Breaking News: ಮಹಿಳಾ ವಿಶ್ವ ಬಾಕ್ಸಿಂಗ್: ಚಿನ್ನದ ಪದಕ ಗೆದ್ದ ಭಾರತದ ಬಾಕ್ಸರ್ ನಿಖತ್ ಜರೀನ್

ಟರ್ಕಿಯಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾರತೀಯ ಬಾಕ್ಸರ್ ನಿಖತ್ ಜರೀನ್ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಭಾರತದ ನಿಖತ್ ಜರೀನ್ ಈ ಅದ್ಭುತ ಸಾಧನೆ ಮಾಡಿ ಮಿಂಚಿದ್ದಾರೆ. ಗುರುವಾರ ನಡೆದ 52 ಕೆಜಿ ವಿಭಾಗದ ಫೈನಲ್‌ನ ಪಂದ್ಯ ನಡೆದಿದ್ದು ಈ ಪಂದ್ಯದಲ್ಲಿ ಭಾರತದ ನಿಖತ್ ಜರೀನ್ ಥಾಯ್ಲೆಂಡ್‌ನ ಜಿಟ್‌ಪಾಂಗ್ ಜುತಾಮಾಸ್ ವಿರುದ್ಧ ಸೆಣೆಸಾಟ ನಡೆಸಿ ಅಮೋಘ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿನ್ನದ ಪದಕಕ್ಕಾಗಿ ನಡೆದ ಈ ಹೋರಾಟದಲ್ಲಿ ಎದುರಾಳಿ ಜುಟಮಾಸ್ ಜಿಟ್‌ಪಾಂಗ್ ಅವರನ್ನು ಜರೀನ್ 5-0 ಅಂತರದಿಂದ ಸೋಲಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಗೆಲುವಿನೊಂದಿಗೆ ವಿಶ್ವ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಐದನೇ ಭಾರತೀಯ ಮಹಿಳಾ ಬಾಕ್ಸರ್ ಎನಿಸಿಕೊಂಡಿದ್ದಾರೆ.
ನಿಖತ್ ಜರೀನ್ ಅವರಿಗಿಂತ ಮುನ್ನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಗಳಿಸಿದ ಭಾರತೀಯರ ಪೈಕಿ ಮೇರಿ ಕೋಮ್ ಅಗ್ರಸ್ಥಾನದಲ್ಲಿದ್ದು ಆರು ಬಾರಿ ಚಿನ್ನದ ಪದಕ ಗೆದ್ದಿದ್ದಾರೆ. ಸರಿತಾ ದೇವಿ, ಜೆನ್ನಿ ಆರ್‌ಎಲ್ ಮತ್ತು ಲೇಖಾ ಕೆಸಿ ಕೂಡ ಚಿನ್ನದ ಪದಕ ಗೆದ್ದಿರುವ ಭಾರತೀಯ ಮಹಿಳಾ ಬಾಕ್ಸರ್‌ಗಳಾಗಿದ್ದಾರೆ.
ನಿಖತ್ ಜರೀನ್ ಚಿನ್ನದ ಪದಕ ಗೆಲ್ಲುವ ಮೂಲ ಭಾರತ ಈ ಚಾಂಪಿಯನ್‌ಶಿಪ್‌ನಲ್ಲಿ 1 ಚಿನ್ನದ ಪದಕ ಮತ್ತು ಎರಡು ಕಂಚಿನ ಪದಕಗಳೊಂದಿಗೆ ಪಂದ್ಯಾವಳಿಯನ್ನು ಪೂರ್ಣಗೊಳಿಸಿದೆ. ಮನೀಶಾ ಮೌನ್ 57 ಕೆಜಿಯಲ್ಲಿ ಕಂಚು ಗೆದ್ದಿದ್ದರೆ, ಪರ್ವೀನ್ ಹೂಡಾ ಕೂಡ 63 ಕೆಜಿಯಲ್ಲಿ ಭಾರತಕ್ಕೆ ಎರಡನೇ ಕಂಚಿನ ಪದಕವನ್ನು ಗೆದ್ದಿದ್ದಾರೆ.
ಇನ್ನು ಈ ಫೈನಲ್ ಪಂದ್ಯದಲ್ಲಿ ಭರ್ಜರಿಯಾಗಿ ಗೆಲ್ಲುವ ಮೂಲಕ ಭಾರತದ ನಿಖತ್ ಜರೀನ್ ಚಾಂಪಿಯನ್‌ಶಿಪ್‌ನಲ್ಲಿ ಸರ್ವಾನುಮತದ ನಿರ್ಧಾರದೊಂದಿಗೆ ಪ್ರತಿ ಪಂದ್ಯವನ್ನು ಗೆದ್ದುಕೊಂಡಂತಾಗಿದೆ. ಇದು ಪಂದ್ಯಾವಳಿಯುದ್ದಕ್ಕೂ ಭಾರತೀಯ ಬಾಕ್ಸರ್ ಹೊಂದಿದ್ದ ಪ್ರಾಬಲ್ಯವನ್ನು ವ್ಯಕ್ತಪಡಿಸುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications