ಟೋಕಿಯೋ ಒಲಿಂಪಿಕ್ಸ್: ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಫೈನಲ್‌ಗೆ ಆಯ್ಕೆ

ಟೋಕಿಯೋ: ಟೋಕಿಯೋ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋ (ಈಟಿ ಎಸೆತ) ನಲ್ಲಿ ಸ್ಪರ್ಧಿಸುತ್ತಿರುವ ಭಾರತದ ಭರವಸೆಯ ಅಥ್ಲೀಟ್ ನೀರಜ್ ಚೋಪ್ರಾ ಫೈನಲ್‌ಗೆ ಪ್ರವೇಶ ಗಿಟ್ಟಿಸಿಕೊಂಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಚೋಪ್ರಾ 86.65 ಮೀಟರ್ ಸಾಧನೆಯೊಂದಿಗೆ ಫೈನಲ್ ಹಂತಕ್ಕೆ ನೇರ ಪ್ರವೇಶ ಪಡೆದುಕೊಂಡಿದ್ದಾರೆ. ಅಥ್ಲೆಟಿಕ್ಸ್ ವಿಭಾಗದ ಪುರುಷರ ಜಾವೆಲಿನ್ ಥ್ರೋನಲ್ಲಿ ಚೋಪ್ರಾ ಗ್ರೂಪ್ 'ಎ'ಯಲ್ಲಿದ್ದಾರೆ.
ಮಂಗಳವಾರ ನಡೆದ ಗ್ರೂಪ್ ಹಂತದ ಪುರುಷರ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ ಫೈನಲ್‌ಗೆ ನೇರ ಪ್ರವೇಶ ಪಡೆದುಕೊಂಡಿದ್ದಾರೆ. ಈ ವೇಳೆ ವಿಶ್ವ ನಂ.1 ಜಾವೆಲಿನ್ ಥ್ರೋವರ್ ಜರ್ಮನಿಯ ಜೋಹಾನ್ಸ್ ವೆಟರ್ ಮೊದಲ ಪ್ರಯತ್ನದಲ್ಲಿ 82.04 ಮೀಟರ್ ಸಾಧನೆ ತೋರಿದ್ದಾರೆ.
ಇದೇ ಚೊಚ್ಚಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುತ್ತಿರುವ ನೀರಜ್ ಮೊದಲ ಪ್ರಯತ್ನದಲ್ಲೇ ಫೈನಲ್‌ಗೆ ಪ್ರವೇಶದ ಸಾಧನೆ ತೋರಿರುವುದು ದೇಶಕ್ಕೆ ಪದಕದ ಆಸೆ ಮೂಡಿಸಿದೆ. ವಿಶ್ವ ಖ್ಯಾತಿಯ ಜೋಹಾನ್ಸ್ ವೆಟರ್ ದ್ವಿತೀಯ ಪ್ರಯತ್ನದಲ್ಲಿ 82.08 ಮೀಟರ್ ಮತ್ತು ತೃತೀಯ ಪ್ರಯತ್ನದಲ್ಲಿ 85.64 ಮೀಟರ್ ದೂರದ ಸಾಧನೆ ತೋರಿದ್ದಾರೆ. ಫೈನಲ್ ಹಂತಕ್ಕೆ ವೆಟರ್ ಕೂಡ ಪ್ರವೇಶ ಪಡೆದುಕೊಂಡಿದ್ದಾರೆ.
ಈ ವಿಭಾಗದಲ್ಲಿ 83.50 ಮೀಟರ್ ದೂರದ ಸಾಧನೆ ತೋರುವವರು ಅಥವಾ 12 ಅತ್ಯುತ್ತಮ ಸಾಧನೆ ತೋರುವವರು ಫೈನಲ್‌ಗೆ ಪ್ರವೇಶ ಪಡೆದುಕೊಳ್ಳಲಿದ್ದಾರೆ. ಫಿನ್‌ಲ್ಯಾಂಡ್‌ನ ಲಸ್ಸಿ ಎಟೆಲಾಟಲೊ ಮೊದಲ ಪ್ರಯತ್ನದಲ್ಲೇ 84.50 ಮೀಟರ್ ಸಾಧನೆಯೊಂದಿಗೆ ಫೈನಲ್‌ಗೆ ಎಂಟ್ರಿಯಾಗಿದ್ದಾರೆ.
