ಅಯೋಧ್ಯೆಯ ರಾಮನ ದರ್ಶನಕ್ಕೆ ಬಂತು ಕ್ರಿಕೆಟ್ ವೀರನಿಗೆ ಆಹ್ವಾನ
ಇದೇ ಜನವರಿ 22ರಂದು ನಡೆಯಲಿರುವ ಅಯೋಧ್ಯೆಯ ರಾಮಮಂದಿರದ "ಪ್ರಾಣ ಪ್ರತಿಷ್ಠಾಪನೆ' ಸಮಾರಂಭಕ್ಕೆ ಭಾರತ ಕ್ರಿಕೆಟ್ ತಂಡದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರನ್ನು ಮಂಗಳವಾರ, ಜನವರಿ 16ರಂದು ಆಹ್ವಾನಿಸಲಾಗಿದೆ.
ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿತರಾದ ಇತ್ತೀಚಿನ ಕ್ರಿಕೆಟಿಗನೆಂದರೆ ವಿರಾಟ್ ಕೊಹ್ಲಿ. ಈಗಾಗಲೇ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ ಮತ್ತು ಎಂಎಸ್ ಧೋನಿ ಅವರನ್ನುನ್ನೂ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

ಜನವರಿ 13ರಂದು ಸಚಿನ್ ತೆಂಡೂಲ್ಕರ್ ಅವರ ಮುಂಬೈನಲ್ಲಿರುವ ತಮ್ಮ ನಿವಾಸದಲ್ಲಿ ಆಹ್ವಾನವನ್ನು ಸ್ವೀಕರಿಸಿದರು. ಇನ್ನು ಜನವರಿ 15ರಂದು ಮಾಜಿ ನಾಯಕ ಎಂಎಸ್ ಧೋನಿಯನ್ನು ಆಹ್ವಾನಿಸಲಾಯಿತು.
ಅಯೋಧ್ಯೆಯು ಮಹತ್ವದ ಧಾರ್ಮಿಕ ಸಮಾರಂಭಕ್ಕೆ ಸಜ್ಜಾಗುತ್ತಿದ್ದು, ಜನವರಿ 22ರಂದು ಔಪಚಾರಿಕ ಕಾರ್ಯಕ್ರಮ ಮುಗಿದ ನಂತರ, ಸಾರ್ವಜನಿಕರು ದೇವಾಲಯಕ್ಕೆ ಭೇಟಿ ನೀಡಬಹುದು ಎಂದು ಹೇಳುವ ಮೂಲಕ ಸಮರ್ಪಣಾ ದಿನದಂದು ಎಲ್ಲಾ 'ರಾಮ ಭಕ್ತರು' ನಗರಕ್ಕೆ ಬರದಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
ಈ ಮಹತ್ವದ ಸಂದರ್ಭದಲ್ಲಿ ಭವ್ಯ ಮಂದಿರದಲ್ಲಿ ರಾಮಲಲ್ಲಾನ ವಿಗ್ರಹದ 'ಪ್ರಾಣ ಪ್ರತಿಷ್ಠಾಪನೆ'ಯನ್ನು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯಲಿದೆ. ದೇಗುಲದ ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಧ್ಯುಕ್ತ ಸಿಂಹಾಸನಾರೋಹಣವು ಅಯೋಧ್ಯೆಯಲ್ಲಿ ನಡೆಯಲಿದೆ.
ಟಿ20 ಕ್ರಿಕೆಟ್‌ಗೆ ಪುನರಾಗಮನ ಮಾಡಿದ ವಿರಾಟ್ ಕೊಹ್ಲಿ
ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡವು ಅಫ್ಘಾನಿಸ್ತಾನ ತಂಡವನ್ನು ಎದುರಿಸಿದಾಗ, ವಿರಾಟ್ ಕೊಹ್ಲಿ ಕ್ರಿಕೆಟ್‌ನ ಅತ್ಯಂತ ಕಡಿಮೆ ಸ್ವರೂಪಕ್ಕೆ 14 ತಿಂಗಳ ನಂತರ ಮರಳಿದರು.
ಭಾರತದ ಸೂಪರ್‌ಸ್ಟಾರ್ ಬ್ಯಾಟರ್ ವೈಯಕ್ತಿಕ ಕಾರಣಗಳಿಗಾಗಿ ಸರಣಿಯ ಮೊದಲ ಪಂದ್ಯವನ್ನು ತಪ್ಪಿಸಿಕೊಂಡರು. ಆದರೆ ಇಂದೋರ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯಕ್ಕೆ ಆಡುವ 11ರ ಬಳಗಕ್ಕೆ ಹಿಂದಿರುಗಿದರು.
ಈ ವೇಳೆ ವಿರಾಟ್ ಕೊಹ್ಲಿ ಕೇವಲ 16 ಎಸೆತಗಳಲ್ಲಿ 29 ರನ್ ಗಳಿಸಿದರು. ಅಂತಿಮವಾಗಿ ಭಾರತ ತಂಡವು ಅಫ್ಘಾನಿಸ್ತಾನ ವಿರುದ್ಧ 6 ವಿಕೆಟ್‌ಗಳಿಂದ ಗೆದ್ದು ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿತು.
ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಕೊನೆಯ ಬಾರಿಗೆ 2022ರ ಟಿ20 ವಿಶ್ವಕಪ್‌ನಲ್ಲಿ ಟಿ20 ಸ್ವರೂಪದಲ್ಲಿ ಆಡಿದರು. ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್‌ಗಳ ಸೋಲಿನ ನಂತರ ಭಾರತವು ಟೂರ್ನಿಯಿಂದ ಹೊರಬಿದ್ದಿತು.
ಇಂದೋರ್‌ನಲ್ಲಿ ತಮ್ಮ ಗೆಲುವಿನ ನಂತರ, ಟೀಮ್ ಇಂಡಿಯಾ ಬುಧವಾರ, ಜನವರಿ 17ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯಕ್ಕೆ ಸಜ್ಜಾಗಿದ್ದು, ಪ್ರವಾಸಿ ಅಫ್ಘಾನಿಸ್ತಾನ ತಂಡವನ್ನು ಕ್ಲೀನ್-ಸ್ವೀಪ್ ಮಾಡಲು ಎದುರು ನೋಡುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications