Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟೋಕಿಯೋ ಒಲಿಂಪಿಕ್ಸ್: ಭಾರತದ ಸಮವಸ್ತ್ರವನ್ನು ಅನಾವರಣಗೊಳಿಸಿದ ಕ್ರೀಡಾ ಸಚಿವ ಕಿರೆನ್ ರಿಜಿಜು

okyo Olympics: Union Youth Affairs and Sports Kiren Rijiju unveils Indias Olympic uniform

ಜುಲೈ 23ರಂದು ಪ್ರಾರಂಭವಾಗಲಿರುವ 2020ರ ಟೋಕಿಯೊ ಒಲಿಂಪಿಕ್ಸ್‌ಗಾಗಿ ಭಾರತದ ಸಮವಸ್ತ್ರವನ್ನು ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು ಗುರುವಾರ ಅನಾವರಣಗೊಳಿಸಿದ್ದಾರೆ.

ಟೋಕಿಯೊ ಒಲಿಂಪಿಕ್ಸ್‌ಗೆ ಕ್ರೀಡಾಪಟುಗಳನ್ನು ಸಿದ್ಧಪಡಿಸುವುದರ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶೇಷ ಸಭೆಯನ್ನು ನಡೆಸಿದರು. 'ಮುಂಬರುವ ಟೋಕಿಯೋ ಒಲಿಂಪಿಕ್ಸ್‌ಗೆ ಕ್ರೀಡಾಪಟುಗಳನ್ನು ಸಿದ್ಧಪಡಿಸುವುದರ ಕುರಿತು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪರಿಶೀಲನಾ ಸಭೆಯನ್ನು ನಡೆಸಿದರು. ಪ್ರತಿಯೊಬ್ಬರು ಕ್ರೀಡಾಪಟುಗಳಿಗೆ ಹುರಿದುಂಬಿಸಬೇಕೆಂದು ಮೋದಿಯವರು ಮನವಿ ಮಾಡಿಕೊಂಡಿದ್ದಾರೆ' ಎಂದು ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು ತಿಳಿಸಿದರು.

ನಂತರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಧರಿಸಲಿರುವ ಜರ್ಸಿಯನ್ನು ಕಿರೆನ್ ರಿಜಿಜು ಅನಾವರಣಗೊಳಿಸಿದರು. ಇದೇ ವೇಳೆ ಮಾತನಾಡಿದ ಕಿರೆನ್ ರಿಜಿಜು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ ಎಲ್ಲ ಕ್ರೀಡಾಪಟುಗಳು ಉತ್ತಮ ಪ್ರದರ್ಶನವನ್ನು ನೀಡಬೇಕೆಂದು ಶುಭ ಹಾರೈಸಿದರು.

Story first published: Thursday, June 3, 2021, 17:50 [IST]
Other articles published on Jun 3, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+