ಜರ್ಮನಿಯ ವಿಶ್ವ ನಂ.1 ಥ್ರೋವರ್ ವೆಟರ್ ಅವರ ವೈಯಕ್ತಿಕ ಅತ್ಯುತ್ತಮ ಸಾಧನೆಯೆಂದರೆ 97.76 ಮೀಟರ್. ನೀರಜ್ ಚೋಪ್ರಾ ಅವರ ವೈಯಕ್ತಿಕ ಅತ್ಯುತ್ತಮ ಸಾಧನೆ 88.07 ಮೀಟರ್. ಹೀಗಾಗಿ ಫೈನಲ್‌ನಲ್ಲಿ ಚೋಪ್ರಾ ಮತ್ತು ವೆಟರ್ ಮಧ್ಯೆ ಉತ್ತಮ ಪೈಪೋಟಿ ನಡೆಯುವ ನಿರೀಕ್ಷೆಯಿದೆ.
ಭಾರತಕ್ಕೆ ಒಂದು ಬೆಳ್ಳಿ, ಎರಡು ಕಂಚಿನ ಪದಕಗಳು
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮಹಿಳಾ ವೇಟ್ ಲಿಫ್ಟಿಂಗ್‌ನ 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ. ಪಿವಿ ಸಿಂಧು ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕಂಚಿನ ಪದಕ ಜಯಿಸಿದ್ದಾರೆ. ಮೂರನೇ ಪದಕವಾಗಿ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದಿದ್ದಾರೆ. 4 ಆಗಸ್ಟ್ 2.21 PM ವೇಳೆ ಭಾರತದ ಖಾತೆಯಲ್ಲಿ ಒಂದು ಬೆಳ್ಳಿ, ಎರಡು ಕಂಚಿನ ಪದಕಗಳು ಇದ್ದವು. ಪದಕ ಪಟ್ಟಿಯಲ್ಲಿ ಭಾರತ 62ನೇ ಸ್ಥಾನದಲ್ಲಿತ್ತು. ಇನ್ನು ಪುರುಷರ ಅಥ್ಲೆಟಿಕ್ಸ್ ವಿಭಾಗದ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾಗೆ ಪದಕ ಬರುವುದರಲ್ಲಿದೆ. ಉಳಿದಂತೆ ಶೂಟಿಂಗ್, ಆರ್ಚರಿ, ಟೆನಿಸ್, ಜಿಮ್ನ್ಯಾಸ್ಟಿಕ್, ಸ್ವಿಮ್ಮಿಂಗ್, ಫೆನ್ಸಿಂಗ್, ಟೇಬಲ್ ಟೆನಿಸ್ ಇತ್ಯಾದಿ ಸ್ಪರ್ಧೆಗಳಲ್ಲಿ ಭಾರತಕ್ಕೆ ಪದಕದಾಸೆ ಇಲ್ಲವಾಗಿದೆ.
ಟೋಕಿಯೋ ಒಲಿಂಪಿಕ್ಸ್ ಇಣುಕುನೋಟ
ಜಾಗತಿಕ ಸಾಂಕ್ರಾಮಿಕ ರೋಗ ಕೋವಿಡ್-19ನಿಂದಾಗಿ 2020ರಲ್ಲಿ ಮುಂದೂಡಲ್ಪಟ್ಟ ಟೋಕಿಯೊ ಒಲಿಂಪಿಕ್ಸ್ ಅಂತಿಮವಾಗಿ ಜುಲೈ 23, 2021ರಂದು ಪ್ರಾರಂಭವಾಗಿದೆ. ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ವಿಶ್ವದ ವಿವಿಧ ಭಾಗದಿಂದ ಆಗಮಿಸಿರುವ 11000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಒಟ್ಟು 205 ರಾಷ್ಟ್ರಗಳಿಂದ ಕ್ರೀಡಾಳುಗಳು ಸ್ಪರ್ಧಿಸುತ್ತಿದ್ದಾರೆ. ಈ ಕ್ರೀಡಾಪುಟಗಳೆಲ್ಲ 17 ದಿನಗಳಲ್ಲಿ 50 ವಿಭಾಗಗಳಲ್ಲಿ 33 ಕ್ರೀಡೆಗಳಲ್ಲಿ 339 ಸ್ಪರ್ಧೆಗಳಲ್ಲಿ ಸ್ಪರ್ಧಿಸಲಿದ್ದಾರೆ. 32ನೇ ಒಲಿಂಪಿಯಾಡ್ ಎಂದು ಕರೆಯಲಾಗುವ ಟೊಕಿಯೋ ಒಲಿಂಪಿಕ್ಸ್ ಕ್ರೀಡಾಕೂಟ 300ಕ್ಕೂ ಹೆಚ್ಚು ಪದಕಗಳಿಗೆ ಸ್ಪರ್ಧೆಗಳು ನಡೆಯಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications