For Quick Alerts
ALLOW NOTIFICATIONS  
For Daily Alerts

ಟೋಕಿಯೋ ಒಲಿಂಪಿಕ್ಸ್: ಪದಕದಂಚಿನಲ್ಲಿ ಎಡವಿದ ರಸ್ಲರ್ ದೀಪಕ್ ಪೂನಿಯಾ

Tokyo Olympics 2021: Deepak Punia misses bronze medal

ಟೋಕಿಯೋ: ಭಾರತಕ್ಕೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ 6ನೇ ಪದಕ ಲಭಿಸುವುದರಲ್ಲಿತ್ತು. ಪುರುಷರ ರಸ್ಲಿಂಗ್‌ನಲ್ಲಿ ದೀಪಕ್ ಪೂನಿಯಾ ಭಾರತಕ್ಕೆ ಕಂಚಿನ ಪದಕ ಸೇರಿಸುವುದರಲ್ಲಿದ್ದರು. ಆದರೆ ಕೊಂಚವೇ ಕೊಂಚ ಅಂತರದಿಂದ ದೀಪಕ್ ಕಂಚಿನ ಪದಕ ಕಳೆದುಕೊಂಡಿದ್ದಾರೆ. ಪುರುಷರ 86 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಪೂನಿಯಾ, ಪಂದ್ಯ ಮುಗಿಯಲು ಇನ್ನು ಕೇವಲ 10 ಸೆಕೆಂಡ್ ಇದೆ ಅನ್ನುವಾಗ ಶರಣಾಗಿ ಪದಕ ಕಳೆದುಕೊಂಡಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ ಮೂಲಕ ಒಲಿಂಪಿಕ್ಸ್ ನಲ್ಲಿ ಚೊಚ್ಚಲ ಬಾರಿಗೆ ಸ್ಪರ್ಧಿಸಿದ್ದ ದೀಪಕ್ ಪೂನಿಯಾ ಪದಕದಾಸೆ ಮೂಡಿಸಿದ್ದರು. ಆದರೆ ಪದಕದಾಸೆಯನ್ನು ಪೂನಿಯಾ ಕೈ ಚೆಲ್ಲಿದ್ದಾರೆ. ಗುರುವಾರ (ಆಗಸ್ಟ್ 5) ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಪೂನಿಯಾ ಸ್ಯಾನ್ ಮಾರಿನೋಸ್‌ನ ಮೈಲ್ಸ್ ನಝೀಮ್ ಅಮೀನ್ ಅವರೆದುರು ಸೋತಿದ್ದಾರೆ. ದೀಪಕ್ ಉತ್ತಮ ರಕ್ಷಣಾತ್ಮಕ ಆಟವಾಡಿದರಾದರೂ ಕೊನೇ ಕ್ಷಣದಲ್ಲಿ ಎದುರಾಳಿ ಅಂಕ ಗೆದ್ದು ಫಲಿತಾಂಶ ತನ್ನದಾಗಿಸಿಕೊಂಡರು.

ಹರ್ಯಾಣದಲ್ಲಿ ಹಾಲು ಮಾರುವವರ ಪುತ್ರ ಆಗಿರುವ 22ರ ಹರೆಯದ ದೀಪಕ್ ಪೂನಿಯಾ, ಹರ್ಯಾಣದ ಒಂದು ಹಳ್ಳಿಯವರು. ಸೆಮಿಫೈನಲ್‌ನಲ್ಲೂ ದೀಪಕ್ ಉತ್ತಮ ಹೋರಾಟ ನೀಡಿದ್ದರು. ಆದರೆ ಸೆಮಿಫೈನಲ್‌ನಲ್ಲಿ ಅಮೆರಿಕಾದ ಡೇವಿಡ್ ಮೋರಿಸ್ ಟೇಲರ್ ವಿರುದ್ಧ ಸೋತು ನಿರಾಶೆ ಅನುಭವಿಸಿದ್ದರು.

ಭಾರತಕ್ಕೆ ಎರಡು ಬೆಳ್ಳಿ, ಮೂರು ಕಂಚಿನ ಪದಕ
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮಹಿಳಾ ವೇಟ್ ಲಿಫ್ಟಿಂಗ್‌ನ 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದರೆ, ಪಿವಿ ಸಿಂಧು ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಭಾರತಕ್ಕೆ ಎರಡನೇ ಪದಕವಾಗಿ ಕಂಚು ಗೆದ್ದಿದ್ದರು. ಇನ್ನು ಮಹಿಳಾ ಬಾಕ್ಸಿಂಗ್‌ನಲ್ಲಿ ಲವ್ಲಿನಾ ಬೊರ್ಗೊಹೈನ್ ಕೂಡ ಭಾರತಕ್ಕೆ ಕಂಚಿನ ಪದಕ ತಂದಿದ್ದರು. ಅದಾಗಿ ಪುರುಷರ ಹಾಕಿ ತಂಡಕ್ಕೆ ಕಂಚಿನ ಪದಕ ಲಭಿಸಿತ್ತು. ಇನ್ನು ಪುರುಷರ 57 ಕೆಜಿ ರಸ್ಲಿಂಗ್‌ನಲ್ಲಿ ರವಿಕುಮಾರ್ ದಾಹಿಯ ಅವರಿಗೆ ಬೆಳ್ಳಿ ಪದಕ ಲಭಿಸಿದೆ. ಒಟ್ಟಿಗೆ 5 ಪದಕಗಳು ಈಗ ಭಾರತದ ಖಾತೆಯಲ್ಲಿವೆ. ಉಳಿದಂತೆ ಶೂಟಿಂಗ್, ಆರ್ಚರಿ, ಟೆನಿಸ್, ಜಿಮ್ನ್ಯಾಸ್ಟಿಕ್, ಸ್ವಿಮ್ಮಿಂಗ್, ಫೆನ್ಸಿಂಗ್, ಟೇಬಲ್ ಟೆನಿಸ್ ಇತ್ಯಾದಿ ಸ್ಪರ್ಧೆಗಳಲ್ಲಿ ಭಾರತಕ್ಕೆ ಪದಕದಾಸೆ ಇಲ್ಲವಾಗಿದೆ.

