Mirabai Chanu: ಟೋಕಿಯೋ ಒಲಂಪಿಕ್ಸ್: ಭಾರತಕ್ಕೆ ಮೊದಲ ಪದಕ, ಬೆಳ್ಳಿ ಗೆದ್ದ ಮೀರಾಬಾಯಿ ಚಾನು

ಟೋಕಿಯೋ ಒಲಿಂಪಿಕ್ಸ್: ಭಾರತ ಒಲಿಂಪಿಕ್ಸ್‌ನಲ್ಲಿ ಮೊದಲ ಪದಕವನ್ನು ಗೆದ್ದುಕೊಂಡಿದೆ. ಭಾರತದ ವೈಟ್‌ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿಯ ಪದಕವನ್ನು ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತ ಈ ಬಾರಿಯ ಒಲಿಂಪಿಕ್ಸ್ ಕೂಟದಲ್ಲಿ ಶುಭಾರಂಭವನ್ನು ಮಾಡಿದೆ.

49 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಮೀರಾಬಾಯಿ ಚಾನು ಸ್ಪರ್ಧಿಸಿ ಪದಕಕ್ಕೆ ಮುತ್ತಿಕ್ಕಿದ್ದಾರೆ. ಚಾನು ಸ್ನ್ಯಾಚ್‌ನಲ್ಲಿ 87 ಕೆಜಿ ಮತ್ತು ಕ್ಲೀನ್ ಆ್ಯಂಡ್ ಜರ್ಕ್‌ನಲ್ಲಿ 115 ಕೆಜಿ ಭಾರ ಎತ್ತುವ ಮೂಲಕ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಚೀನಾದ ಹೌಸ್ ಜಿಹು ಈ ಸ್ಪರ್ಧೆಯಲ್ಲಿ ಮೊದಲ ಸ್ಥಾನವನ್ನು ಗಳಿಸಿ ಚಿನ್ನದ ಪದಕ ಗೆದ್ದಿದ್ದಾರೆ. 94 ಕೆಜಿ ಭಾರತ ಎತ್ತುವ ಮೂಲಕ ಅವರು ಹೊಸ ಒಲಿಂಪಿಕ್ಸ್ ದಾಖಲೆ ಮಾಡಿದ್ದಾರೆ.

87 ಕೆಜಿ ಭಾರ ಎತ್ತುವ ಮೂಲಕ ಮೀರಾಭಾಯಿ ತಮ್ಮ ವೈಯಕ್ತಿಕ ಅತ್ಯುತ್ತಮ ಸಾಧನೆಯನ್ನು ಸರಿಗಟ್ಟಿದರು. ಇದಕ್ಕೂ ಮುನ್ನ ಕಳೆದ ರಿಯೋ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಚಾನು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಆದರೆ ಈ ಬಾರಿ ಮೊದಲ ಪದಕವನ್ನು ಗೆಲ್ಲುವ ಮೂಲಕ ಭಾರತಕ್ಕೆ ಗರಿಮೆ ಮೂಡಿಸಿದ್ದಾರೆ.

Who is Mirabai Chanu , ಭಾರತಕ್ಕೆ ಈ ಬಾರಿಯ ಮೊದಲ ಪದಕ | Oneindia Kannada

ಮೀರಾಬಾಯಿ ಸಾನು ಅವರ ಈ ಸಾಧನೆಗೆ ದೇಶಾದ್ಯಂತ ಸಾಕಷ್ಟು ಪ್ರಶಂಸೆಗಳು ಹರಿದು ಬರುತ್ತಿದೆ. ಭಾರತದ ಕ್ರೀಡಾಪ್ರೇಮಿಗಳು ಮೀರಾಭಾಯಿ ಅವರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ನರೇಂದ್ರ ಮೋದಿ ಕೂಡ ಮೀರಾಬಾಯಿ ಚಾನು ಅವರಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Saturday, July 24, 2021, 12:18 [IST]
Other articles published on Jul 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X