ ಬಿಂಗ್ ಜಿಯಾವೊ ವಿರುದ್ಧ 21-13, 21-15 ಸೆಟ್‌ಗಳ ಅಂತರದಿಂದ ಜಯ ಸಾಧಿಸುವುದರ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿಯ ಪದಕವನ್ನು ಗೆದ್ದಿದ್ದ ಪಿ ವಿ ಸಿಂಧು 2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕವನ್ನು ಗೆಲ್ಲುವುದರ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತದ ಪರ 2 ಪದಕಗಳನ್ನು ಪಡೆದ ಭಾರತೀಯೆ ಎಂಬ ದಾಖಲೆಯನ್ನು ಬರೆದಿದ್ದಾರೆ.
ಈ ಮೂಲಕ ಭಾರತ ಪ್ರಸ್ತುತ ನಡೆಯುತ್ತಿರುವ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ತನ್ನ ಎರಡನೇ ಪದಕವನ್ನು ಸಂಪಾದಿಸಿಕೊಂಡಿದ್ದು ಇತಿಹಾಸ ನಿರ್ಮಿಸಿರುವ ಪಿವಿ ಸಿಂಧುಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆಯ ಸುರಿಮಳೆ ಸುರಿಯುತ್ತಿದೆ. ಹಾಗೂ ಪದಕದಾಸೆಯನ್ನು ಹುಟ್ಟುಹಾಕಿರುವ ಕಮಲ್ ಪ್ರೀತ್ ಕೌರ್ ಇಂದು (ಆಗಸ್ಟ್ 2) ಮಹಿಳಾ ಡಿಸ್ಕಸ್ ಥ್ರೋ ಫೈನಲ್ ಸುತ್ತಿನಲ್ಲಿ ಸೆಣಸಾಡಲಿದ್ದು ಚಿನ್ನದ ಪದಕವನ್ನು ಗೆದ್ದು ಬರುವ ನಿರೀಕ್ಷೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications