ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಲೈಂಗಿಕ ಕಿರುಕುಳ ಆರೋಪಕ್ಕೆ ಕ್ರಮ ತೆಗೆದುಕೊಳ್ಳದಿದ್ದರೆ FIR ದಾಖಲಿಸುತ್ತೇವೆ: ವಿನೇಶ್ ಫೋಗಟ್

Women wrestlers will file FIR if action not taken on sexual harrasment allegations Vinesh Phogat warning

ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಮಾಡಿರುವ ಸ್ಟಾರ್ ರೆಸ್ಲರ್‌ಗಳು ಎರಡನೇ ದಿನವೂ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ವಿನೇಶ್ ಫೋಗಟ್ ಬ್ರಿಜ್ ಭೂಷಣ್ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಎಫ್‌ಐಆರ್ ದಾಖಲಿಸುವ ಎಚ್ಚರಿಕೆ ನೀಡಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರ ಸೂಕ್ತ ಕ್ರಮವನ್ನು ತೆಗೆದುಕೊಳ್ಳದಿದ್ದರೆ ಎಫ್‌ಐಆರ್ ದಾಖಲಿಸುತ್ತೇವೆ ಎಂದು ಏಶ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್‌ನ ಚಿನ್ನದ ಪದಕ ವಿಜೇತ ರೆಸ್ಲರ್ ಹೇಳಿಕೆ ನೀಡಿದ್ದಾರೆ. ಜಂತರ್ ಮಂತರ್‌ನಲ್ಲಿ ಗುರುವಾರ ಮಾತನಾಡಿದ ವಿನೇಶ್ ಫೋಗಟ್ "ದೇಶದ ಮಹಿಳಾ ರೆಸ್ಲರ್‌ಗಳು ಕೂಡ ಸುರಕ್ಷಿತವಲ್ಲ ಎಂಬುದನ್ನು ಊಹಿಸಲು ಕೂಡ ಕಷ್ಟವಾಗುತ್ತದೆ ಎಂದಿರುವ ಅವರು ಆರೋಪಿತರ ವಿರುದ್ಧ ಸೂಕ್ತವಾದ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ರೆಸ್ಲರ್‌ಗಳ ಬೆಂಬಲ: ಇನ್ನು ಜನವರಿ 18ರಿಂದ ಆರಂಭವಾಗಿರುವ ರೆಸ್ಲರ್‌ಗಳ ಪ್ರತಿಭಟನೆ ಇಂದು ಎರಡನೇ ದಿನವೂ ಮುಂದುವರಿದಿದೆ. ಎರಡನೇ ದಿನವಾದ ಇಂದು ಈ ಪ್ರತಿಭಟನೆಗೆ ಮತ್ತಷ್ಟು ಸ್ಟಾರ್ ರೆಸ್ಲರ್‌ಗಳು ಬೆಂಬಲ ನೀಡಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ವಿಜೇತ ರವಿ ದಹಿಯಾ, ಕಾಮನ್‌ವೆಲ್ತ್ ಚಿನ್ನದ ಪದಕ ವಿಜೇತ ರೆಸ್ಲರ್ ನವೀನ್ ಮಲಿಕ್ ಮತ್ತು ದೀಪಕ್ ಪುನಿಯಾ ಕೂಡ ಇಂದು ಈ ಪ್ರತಿಭಟನೆಗೆ ಆಗಮಿಸಿ ಬೆಂಬಲ ನೀಡಿದ್ದಾರೆ.

ಇನ್ನು ಬುಧವಾರ ಪ್ರತಿಭಟನೆಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಸ್ಟಾರ್ ರೆಸ್ಲರ್ ವಿನೀಶ್ ಫೋಗಟ್ ರೆಸ್ಲಿಂಗ್ ಫೆಡರೇಶನ್‌ನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ರೆಸ್ಲರ್‌ಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ವಿನೇಶ್ ಫೋಗಟ್ ಸ್ವತಃ ತನಗೆ ಬ್ರಿಜ್ ಭೂಷಣ್ ಮಾನಸಿಕ ಹಿಂಸೆಯನ್ನು ಕೂಡ ನೀಡುತ್ತಿದ್ದು ಆತ್ಮಹತ್ಯೆಗೂ ತಾನು ಪ್ರಯತ್ನಿಸಿರುವುದಾಗಿ ಹೇಳಿಕೊಂಡಿದ್ದರು.

ಪ್ರಸ್ತುತ ಇಂಡಿಯನ್ ರೆಸ್ಲಿಂಗ್ ಫೆಡರೇಶನ್‌ನ ಮುಖ್ಯಸ್ಥರಾಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೋಕಸಭಾ ಸದಸ್ಯರೂ ಆಗಿದ್ದಾರೆ. ಉತ್ತರ ಪ್ರದೇಶದ ಕೈಸೆರ್ಗಿನಿ ಕ್ಷೇತ್ರವನ್ನು ಪ್ರತಿನಿಧಿಸುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯನ್ನು ಪ್ರತಿನಿಧಿಸುತ್ತಿದ್ದಾರೆ.

Story first published: Thursday, January 19, 2023, 18:58 [IST]
Other articles published on Jan 19, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X