ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ವಿಶ್ವಕಪ್: ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾ ನಂ.1, ಭಾರತ 2

By Mahesh

ದುಬೈ, ಫೆ.2: ವಿಶ್ವಕಪ್ 2015ಕ್ಕೂ ಮುನ್ನ ಏಕದಿನ ಕ್ರಿಕೆಟ್ ಶ್ರೇಯಾಂಕ ಪಟ್ಟಿಯನ್ನು ಐಸಿಸಿ ತನ್ನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದ್ದರೆ, ಹಾಲಿ ಚಾಂಪಿಯನ್ ಟೀಂ ಇಂಡಿಯಾ ಎರಡನೇ ಸ್ಥಾನದಲ್ಲಿದೆ.

ಇತ್ತೀಚಿನ ತ್ರಿಕೋನ ಏಕದಿನ ಸರಣಿಯನ್ನು ಗೆಲ್ಲುವ ಮೂಲಕ ಆಸ್ಟ್ರೇಲಿಯಾ ತಂಡ 6 ಅಂಕ ಗಳಿಸಿ ಒಟಾರೆ 120 ಅಂಕಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಸರಣಿಯಲ್ಲಿ ಕಳಪೆ ಸಾಧನೆ ತೋರಿದರೂ ಟೀಂ ಇಂಡಿಯಾ 114 ಅಂಕಗಳೊಂದಿಗೆ ಎರಡನೇ ಸ್ಥಾನ ಗಿಟ್ಟಿಸಿಕೊಂಡಿದೆ.

World Cup: Australia enter as No. 1, India in 2nd spot

ದಾಖಲೆಗಳನ್ನು ಧೂಳಿಪಟ ಮಾಡುತ್ತಿರುವ ದಕ್ಷಿಣ ಆಫ್ರಿಕಾ ತಂಡ 113 ಅಂಕ ಪಡೆದು ಮೂರನೇ ಸ್ಥಾನಕ್ಕೇರಿದೆ ಎಂದು ಐಸಿಸಿ ಸೋಮವಾರ ಪ್ರಕಟಿಸಿದೆ.
ತ್ರಿಕೋನ ಸರಣಿಯಲ್ಲಿ ಒಂದು ಪಂದ್ಯವನ್ನು ಗೆಲ್ಲದೆ ಟೂರ್ನಿಯಿಂದ ಹೊರಬಿದ್ದ ಟೀಂ ಇಂಡಿಯಾ ಫೆ.15ರಂದು ವಿಶ್ವಕಪ್ ಅಭಿಯಾನ ಆರಂಭಿಸಲಿದ್ದು ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸಲಿದೆ. [ಸಚಿನ್, ರಿಕಿ ದಾಖಲೆ ಧೂಳಿಪಟ ಸಾಧ್ಯವೇ?]

ವಿಶ್ವಕಪ್ 2015 ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಫೆ.14 ರಿಂದ ಮಾರ್ಚ್ 29ರ ತನಕ ನಡೆಯಲಿದೆ. ಟೀಂ ಇಂಡಿಯಾ ಹಾಲಿ ಚಾಂಪಿಯನ್ ಆಗಿದ್ದು, ಕಪ್ ಉಳಿಸಿಕೊಳ್ಳುವುದೇ ನೋಡಬೇಕಿದೆ. [ಶತಕ ವೀರರ ಪೈಕಿ ಸಚಿನ್ ಇಸ್ ಬೆಸ್ಟ್]

ಐಸಿಸಿ ಏಕದಿನ ಕ್ರಿಕೆಟ್ ಶ್ರೇಯಾಂಕ (ಫೆ.2)
1. ಆಸ್ಟ್ರೇಲಿಯಾ 120
2. ಭಾರತ 114
3. ದಕ್ಷಿಣ ಆಫ್ರಿಕಾ 113
4. ಶ್ರೀಲಂಕಾ 109
5. ಇಂಗ್ಲೆಂಡ್ 104
6. ನ್ಯೂಜಿಲೆಂಡ್ 101
7. ಪಾಕಿಸ್ತಾನ 96
8. ವೆಸ್ಟ್ ಇಂಡೀಸ್ 94
9. ಬಾಂಗ್ಲಾದೇಶ 75
10.ಜಿಂಬಾಬ್ವೆ 53
11.ಅಫ್ಘಾನಿಸ್ತಾನ 41
12. ಐರ್ಲೆಂಡ್ 34

ಒನ್ ಇಂಡಿಯಾ ಸುದ್ದಿ

Story first published: Wednesday, January 3, 2018, 10:16 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X