Vinesh Phogat: ವಿನೇಶ್ ಪೋಗಟ್‌ಗೆ ಒಲಿಂಪಿಕ್ಸ್‌ನಲ್ಲಿ ನಿರಾಸೆ: "ಕೈ" ಹಿಡಿದು ಮರುಜೀವ ನೀಡುತ್ತಾ ರಾಜಕೀಯ?
ನವದೆಹಲಿ: 2024ರ ಪ್ಯಾರಿಸ್ ಒಲಿಂಪಿಕ್ಸ್ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿ ಫೈನಲ್‌ನಿಂದ ಭಾರತದ ವಿನೇಶ್ ಫೋಗಟ್ ಅನರ್ಹಗೊಂಡಿದ್ದರು. ಅವರು ನಿಗದಿತ ತೂಕಕ್ಕಿಂತ 100 ಗ್ರಾಮ್ ಹೆಚ್ಚಿನ ತೂಕ ಹೊಂದಿದ್ದರು. ಈ ಕಾರಣದಿಂದಾಗಿ ಅವರು ಚಿನ್ನದ ಪದಕ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದ್ದರು.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಕಳೆದುಕೊಂಡ ಬೆನ್ನಲ್ಲೇ ವಿನೇಶ್ ಕುಸ್ತಿ ವೃತ್ತಿಜೀವನಕ್ಕೂ ಗುಡ್ ಬೈ ಹೇಳಿದ್ದರು. ಭಾರತಕ್ಕೆ ಬಂದ ಬಳಿಕ ವಿನೇಶ್ ನಿವೃತ್ತಿಯನ್ನು ಹಿಂಪಡೆದಿದ್ದರು. ಈ ವೇಳೆ ಪುನಃ ಕ್ರೀಡೆಗೆ ಮರಳುವ ಸಾಧ್ಯತೆಯ ಬಗ್ಗೆ ಸುಳಿವು ನೀಡಿದ್ದರು. ಆದರೆ ಇದಕ್ಕೂ ಮುನ್ನ ಪದಕ ಕಳೆದುಕೊಂಡ ನಿರಾಸೆಯಲ್ಲಿ ಅವರು ರಾಜಕೀಯ ರಂಗ ಪ್ರವೇಶ ಮಾಡುವ ಬಗ್ಗೆ ಕೂಗು ಕೇಳಿ ಬರುತ್ತಿದೆ.

ಈ ವರ್ಷ ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ವಿನೇಶ್ ಫೋಗಟ್ ಸ್ಪರ್ಧಿಸುವ ಸಾಧ್ಯತೆ ಇದೆ. ಅವರ ಆಪ್ತರು ಮಂಗಳವಾರ ಐಎಎನ್‌ಎಸ್‌ಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಸಕ್ರಿಯ ರಾಜಕಾರಣಕ್ಕೆ ಬರುವುದಿಲ್ಲ ಎಂದು ವಿನೇಶ್ ಈಗಾಗಲೇ ಹೇಳಿದ್ದರು. ಇತ್ತೀಚಿನ ಬೆಳವಣಿಗೆಗಳ ಪ್ರಕಾರ, ಕೆಲವು ರಾಜಕೀಯ ಪಕ್ಷಗಳು ಅವರನ್ನು ಮನವೊಲಿಸಲು ಪ್ರಯತ್ನಿಸುತ್ತಿವೆ.
ಸೋದರ ಸಂಬಂಧಿ ವಿರುದ್ಧ ಸ್ಪರ್ಧೆ?
ವಿನೇಶ್ ಫೋಗಟ್ ತನ್ನ ಸೋದರ ಸಂಬಂಧಿ ವಿರುದ್ಧ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಯಿದೆ. ಅವರು ಯಾವ ಪಕ್ಷಕ್ಕೆ ಸೇರುತ್ತಾರೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ಆದರೆ ಮೂಲಗಳ ಪ್ರಕಾರ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಬಹುದು ಎನ್ನಲಾಗುತ್ತಿದೆ.
ಹರಿಯಾಣ ವಿಧಾನಸಭೆಯಲ್ಲಿ ವಿನೇಶ್ ಫೋಗಟ್ ವಿರುದ್ಧ ಬಬಿತಾ ಫೋಗಟ್ ಮತ್ತು ಬಜರಂಗ್ ಪುನಿಯಾ ವಿರುದ್ಧ ಯೋಗೇಶ್ವರ್ ದತ್ ನಡುವೆ ನೇರ ಪೈಪೋಟಿ ನಡೆಯುವ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಶನಿವಾರ ಭಾರತಕ್ಕೆ ಹಿಂತಿರುಗಿದಾಗ ಮಾಧ್ಯಮಗಳೊಂದಿಗೆ ಮಾತನಾಡಿದ್ದ ವಿನೇಶ್, ನಮ್ಮ ಹೋರಾಟ ಇನ್ನೂ ಮುಗಿದಿಲ್ಲ, ಮುಂದುವರಿಯುತ್ತದೆ. ಸತ್ಯಕ್ಕೆ ಜಯ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದು ಹೇಳಿದ್ದರು.
ಬೆಳ್ಳಿ ಪದಕ ಮಿಸ್
ಪ್ಯಾರಿಸ್ ಒಲಿಂಪಿಕ್ಸ್ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿ ಫೈನಲ್‌ನಿಂದ ಅನರ್ಹಗೊಳಿಸಿದ್ದನ್ನು ವಿನೇಶ್ ಪೋಗಟ್ ಅವರು ಪ್ರಶ್ನಿಸಿ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಕೋರ್ಟ್ ಮೊರೆ ಹೋಗಿದ್ದರು. ಮನವಿಯಲ್ಲಿ ತಮಗೆ ಜಂಟಿಯಾಗಿ ಬೆಳ್ಳಿ ಪದಕವನ್ನು ನೀಡಬೇಕೆಂದು ಒತ್ತಾಯಿಸಿದರು.
ಆದರೆ ನ್ಯಾಯಾಲಯವು ಅವರ ಮನವಿಯನ್ನು ತಿರಸ್ಕರಿಸಿತ್ತು. ಇತ್ತ ಪದಕದ ನಿರೀಕ್ಷೆಯಲ್ಲಿದ್ದ ಭಾರತೀಯ ಕ್ರೀಡಾಭಿಮಾನಿಗಳ ಪದಕದ ಕನಸು ಭಗ್ನವಾಗಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications