ಭಾರತದ ಮಹಿಳಾ ಶೂಟರ್ಗಳಾದ ಮನು ಭಾಕೆರ್ ಮತ್ತು ಯಶಸ್ವಿನಿ ಸಿಂಗ್ ದೇಸ್ವಾಲ್ ಟೊಕಿಯೊ ಒಲಿಂಪಿಕ್ಸ್ ಕ್ರೀಡಾಕೂಟ ಆರಂಭವಾಗುವ ಮುನ್ನ ಭಾರೀ ನಿರೀಕ್ಷೆಯನ್ನು ಹುಟ್ಟು ಹಾಕಿದ್ದರು. ಇಂದು ನಡೆದ 10 ಮೀ. ಮಹಿಳಾ ಪಿಸ್ತೂಲ್ ಅರ್ಹತಾ ಸುತ್ತಿನಲ್ಲಿ ಭಾಗವಹಿಸಿದ ಈ ಇಬ್ಬರೂ ಸಹ ಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವಲ್ಲಿ ಎಡವಿದ್ದಾರೆ.
10 ಮೀ. ಮಹಿಳಾ ಪಿಸ್ತೂಲ್ ಅರ್ಹತಾ ಸುತ್ತಿನಲ್ಲಿ ಭಾರತದ ವನಿತೆಯರಾದ ಯಶಸ್ವಿನಿ ಸಿಂಗ್ ದೇಸ್ವಾಲ್ ಮತ್ತು ಮನು ಭಾಕೆರ್ ವಿಫಲರಾಗಿದ್ದಾರೆ. ಅರ್ಹತಾ ಸುತ್ತಿನಲ್ಲಿ ಮನು ಭಾಕೆರ್ 12ನೇ ಸ್ಥಾನ ಪಡೆದುಕೊಂಡರೆ ಯಶಸ್ವಿನಿ ಸಿಂಗ್ ದೆಸ್ವಾಲ್ 13ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಅರ್ಹತಾ ಸುತ್ತಿನಲ್ಲಿ ಟಾಪ್ 8 ಸ್ಥಾನ ಪಡೆದ ಸ್ಪರ್ಧಿಗಳನ್ನು ಫೈನಲ್ ಸುತ್ತಿಗೆ ಆಯ್ಕೆ ಮಾಡಲಾಗುತ್ತದೆ. ಹೀಗಾಗಿ ಅರ್ಹತಾ ಸುತ್ತಿನಲ್ಲಿ ಭಾರತೀಯ ವನಿತೆಯರಾದ ಯಶಸ್ವಿನಿ ಮತ್ತು ಮನೋ ವಿಫಲರಾಗಿದ್ದಾರೆ.
ಮನು ಭಾಕೆರ್ 575 ಪಾಯಿಂಟ್ಸ್ ಗಳಿಸಿ ಅರ್ಹತಾ ಸುತ್ತಿನಲ್ಲಿ 12ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರೆ, ಯಶಸ್ವಿನಿ ಸಿಂಗ್ ದೆಸ್ವಾಲ್ 574 ಪಾಯಿಂಟ್ಸ್ ಗಳಿಸಿ 13ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.