For Quick Alerts
ALLOW NOTIFICATIONS  
For Daily Alerts

ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಮೂರನೇ ಚಿನ್ನ ತಂದುಕೊಟ್ಟ ಮನೀಶ್ ನರ್ವಾಲ್

Tokyo Paralympics: Manish Narwal wins gold in Mens 50M rifle 4P events

ಸೆಪ್ಟೆಂಬರ್ 4, ಟೋಕಿಯೋ: ಪ್ರಸ್ತುತ ನಡೆಯುತ್ತಿರುವ ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಪ್ಟೆಂಬರ್ 4 ರ ದಿನದ ಆರಂಭದಲ್ಲಿಯೇ ಭಾರತದ ಕ್ರೀಡಾಪಟುಗಳು 2 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪುರುಷರ 50 ಮೀಟರ್ 4 ಪೊಸಿಷನ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯ ಫೈನಲ್ ಸುತ್ತಿನಲ್ಲಿ ಭಾರತದ ಕ್ರೀಡಾಪಟು ಮನೀಷ್ ನರ್ವಾಲ್ ಚಿನ್ನದ ಪದಕವನ್ನು ಗೆದ್ದಿದ್ದಾರೆ ಹಾಗೂ ಮತ್ತೊಬ್ಬ ಕ್ರೀಡಾಪಟು ಸಿಂಗ್‌ರಾಜ್ ರಜತ ಪದಕವನ್ನು ಇದೇ ಸುತ್ತಿನಲ್ಲಿ ತಮ್ಮದಾಗಿಸಿಕೊಂಡಿದ್ದಾರೆ.

ಪಿಸ್ತೂಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಕ್ರೀಡಾಪಟುಗಳಾದ ಮನೀಷ್ ನರ್ವಾಲ್ ಮತ್ತು ಸಿಂಗ್‌ರಾಜ್ 2 ಪದಕಗಳನ್ನು ಗೆಲ್ಲುವುದರ ಮೂಲಕ ಇದೀಗ ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 15ಕ್ಕೆ ಏರಿಕೆ ಕಂಡಿದೆ. ಈ 15 ಪದಕಗಳಲ್ಲಿ 3 ಚಿನ್ನ, 7 ಬೆಳ್ಳಿ ಮತ್ತು 5 ಕಂಚಿನ ಪದಕಗಳು ಸೇರಿವೆ.

ಹಾಗೂ ಪುರುಷರ ಬ್ಯಾಡ್ಮಿಂಟನ್ ಎಸ್ಎಲ್ 3 ವಿಭಾಗದಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್ ಸೆಮಿಫೈನಲ್ ಸುತ್ತಿನಲ್ಲಿ ಜಪಾನ್ ದೇಶದ ಬ್ಯಾಡ್ಮಿಂಟನ್ ಆಟಗಾರ ಡೈಸುಕೆ ಫುಜಿಹಾರ ವಿರುದ್ಧ 21-11, 21-16 ಸೆಟ್‌ಗಳ ಅಂತರದಿಂದ ಜಯ ಸಾಧಿಸುವುದರ ಮೂಲಕ ಫೈನಲ್ ಸುತ್ತಿಗೆ ಪ್ರವೇಶ ಪಡೆದುಕೊಂಡಿದ್ದಾರೆ. ಹೀಗೆ ಭಾರತದ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದು ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಲಭಿಸುವ ನಿರೀಕ್ಷೆಯಿದೆ. ಒಂದುವೇಳೆ ಪ್ರಮೋದ್ ಭಗತ್ ಫೈನಲ್ ಸುತ್ತಿನಲ್ಲಿ ಸೋತರೆ ಭಾರತಕ್ಕೆ ಬೆಳ್ಳಿ ಪದಕ ಲಭಿಸುವುದು ಖಚಿತ.