ಭಾರತೀಯ ತಂಡದ ಬಗ್ಗೆ ಸಂಕ್ಷಿಪ್ತ ಮಾಹಿತಿ
ಟೋಕಿಯೋ ಒಲಿಂಪಿಕ್ಸ್‌ಗಾಗಿ ಭಾರತದಿಂದ ಒಟ್ಟು 127 ಅಥ್ಲೀಟ್‌ಗಳು ತೆರಳಿದ್ದಾರೆ. ಇದರಲ್ಲಿ ಅಧಿಕಾರಿಗಳು, ಸಿಬ್ಬಂದಿಗಳೂ ಸೇರಿ ಒಟ್ಟಾರೆ 228 ಮಂದಿಯ ಬೃಹತ್ ತಂಡ ಪ್ರತಿಷ್ಠಿತ ಕ್ರೀಡಾಕೂಟಕ್ಕಾಗಿ ಟೋಕಿಯೋಗೆ ತೆರಳಿತ್ತು. ಒಲಿಂಪಿಕ್ಸ್ ಇತಿಹಾಸದಲ್ಲಿ ಪಾಲ್ಗೊಳ್ಳುತ್ತಿರುವ ಅತೀ ದೊಡ್ಡ ಭಾರತೀಯ ತಂಡವಿದು. ಒಟ್ಟು 17 ಕ್ರೀಡಾಸ್ಪರ್ಧೆಗಳಲ್ಲಿ ಭಾರತೀಯರು ಸ್ಪರ್ಧಿಸುತ್ತಿದ್ದಾರೆ. ಹಿಂದಿ ರಿಯೋ ಒಲಿಂಪಿಕ್ಸ್‌ನಲ್ಲಿ ಒಟ್ಟು 117 ಅಥ್ಲೀಟ್‌ಗಳು ಸ್ಪರ್ಧಿಸಿದ್ದರು. ಇದರಲ್ಲಿ 63 ಪುರುಷರು, 54 ಮಹಿಳಾ ಸ್ಪರ್ಧಿಗಳಿದ್ದರು.

ಟೋಕಿಯೋ ಒಲಿಂಪಿಕ್ಸ್ ಇಣುಕುನೋಟ
ಜಾಗತಿಕ ಸಾಂಕ್ರಾಮಿಕ ರೋಗ ಕೋವಿಡ್-19ನಿಂದಾಗಿ 2020ರಲ್ಲಿ ಮುಂದೂಡಲ್ಪಟ್ಟ ಟೋಕಿಯೊ ಒಲಿಂಪಿಕ್ಸ್ ಅಂತಿಮವಾಗಿ ಜುಲೈ 23, 2021ರಂದು ಪ್ರಾರಂಭವಾಗಿದೆ. ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ವಿಶ್ವದ ವಿವಿಧ ಭಾಗದಿಂದ ಆಗಮಿಸಿರುವ 11000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಒಟ್ಟು 205 ರಾಷ್ಟ್ರಗಳಿಂದ ಕ್ರೀಡಾಳುಗಳು ಸ್ಪರ್ಧಿಸುತ್ತಿದ್ದಾರೆ. ಈ ಕ್ರೀಡಾಪುಟಗಳೆಲ್ಲ 17 ದಿನಗಳಲ್ಲಿ 50 ವಿಭಾಗಗಳಲ್ಲಿ 33 ಕ್ರೀಡೆಗಳಲ್ಲಿ 339 ಸ್ಪರ್ಧೆಗಳಲ್ಲಿ ಸ್ಪರ್ಧಿಸಲಿದ್ದಾರೆ. 32ನೇ ಒಲಿಂಪಿಯಾಡ್‌ ಎಂದು ಕರೆಯಲಾಗುವ ಟೊಕಿಯೋ ಒಲಿಂಪಿಕ್ಸ್ ಕ್ರೀಡಾಕೂಟ 300ಕ್ಕೂ ಹೆಚ್ಚು ಪದಕಗಳಿಗೆ ಸ್ಪರ್ಧೆಗಳು ನಡೆಯಲಿವೆ.

Story first published: Friday, August 6, 2021, 9:50 [IST]
Other articles published on Aug 6, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+