ಟೋಕಿಯೋ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ 1000ಕ್ಕೂ ಕಡಿಮೆ ಮಂದಿ ಭಾಗಿ ಸಾಧ್ಯತೆ

ಟೋಕಿಯೋ: ಜಪಾನ್‌ನ ಟೋಕಿಯೋದಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ 1000ಕ್ಕೂ ಕಡಿಮೆ ಸಂಖ್ಯೆಯಲ್ಲಿ ಪ್ರಮುಖ ವ್ಯಕ್ತಿಗಳು ಭಾಗಿಯಾಗಲಿದ್ದಾರೆ. ಕೋವಿಡ್-19 ಸೋಂಕಿನ ಭೀತಿಯ ಕಾರಣದಿಂದಾಗಿ ಜಾಗತಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಕಳೆಗುಂದಲಿದೆ.
ಇದಕ್ಕೂ ಮುನ್ನ ಟೋಕಿಯೋ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು 10,000 ಮಂದಿಗೆ ಅವಕಾಶ ನೀಡಲು ನಿರ್ಧರಿಸಲಾಗಿತ್ತು. ಆದರೆ ಟೋಕಿಯೋದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಇಳಿಸಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
"ಸ್ಟೇಡಿಯಂನಲ್ಲಿ ಉಪಸ್ಥಿತರಿದ್ದು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವವರು ಸಂಖ್ಯೆಯನ್ನು ಕಡಿತಗೊಳಿಸಲು ಆಯೋಜಕರು ನಿರ್ಧರಿಸಿದ್ದಾರೆ," ಎಂದು ಟೋಕಿಯೋದ 'ಕ್ಯೋಡೋ ನ್ಯೂಸ್' ವರದಿ ಹೇಳಿದೆ. ಒಲಿಂಪಿಕ್ಸ್ ಕ್ರೀಡಾಕೂಟ ಜುಲೈ 23ರಿಂದ ಆಗಸ್ಟ್ 8ರ ವರೆಗೆ ನಡೆಯಲಿದೆ.
ಕೋವಿಡ್ 19 ಪಿಡುಗಿನ ಕಾರಣ ಟೋಕಿಯೋದಲ್ಲಿ ಈಗ ತುರ್ತು ಪರಿಸ್ಥಿತಿಯಿದೆ. ಆದರೂ ಒಲಿಂಪಿಕ್ಸ್ ನಡೆಸುತ್ತೇವೆ ಎಂದು ಆಯೋಜಕರು ತಿಳಿಸಿದ್ದಾರೆ. ಆದರೆ ಈ ಬಾರಿಯ ಕ್ರೀಡಾಕೂಟದಲ್ಲಿ ಹಲವಾರು ಬದಲಾವಣೆಗಳು ನಮಗೆ ಕಾಣಸಿಗಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications