ಟೋಕಿಯೋ ಒಲಿಂಪಿಕ್ಸ್: ಫೈನಲ್ ಪ್ರವೇಶಿಸುವಲ್ಲಿ ಅರ್ಜುನ್ ಮತ್ತು ಅರವಿಂದ್ ವಿಫಲ

ಟೋಕಿಯೋ ಒಲಿಂಪಿಕ್ಸ್ ರೋಯಿಂಗ್ ಡಬಲ್ಸ್ ವಿಭಾಗದಲ್ಲಿ ಭಾರತದ ಕ್ರೀಡಾಪಟುಗಳಾದ ಅರ್ಜುನ್ ಮತ್ತು ಅರವಿಂದ್ ಜೋಡಿ ಭಾನುವಾರ ಅತ್ಯುತ್ತಮ ಪ್ರದರ್ಶನ ನೀಡುವುದರ ಮೂಲಕ ಸೆಮಿಫೈನಲ್ ಪ್ರವೇಶಿಸಿತ್ತು. ಇಂದು ನಡೆದ ಸೆಮಿಫೈನಲ್ ಸುತ್ತಿನಲ್ಲಿ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವುದರ ಮೂಲಕ ಅರ್ಜುನ್ ಮತ್ತು ಅರವಿಂದ್ ಜೋಡಿ ಫೈನಲ್ ಪ್ರವೇಶಿಸುವ ಅವಕಾಶವನ್ನು ಕೈ ತಪ್ಪಿಸಿಕೊಂಡಿದೆ.
ಸೆಮಿಫೈನಲ್ ಸುತ್ತಿನಲ್ಲಿ ಭಾಗವಹಿಸಿದ್ದ 6 ಜೋಡಿಗಳಲ್ಲಿ ಭಾರತದ ಅರ್ಜುನ್ ಲಾಲ್ ಜತ್ ಮತ್ತು ಅರವಿಂದ್ ಸಿಂಗ್ ಕೊನೆಯ ಸ್ಥಾನ ಪಡೆದುಕೊಳ್ಳುವುದರ ಮೂಲಕ ಸೆಮಿಫೈನಲ್ ಸುತ್ತಿಗೆ ತಮ್ಮ ಆಟ ನಿಲ್ಲಿಸಿದ್ದಾರೆ. ಈ ಮೂಲಕ ರೋಯಿಂಗ್ ವಿಭಾಗದಲ್ಲಿ ಸೆಮಿಪೈನಲ್ ಪ್ರವೇಶಿಸಿದ ಅರವಿಂದ್ ಮತ್ತು ಅರ್ಜುನ್ ಜವಾಬ್ದಾರಿಯುತ ಪ್ರದರ್ಶನವನ್ನು ನೀಡಿ ಮೆಚ್ಚುಗೆ ಪಡೆದುಕೊಂಡಿದ್ದಾರೆ.
ಅತ್ತ ಭಾರತೀಯ ಮಹಿಳಾ ಹಾಕಿ ತಂಡ ಗ್ರೇಟ್ ಬ್ರಿಟನ್ ಹಾಕಿ ತಂಡದ ವಿರುದ್ಧ ಸೋಲನ್ನಪ್ಪಿದ್ದರೆ, ಹಾಂಗ್‌ಕಾಂಗ್ ಆಟಗಾರ್ತಿಯ ವಿರುದ್ಧ ಭಾರತದ ಪಿವಿ ಸಿಂಧು ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಜಯಗಳಿಸುವುದರ ಮೂಲಕ 16ರ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications