Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಲಂಡನ್‌ನಲ್ಲಿ ಕುಟುಂಬದ ಜೊತೆ ಕಾಲ ಕಳೆಯುತ್ತಾ ವಿಶ್ವಕಪ್ ಸೋಲಿನ ಕಹಿ ಮರೆಯುತ್ತಿರುವ ವಿರಾಟ್‌ ಕೊಹ್ಲಿ!

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರು ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನ ವಿರಾಮ ಪಡೆದಿದ್ದಾರೆ. ವರದಿಗಳ ಪ್ರಕಾರ, ವಿರಾಟ್ ಕೊಹ್ಲಿ ಲಂಡನ್‌ನಲ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆ ರಜೆಯಲ್ಲಿದ್ದು, ಏಕದಿನ ವಿಶ್ವಕಪ್ ಸೋಲಿನ ಕಹಿ ಮರೆಯುತ್ತಿದ್ದಾರೆ.

ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಗಳೊಂದಿಗೆ ಕಾಣಿಸಿಕೊಂಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

Virat Kohli is Forgetting the Bitterness of the World Cup Defeat by Spending Time With family in London

ಇಂತಹ ಪರಿಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಏಕದಿನ, ಮೂರು ಟಿ20 ಪಂದ್ಯಗಳ ಸರಣಿಗೆ ಬಿಸಿಸಿಐ ಅನುಮತಿಯೊಂದಿಗೆ ವಿಶ್ರಾಂತಿ ಪಡೆದಿದ್ದಾರೆ. ಆದರೆ, ಎರಡು ಪಂದ್ಯಗಳ ಟೆಸ್ಟ್ ಲಭ್ಯವಿರಲಿದ್ದಾರೆ. ಅದೇ ರೀತಿ ವೈಟ್‌ಬಾಲ್ ಸರಣಿಗೆ ಅವರ ಹೆಸರು ಕೈಬಿಟ್ಟು, ರೆಡ್ ಬಾಲ್ ಸರಣಿಗೆ ಮಾತ್ರ ಆಯ್ಕೆ ಮಾಡಲಾಗಿದೆ.

ದಕ್ಷಿಣ ಆಫ್ರಿಕಾ ಪ್ರವಾಸವು ಡಿಸೆಂಬರ್ 10ರಿಂದ ಪ್ರಾರಂಭವಾಗಲಿದ್ದು, ಪ್ರವಾಸವು 2024ರ ಜನವರಿ 7ರಂದು ಕೊನೆಗೊಳ್ಳಲಿದೆ. ಈ ಒಂದು ತಿಂಗಳ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಟೆಸ್ಟ್ ಸರಣಿಗೆ ಮಾತ್ರ ಲಭ್ಯವಾಗಲಿದ್ದಾರೆ.

ಸದ್ಯ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ವಿಶ್ವಕಪ್ ಬಳಿಕ ಈ ಸರಣಿಯಲ್ಲಿ ತಂಡದ ಬಹುತೇಕ ಎಲ್ಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡ ಫೈನಲ್‌ನಲ್ಲಿ ಸೋತರೂ, ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಪ್ರದರ್ಶನದಿಂದ ಇಡೀ ಟೂರ್ನಿಯಲ್ಲಿ ಪ್ರಾಬಲ್ಯ ಮೆರೆದಿದ್ದಾರೆ.

ವಿರಾಟ್ ಕೊಹ್ಲಿ ಭಾರತ ತಂಡದ ಪರ ಆಡಿದ 11 ಪಂದ್ಯಗಳಲ್ಲಿ 95.62ರ ಸರಾಸರಿಯಲ್ಲಿ 765 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ವಿರಾಟ್ ಮೂರು ಶತಕ ಹಾಗೂ 6 ಅರ್ಧ ಶತಕಗಳನ್ನು ಬಾರಿಸಿದ್ದರು. ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅಲ್ಲದೆ ಒಂದೇ ವಿಶ್ವಕಪ್ ಆವೃತ್ತಿಯಲ್ಲಿ ಗರಿಷ್ಠ ರನ್‌ ಬಾರಿಸಿದ ಹಿರಿಮೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಈ ಮೊದಲು ಈ ದಾಖಲೆ ಟೀಮ್ ಇಂಡಿಯಾದ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ (2003ರಲ್ಲಿ 673 ರನ್) ಅವರ ಹೆಸರಿನಲ್ಲಿ ಇತ್ತು. ಈ ದಾಖಲೆಯನ್ನು ವಿರಾಟ್ ಅಳಿಸಿ ಹಾಕಿದ್ದಾರೆ.

ವಿಶ್ವಕಪ್‌ನ ಫೈನಲ್‌ನಲ್ಲಿ ನಿರಾಶಾದಾಯಕ ಸೋಲಿನ ಹೊರತಾಗಿಯೂ, ವಿರಾಟ್ ಕೊಹ್ಲಿಯ ಭರ್ಜರಿ ಬ್ಯಾಟಿಂಗ್‌ನಿಂದ ಈ ಪಂದ್ಯಾವಳಿ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ. ವಿರಾಟ್ ಕೊಹ್ಲಿ ಅವರ ಅದ್ಭುತ ಆಟದಿಂದಾಗಿ ಭಾರತ ತಂಡ ಸತತ 10 ಪಂದ್ಯಗಳನ್ನು ಗೆದ್ದು ಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿತ್ತು.

ವಿರಾಟ್‌ ಕೊಹ್ಲಿ ಯಾವುದೇ ದೊಡ್ಡ ಟೂರ್ನಿ ಆರಂಭಕ್ಕೂ ಅಥವಾ ಮುಗಿದ ಮೇಲೆ ವಿಶ್ರಾಂತಿ ಪಡೆದು, ಕುಟುಂಬದ ಜೊತೆ ಕಾಲವನ್ನು ಕಳೆಯುತ್ತಿದ್ದಾರೆ. ಇದಕ್ಕೂ ಮೊದಲು ವಿರಾಟ್‌ ಕೊಹ್ಲಿ ಉತ್ತರಾಖಂಡದಲ್ಲಿ ದೇಗುಲಗಳ ದರ್ಶನ ಮಾಡಿದ್ದರು. ಈ ವಿಡಿಯೋ ಹಾಗೂ ಫೋಟೋಗಳು ಸಹ ಸಾಮಾಜಿಕ ತಾಣಗಳಲ್ಲಿ ಸಖತ್ ವೈರಲ್ ಆಗಿದ್ದವು.

ಏಷ್ಯಾ ಕಪ್ ಮತ್ತು ವಿಶ್ವಕಪ್ ಪಂದ್ಯಾವಳಿಗೂ ಮುನ್ನ ಪತ್ನಿ ಅನುಷ್ಕಾ ಶರ್ಮಾರೊಂದಿಗೆ ಕೆಲವು ಹಿಂದೂ ದೇವಾಲಯಗಳಿಗೆ ಭೇಟಿ ನೀಡಿ ಪೂಜಾ ಸೇವೆ ಸಲ್ಲಿಸಿದ್ದರು.

Story first published: Friday, December 1, 2023, 10:10 [IST]
Other articles published on Dec 1, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+