ಟೋಕಿಯೋ ಒಲಿಂಪಿಕ್ಸ್: ಭಾರತೀಯ ಕ್ರೀಡಾಪಟುಗಳಿಗೆ ಶುಭಹಾರೈಸಿದ ನರೇಂದ್ರ ಮೋದಿ

ಕೊರೊನಾ ವೈರಸ್ ಭೀತಿಯ ನಡುವೆಯೇ ಟೋಕಿಯೋ ಒಲಿಂಪಿಕ್ಸ್ 2020ಕ್ಕೆ ಚಾಲನೆ ದೊರೆತಿದೆ. ಭಾರತ ಸೇರಿದಂತೆ ಹಲವಾರು ದೇಶಗಳ ಸಾವಿರಾರು ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು ಶುಕ್ರವಾರ ಕ್ರೀಡಾಜ್ಯೋತಿಯನ್ನು ಬೆಳಗಿಸುವ ಮೂಲಕ ಒಲಿಂಪಿಕ್ಸ್‌ಗೆ ಚಾಲನೆ ನೀಡಲಾಯಿತು.
ಟೊಕಿಯೊ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದ ಕೆಲ ತುಣುಕುಗಳನ್ನು ದೂರದರ್ಶನದ ಮೂಲಕ ಕಣ್ತುಂಬಿಕೊಂಡ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ 'ಬನ್ನಿ ನಾವೆಲ್ಲರೂ ಭಾರತವನ್ನು ಪ್ರೋತ್ಸಾಹಿಸೋಣ' ಎಂದಿದ್ದಾರೆ. ತಾವು ದೂರದರ್ಶನದ ಮೂಲಕ ಟೊಕಿಯೊ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭವನ್ನು ನೋಡುತ್ತಿರುವ ಫೋಟೋವನ್ನು ಟ್ವಿಟ್ಟರ್ ಮೂಲಕ ಹಂಚಿಕೊಂಡಿರುವ ನರೇಂದ್ರ ಮೋದಿ ಎಲ್ಲರೂ ಭಾರತೀಯ ಕ್ರೀಡಾಪಟುಗಳಿಗೆ ಬೆಂಬಲ ನೀಡಿ ಎಂದು ಭಾರತೀಯ ಜನತೆಗೆ ಕರೆ ನೀಡಿದ್ದಾರೆ.
ಹಾಗೂ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಭಾರತದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಅಷ್ಟೇ ಅಲ್ಲದೆ ಇತ್ತೀಚಿನ ಕೆಲ ದಿನಗಳ ಹಿಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಕ್ರೀಡಾಪಟುಗಳ ಜೊತೆ ನರೇಂದ್ರ ಮೋದಿ ಮಾತುಕತೆ ನಡೆಸಿ ಮುಂಬರುವ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications