ಟೋಕಿಯೋ ಒಲಿಂಪಿಕ್ಸ್ ಬ್ಯಾಡ್ಮಿಂಟನ್: ಇಸ್ರೇಲ್ ಆಟಗಾರ್ತಿಯನ್ನು ಮಣಿಸಿದ ಪಿವಿ ಸಿಂಧು

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ ಪರ ಪದಕ ಗೆಲ್ಲುವ ನಿರೀಕ್ಷೆಯನ್ನು ಹುಟ್ಟುಹಾಕಿರುವ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಕ್ರೀಡಾಕೂಟದಲ್ಲಿ ಉತ್ತಮ ಆರಂಭವನ್ನು ಪಡೆದುಕೊಂಡಿದ್ದಾರೆ. ಬ್ಯಾಡ್ಮಿಂಟನ್ ಆರಂಭದ ಪಂದ್ಯದಲ್ಲಿಯೇ ಇಸ್ರೇಲ್ ಆಟಗಾರ್ತಿಯನ್ನು ಮಣಿಸುವುದರ ಮೂಲಕ ಪಿವಿ ಸಿಂಧು ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.
ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಶುಭಾರಂಭ ಮಾಡಿದ್ದಾರೆ. ಮೊದಲನೇ ಪಂದ್ಯದಲ್ಲಿ ಇಸ್ರೇಲ್‌ನ ಆಟಗಾರ್ತಿ ಪೊಲಿಕರ್ಪೊವಾ ವಿರುದ್ಧ 21-7, 21-10 ಅಂತರದಿಂದ ಜಯ ಗಳಿಸಿದ್ದಾರೆ.
ಟೋಕಿಯೊ ಒಲಿಂಪಿಕ್ಸ್‌ನ ಮೂರನೇ ದಿನದಲ್ಲಿ ಪಿ ವಿ ಸಿಂಧು ಈ ಗೆಲುವು ದಾಖಲಿಸಿದ್ದರೆ ಇದಕ್ಕೂ ಮುನ್ನ ನಡೆದ 10 ಮೀ. ಪಿಸ್ತೂಲ್ ಅರ್ಹತಾ ಸುತ್ತಿನಲ್ಲಿ ಭಾರತೀಯ ವನಿತೆಯರಾದ ಮನು ಭಾಕೆರ್ ಮತ್ತು ಯಶಸ್ವಿನಿ ಸಿಂಗ್ ದೇಸ್ವಾಲ್ ಕ್ರಮವಾಗಿ 12 ಮತ್ತು 13ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಒಲಿಂಪಿಕ್ಸ್‌ನಿಂದ ಹೊರಬಿದ್ದಿದ್ದಾರೆ.
Story first published: Sunday, July 25, 2021, 8:10 [IST]
Other articles published on Jul 25, 2021
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications