Haryana Assembly Elections: 'ಕೈ' ಹಿಡಿದ ವಿನೇಶ್-ಬಜರಂಗ್; ರೈಲ್ವೆ ಹುದ್ದೆಗೆ ರಾಜೀನಾಮೆ
ಹರಿಯಾಣ ವಿಧಾನಸಭೆ ಚುನಾವಣೆಗೂ ಮುನ್ನ ಸ್ಟಾರ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಶುಕ್ರವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಸೆಪ್ಟೆಂಬರ್ 4 ರಂದು ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇತ್ತೀಚೆಗೆ ಭೇಟಿ ಮಾಡಿದ ನಂತರ ಈ ಬೆಳವಣಿಗೆಯಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರ ಸಮ್ಮುಖದಲ್ಲಿ ವಿನೇಶ್ ಮತ್ತು ಬಜರಂಗ್ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗ ಸೇರಿಕೊಂಡಿದ್ದಾರೆ. ಕಾಂಗ್ರೆಸ್ ಸೇರುವ ಮುನ್ನ ಬಜರಂಗ್ ಮತ್ತು ವಿನೇಶ್ ಇಬ್ಬರೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಕೇಂದ್ರ ಕಚೇರಿಯಲ್ಲಿ ಭೇಟಿಯಾಗಿದ್ದಾರೆ. ಈ ಬಗ್ಗೆ ಖರ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ರೈಲ್ವೆ ಹುದ್ದೆಗೆ ರಾಜೀನಾಮೆ
ಕಾಂಗ್ರೆಸ್‌ಗೆ ಸೇರುವ ಮುನ್ನ ವಿನೇಶ್ ಫೋಗಟ್ ಅವರು ರೈಲ್ವೆ ಹುದ್ದೆಗೆ ರಾಜೀನಾಮೆ ನೀಡಿದ್ದರೆ. ಈ ಪ್ರತಿಯನ್ನು ತಮ್ಮ ಅಧಿಕೃತ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ತಮ್ಮ ಜೀವನದ ಸ್ಮರಣೀಯ ಮತ್ತು ಹೆಮ್ಮೆಯ ವಿಷಯ. ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಯಾವಾಗಲೂ ಕೃತಜ್ಞರಾಗಿರುತ್ತೇನೆ ಎಂದು ಹೇಳಿದ್ದಾರೆ.
ಯಾವ ಕ್ಷೇತ್ರದಿಂದ ಸ್ಪರ್ಧೆ?
ಅಕ್ಟೋಬರ್ 5 ರಂದು ಹರಿಯಾಣದ 90 ವಿಧಾನಸಭಾ ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಇದಾದ ಮೂರು ದಿನಕ್ಕೆ ಅಂದರೆ ಅಕ್ಟೋಬರ್ 8 ರಂದು ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ. ಕಾಂಗ್ರೆಸ್ ಮತ್ತು ಎಎಪಿ ನಡುವೆ ಹರಿಯಾಣ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಚರ್ಚೆಗಳು ಆರಂಭವಾಗಿವೆ.
ಮೂಲಗಳ ಪ್ರಕಾರ, ಚರ್ಕಿ ದಾದ್ರಿಯಿಂದ ಕಾಂಗ್ರೆಸ್ ಪಕ್ಷ ವಿನೇಶ್ ಫೋಗಟ್ ಅವರಿಗೆ ಟಿಕೆಟ್ ನೀಡಬಹುದು. ಬಿಜೆಪಿ ಈ ಕ್ಷೇತ್ರದಿಂದ ವಿನೇಶ್ ಸಹೋದರಿ ಬಬಿತಾ ಫೋಗಟ್ ಅವರನ್ನು ಕಣಕ್ಕಿಳಿಸಿದೆ. ಮತ್ತೊಂದೆಡೆ ಬಜರಂಗ್ ಪುನಿಯಾ ಬದ್ಲಿಯಿಂದ ಟಿಕೆಟ್ ಬಯಸುತ್ತಿದ್ದಾರೆ. ಆದರೆ ಈ ಕ್ಷೇತ್ರದ ಬದಲಿಗೆ ಬೇರೆ ಕಡೆ ಕಣಕ್ಕಿಳಿಸಲು ಕಾಂಗ್ರೆಸ್ ಯೋಜಿಸುತ್ತಿದೆ ಎನ್ನಲಾಗುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications