Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟೋಕಿಯೋ ಒಲಿಂಪಿಕ್ಸ್‌: ರೋಯಿಂಗ್‍ನಲ್ಲಿ ಸೆಮಿಫೈನಲ್‌ ಪ್ರವೇಶಿಸಿದ ಅರ್ಜುನ್ ಮತ್ತು ಅರವಿಂದ್

Tokyo Olympics 2020: Rowers Arjun, Arvind qualify for Semi Finals

ಟೋಕಿಯೋ ಒಲಿಂಪಿಕ್ಸ್‌ನ ಮೂರನೇ ದಿನ ಭಾರತೀಯ ಕ್ರೀಡಾಪಟುಗಳ ಉತ್ತಮ ಆರಂಭವನ್ನು ಪಡೆದುಕೊಂಡಿದ್ದಾರೆ. ಪುರುಷರ ರೋಯಿಂಗ್ ವಿಭಾಗದಲ್ಲಿ ಭಾರತದ ಕ್ರೀಡಾ ಪಟುಗಳಾದ ಅರವಿಂದ್ ಮತ್ತು ಅರ್ಜುನ್ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಪದಕ ಗೆಲ್ಲುವ ಆಸೆಯನ್ನು ಜೀವಂತವಾಗಿ ಉಳಿಸಿಕೊಂಡಿರುವ ಅರವಿಂದ್ ಮತ್ತು ಅರ್ಜುನ್ ಜುಲೈ 27ರಂದು ಸೆಮಿಫೈನಲ್‌ನಲ್ಲಿ ಎದುರಾಳಿಗಳ ಜೊತೆ ಸೆಣೆಸಾಡಲಿದ್ದಾರೆ.

ಇತ್ತ ಅರವಿಂದ್ ಮತ್ತು ಅರ್ಜುನ್ ರೋಯಿಂಗ್ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದರೆ ಅತ್ತ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೊದಲ ಪಂದ್ಯವನ್ನು ಜಯಿಸುವುದರ ಮೂಲಕ ಶುಭಾರಂಭ ಮಾಡಿದ್ದಾರೆ. ಇಸ್ರೇಲ್ ತಂಡದ ಆಟಗಾರ್ತಿ ಪೊಲಿಕರ್ಪೊವ ವಿರುದ್ಧ 21-7, 21-10 ಅಂತರದಿಂದ ಜಯ ಗಳಿಸುವುದರ ಮೂಲಕ ಪಿವಿ ಸಿಂಧು ಒಲಿಂಪಿಕ್ಸ್‌ನ ತಮ್ಮ ಮೊದಲ ಪಂದ್ಯದಲ್ಲಿಯೇ ಜಯಭೇರಿ ಬಾರಿಸಿದ್ದಾರೆ.

ಹಾಗೂ 10 ಮೀ. ಮಹಿಳಾ ಪಿಸ್ತೂಲ್ ಅರ್ಹತಾ ಸುತ್ತಿನಲ್ಲಿ ಭಾರತೀಯ ವನಿತೆಯರಾದ ಮನು ಭಾಕೆರ್ ಮತ್ತು ಯಶಸ್ವಿನಿ ಸಿಂಗ್ ದೇಸ್ವಾಲ್ ಕ್ರಮವಾಗಿ 12 ಮತ್ತು 13ನೇ ಸ್ಥಾನವನ್ನು ಪಡೆದುಕೊಂಡರು. ಫೈನಲ್ ಪ್ರವೇಶಿಸಲು ಟಾಪ್ ಎಂಟರಲ್ಲಿ ಸ್ಥಾನ ಪಡೆದುಕೊಳ್ಳಬೇಕು, ಹೀಗಾಗಿ ಟಾಪ್ 8ರಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲರಾದ ಮನು ಭಾಕೆರ್ ಮತ್ತು ಯಶಸ್ವಿನಿ ಸಿಂಗ್ ದೆಸ್ವಾಲ್ ಒಲಿಂಪಿಕ್ಸ್‌ನಿಂದ ಹೊರಬಿದ್ದಿದ್ದಾರೆ.

Story first published: Sunday, July 25, 2021, 10:03 [IST]
Other articles published on Jul 25, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+