1. ಭಾವಿನ ಪಟೇಲ್ - ಬೆಳ್ಳಿ ಪದಕ - ಮಹಿಳಾ ಸಿಂಗಲ್ಸ್ ಟೇಬಲ್ ಟೆನಿಸ್ C4

2. ನಿಶಾದ್ ಕುಮಾರ್ - ಬೆಳ್ಳಿ ಪದಕ - ಪುರುಷರ ಹೈಜಂಪ್ ಟಿ 47

3. ಅವನಿ ಲೇಖರ - ಚಿನ್ನದ ಪದಕ - ಮಹಿಳೆಯರ 10 ಮೀ ಏರ್ ರೈಫಲ್ ಶೂಟಿಂಗ್ ಸ್ಟ್ಯಾಂಡಿಂಗ್ ಎಸ್ ಎಚ್ 1

4. ದೇವೇಂದ್ರ ಜಜಾರಿಯಾ - ಬೆಳ್ಳಿ ಪದಕ - ಪುರುಷರ ಜಾವೆಲಿನ್ ಥ್ರೋ ಎಫ್ 46

5. ಸುಂದರ್ ಸಿಂಗ್ ಗುರ್ಜಾರ್ - ಕಂಚಿನ ಪದಕ - ಪುರುಷರ ಜಾವೆಲಿನ್ ಥ್ರೋ ಎಫ್ 46

6. ಯೋಗೀಶ್ ಕಠುನಿಯಾ - ಬೆಳ್ಳಿ ಪದಕ - ಪುರುಷರ ಡಿಸ್ಕಸ್ ಥ್ರೋ ಎಫ್ 56

7. ಸುಮಿತ್ ಆಂಟಿಲ್ - ಚಿನ್ನದ ಪದಕ - ಪುರುಷರ ಜಾವೆಲಿನ್ ಥ್ರೋ ಎಫ್ 64

8. ಸಿಂಗರಾಜ್ ಅಧಾನ - ಕಂಚಿನ ಪದಕ - ಪುರುಷರ 10 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್ ಎಸ್ ಎಚ್ 1

9. ಮರಿಯಪ್ಪನ್ ತಂಗವೇಲು - ಬೆಳ್ಳಿ ಪದಕ - ಪುರುಷರ ಹೈ ಜಂಪ್ ಟಿ 42

10. ಶರದ್ ಕುಮಾರ್ - ಕಂಚಿನ ಪದಕ - ಪುರುಷರ ಹೈಜಂಪ್ ಟಿ 42

11. ಪ್ರವೀಣ್ ಕುಮಾರ್ - ಬೆಳ್ಳಿ ಪದಕ - ಪುರುಷರ ಎತ್ತರ ಜಿಗಿತ ಟಿ 64

12. ಅವನಿ ಲೇಖರ - ಕಂಚಿನ ಪದಕ - ಮಹಿಳೆಯರ 50 ಮೀ ಏರ್ ರೈಫಲ್ ಶೂಟಿಂಗ್ ಸ್ಟ್ಯಾಂಡಿಂಗ್ ಎಸ್ ಎಚ್ 1

13. ಹರ್ವಿಂದರ್ ಸಿಂಗ್ - ಕಂಚಿನ ಪದಕ - ಪುರುಷರ ವೈಕ್ತಿಕ ರಿಕ್ಯೂರ್ವ್ ಸ್ಪರ್ಧೆ

14. ಮನೀಷ್ ನರ್ವಾಲ್ - ಚಿನ್ನದ ಪದಕ - ಪುರುಷರ 50 ಮೀಟರ್ 4 ಪೊಸಿಷನ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆ

15. ಸಿಂಗ್‌ರಾಜ್ - ಬೆಳ್ಳಿ ಪದಕ - ಪುರುಷರ 50 ಮೀಟರ್ 4 ಪೊಸಿಷನ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆ

Story first published: Saturday, September 4, 2021, 9:58 [IST]
Other articles published on Sep 4, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+