ಟೋಕಿಯೋ ಒಲಿಂಪಿಕ್ಸ್: ಆರಂಭದ ಪಂದ್ಯದಲ್ಲೇ ಮುಗ್ಗರಿಸಿದ ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ

ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ ಮಹಿಳಾ ಟೆನಿಸ್ ಡಬಲ್ಸ್ ವಿಭಾಗದಲ್ಲಿ ಉಕ್ರೇನ್ ದೇಶದ ಕಿಚೆನೊಕ್ ಸಹೋದರಿಯರ ವಿರುದ್ಧ 6-0, 6-7, 8-10 ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ. ಇದೇ ಮೊದಲ ಬಾರಿಗೆ ಜೋಡಿಯಾಗಿ ಕಣಕ್ಕಿಳಿದಿದ್ದ ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ ಮೊದಲ ಸೆಟ್‌ನಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿದರು.
ಮೊದಲ ಸೆಟ್‌ನಲ್ಲಿ ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ ಎದುರಾಳಿ ಉಕ್ರೇನ್ ತಂಡದ ಕಿಚೆನೊಕ್ ಸಹೋದರಿಯರ ವಿರುದ್ಧ 6-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ ಎರಡನೇ ಮತ್ತು ಮೂರನೇ ಸೆಟ್‌ನಲ್ಲಿ ಕಿಚೆನೊಕ್ ಸಹೋದರಿಯರ ವಿರುದ್ಧ ಮಂಕಾದ ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ 6-7 ಮತ್ತು 8-10 ಅಂತರದಿಂದ ಸೋಲನ್ನು ಅನುಭವಿಸಿದರು.
ಈ ಮೂಲಕ ನಾಲ್ಕನೇ ಬಾರಿ ಒಲಿಂಪಿಕ್ಸ್ ಪ್ರವೇಶಿಸಿರುವ ಸಾನಿಯಾ ಮಿರ್ಜಾ ತಮ್ಮ ಮೊದಲನೇ ಪಂದ್ಯದಲ್ಲಿಯೇ ಮುಗ್ಗರಿಸಿದ್ದಾರೆ. ಅತ್ತ ರೋಯಿಂಗ್ ಪುರುಷರ ವಿಭಾಗದಲ್ಲಿ ಭಾರತದ ಕ್ರೀಡಾಪಟುಗಳಾದ ಅರ್ಜುನ್ ಮತ್ತು ಅರವಿಂದ್ ಜಯಸಾಧಿಸಿದ್ದು ಸೆಮಿಫೈನಲ್ ಪ್ರವೇಶಿಸಿದ್ದಾರೆ. ಹಾಗೂ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಈ ಬಾರಿಯ ಒಲಿಂಪಿಕ್ಸ್‌ನ ತಮ್ಮ ಮೊದಲ ಪಂದ್ಯದಲ್ಲಿಯೇ ಜಯ ಗಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications