Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟೋಕಿಯೋ ಒಲಿಂಪಿಕ್ಸ್: ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಶರತ್ ಕಮಲ್

Tokyo Olympics 2020: Sharath Kamal outplays Tiago, wins 4-2 to move to Round 3 in table tennis

ನಾಲ್ಕನೇ ದಿನದ ಟೊಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತೀಯರು ಶುಭಾರಂಭ ಮಾಡಿದ್ದಾರೆ. ಮೊದಲಿಗೆ ಸೇಬರ್ ಫೆನ್ಸಿಂಗ್ ಕ್ರೀಡೆಯಲ್ಲಿ ಭಾರತೀಯ ವನಿತೆ ಭವಾನಿದೇವಿ ಜಯ ಸಾಧಿಸುವುದರ ಮೂಲಕ ಉತ್ತಮ ಆರಂಭವನ್ನು ಮಾಡಿದರು. ಅತ್ತ ಆರ್ಚರಿ ಪುರುಷರ ವಿಭಾಗದಲ್ಲಿ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ಕಜಕಿಸ್ತಾನದ ವಿರುದ್ಧ ಗೆಲುವು ಸಾಧಿಸುವುದರ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಇನ್ನು ಟೇಬಲ್ ಟೆನಿಸ್ ಎರಡನೇ ರೌಂಡ್‌ನಲ್ಲಿ ಭಾಗವಹಿಸಿದ ಭಾರತದ ಶರತ್ ಕಮಲ್ ಪೋರ್ಚುಗಲ್ ದೇಶದ ಟಿಯಾಗೋ ಅಪೊಲೊನಿಯಾ ವಿರುದ್ಧ 4-2 ಅಂತರದಲ್ಲಿ ಜಯ ಸಾಧಿಸಿದ್ದಾರೆ. ಶರತ್ ಕಮಲ್ ಟಿಯಾಗೋ ಅಪೊಲೊನಿಯಾ ವಿರುದ್ಧ 2-11, 11-8, 11-5, 9-11, 11-6 ಹಾಗೂ 11-9 ಸೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿರುವ ಶರತ್ ಕಮಲ್ ಪದಕದ ಆಸೆಯನ್ನು ಜೀವಂತವಾಗಿ ಉಳಿಸಿಕೊಂಡಿದ್ದಾರೆ.

ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿರುವ ಶರತ್ ಕಮಲ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಶರತ್ ಕಮಲ್ ಭಾರತದ ಟೇಬಲ್ ಟೆನಿಸ್ ಆಟದ ಗುಣಮಟ್ಟವನ್ನು ಹೆಚ್ಚಿಸುತ್ತಿದ್ದಾರೆ ಎಂದು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ. ಪ್ರಿ ಕ್ವಾರ್ಟರ್ ಪ್ರವೇಶಿಸಿರುವ ಶರತ್ ಕಮಲ್ ತಮ್ಮ ಮುಂದಿನ ಪಂದ್ಯದಲ್ಲಿ ಚೀನಾದ ಎಂ ಎ ಲಾಂಗ್ ವಿರುದ್ಧ ಸೆಣಸಾಡಲಿದ್ದಾರೆ

Story first published: Monday, July 26, 2021, 7:50 [IST]
Other articles published on Jul 26, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+