ತವರಿಗೆ ಬಂದ ಒಲಿಂಪಿಕ್ಸ್ ಬೆಳ್ಳಿ ವಿಜೇತೆ ಮೀರಾಬಾಯಿಗೆ ಅದ್ದೂರಿ ಸ್ವಾಗತ

ನವದೆಹಲಿ: ಟೋಕಿಯೋ ಒಲಿಂಪಿಕ್ಸ್ 2020ರಲ್ಲಿ ಮಹಿಳಾ ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಮೊದಲ ಬೆಳ್ಳಿ ಪದಕ ಗೆದ್ದಿರುವ ಮೀರಾಬಾಯ್ ಚಾನು ಸ್ವದೇಶಕ್ಕೆ ವಾಪಸ್ಸಾಗಿದ್ದಾರೆ. ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಚಾನುಗೆ ಅದ್ದೂರಿ ಸ್ವಾಗತ ಲಭಿಸಿದೆ. ಸೋಮವಾರ (ಜುಲೈ 26) ಚಾನು ಭಾರತಕ್ಕೆ ವಾಪಸ್ಸಾಗಿದ್ದಾರೆ.
ಟೋಕಿಯೋದಿಂದ ನವದೆಹಲಿಯ ಇಂದಿರಾ ಗಾಂಧಿ ಇಂಟರ್ ನ್ಯಾಷನಲ್ ಏರ್‌ಪೋರ್ಟ್‌ಗೆ ಬಂದಿಳಿಯುವಾಗ ಚಾನು ಫೇಸ್ ಶೀಲ್ಡ್ ಮತ್ತು ಮಾಸ್ಕ್ ಧರಿಸಿದ್ದರು. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದ ಚಾನು ಅವರನ್ನು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಗಳು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.
ತಾನು ಭಾರತಕ್ಕೆ ವಾಪಸ್ಸಾಗಿರುವ ವಿಚಾರವನ್ನು ಚಾನು ಟ್ವೀಟ್ ಮೂಲಕ ತಿಳಿಸಿದ್ದಾರೆ. "ತುಂಬು ಪ್ರೀತಿ ಮತ್ತು ಬೆಂಬಲದೊಂದಿಗೆ ಇಲ್ಲಿಗೆ ಮರಳು ಖುಷಿಯಾಗಿದೆ. ಭಾರತೀಯ ಅಭಿಮಾನಿಗಳಿಗೆ ತುಂಬಾ ಧನ್ಯವಾದಗಳು," ಎಂದು ಚಾನು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.
ಮಹಿಳೆಯರ 49 ಕೆಜಿ ವಿಭಾಗದಲ್ಲಿ ಪಾಲ್ಗೊಂಡಿದ್ದ ಚಾನು ಬೆಳ್ಳಿ ಪದಕ ಗೆದ್ದಿದ್ದರು. ಚೀನಾದ ಹೌ ಝಿಹುಯ್ ಇದೇ ವಿಭಾಗದಲ್ಲಿ ಬಂಗಾರ ಕೊರಳಿಗೇರಿಸಿಕೊಂಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications