ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿಗೆ ಹಿಂದಿರುಗಿಸುವುದಾಗಿ ಘೋಷಿಸಿದ ಕುಸ್ತಿಪಟು ಭಜರಂಗ್ ಪುನಿಯಾ
ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್ಐ) ಅಧ್ಯಕ್ಷರಾಗಿ ಸಂಜಯ್ ಸಿಂಗ್ ಆಯ್ಕೆಯಾದ ಒಂದು ದಿನದ ಬಳಿಕ, ಪ್ರತಿಭಟನಾ ನಿರತ ಕುಸ್ತಿಪಟುಗಳ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ.
ಇದೇ ವೇಳೆ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿಗೆ ಹಿಂದಿರುಗಿಸುವುದಾಗಿ ಭಾರತೀಯ ಕುಸ್ತಿಪಟು ಭಜರಂಗ್ ಪುನಿಯಾ ಶುಕ್ರವಾರ, ಡಿಸೆಂಬರ್ 22ರಂದು ಘೋಷಿಸಿದ್ದಾರೆ.

ಡಬ್ಲ್ಯುಎಫ್ಐ ನೂತನ ಅಧ್ಯಕ್ಷ ಸಂಜಯ್ ಸಿಂಗ್ ಅವರು ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪರಮಾಪ್ತರಾಗಿದ್ದಾರೆ. ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನಾ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯದ ದೂರು ನೀಡಿದ್ದರು.
ಇತ್ತೀಚಿಗೆ ನಡೆದ ಭಾರತೀಯ ಕುಸ್ತಿ ಒಕ್ಕೂಟದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಸಿಂಗ್ ಬೆಂಬಲ ಸಮಿತಿಯು ಹೆಚ್ಚು 15 ಹುದ್ದೆಗಳಲ್ಲಿ 13 ಹುದ್ದೆಗಳನ್ನು ಸುಲಭವಾಗಿ ಗೆದ್ದಿದ್ದಾರೆ.
ಟೊಕಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಕುಸ್ತಿಪಟು ಭಜರಂಗ್ ಪುನಿಯಾ ಅವರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ "ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಮಂತ್ರಿಗೆ ಹಿಂದಿರುಗಿಸುತ್ತಿದ್ದೇನೆ. ಅದನ್ನು ಘೋಷಿಸಲು ಇದು ನನ್ನ ಪತ್ರವಾಗಿದೆ. ಇದು ನನ್ನ ಹೇಳಿಕೆಯಾಗಿದೆ," ಎಂದು ಬರೆದುಕೊಂಡಿದ್ದಾರೆ.
ಭಾರತೀಯ ಕುಸ್ತಿ ಒಕ್ಕೂಟ ಅಧ್ಯಕ್ಷರಾಗಿ ಸಂಜಯ್ ಸಿಂಗ್ ಆಯ್ಕೆಯಾದ ತಕ್ಷಣವೇ ಮಹಿಳಾ ಕುಸ್ತಿಪಟು ಸಾಕ್ಷಿ ಮಲಿಕ್ ಪ್ರತಿಭಟನೆಯ ಸಂಕೇತವಾಗಿ ಕ್ರೀಡೆಯಿಂದ ನಿವೃತ್ತಿ ಘೋಷಿಸಿದರು.
ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಮೂವರು ಈ ವರ್ಷದ ಜನವರಿಯಲ್ಲಿ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಡಬ್ಲ್ಯುಎಫ್ಐನಲ್ಲಿ ಸಿಬ್ಬಂದಿ ಬದಲಾವಣೆಗೆ ಆಕ್ರಮಣಕಾರಿಯಾಗಿ ಒತ್ತಾಯಿಸಿದ್ದರು. ಆದರೆ ಬಿಜೆಪಿ ಸಂಸದರ ನಿಕಟ ಸಹವರ್ತಿ ಇದೀಗ ಡಬ್ಲ್ಯುಎಫ್ಐ ಚುಕ್ಕಾಣಿ ಹಿಡಿದಿದ್ದಾರೆ.
ಉತ್ತರಪ್ರದೇಶದ ವಾರಣಾಸಿಯಿಂದ ಬಂದಿರುವ ಯುಪಿ ವ್ರೆಸ್ಲಿಂಗ್ ಅಸೋಸಿಯೇಶನ್ ಉಪಾಧ್ಯಕ್ಷ ಸಂಜಯ್ ಸಿಂಗ್ ಅವರು ತಮ್ಮ ಏಳು ಪ್ರತಿಸ್ಪರ್ಧಿ ಮತ್ತು 2010ರ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆಯೋರಾನ್ ವಿರುದ್ಧ 40 ಮತಗಳನ್ನು ಗಳಿಸಿದರು.
ಅನಿತಾ ಶೆಯೋರಾನ್ ಸಮಿತಿಯು ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಗೆಲ್ಲುವಲ್ಲಿ ಯಶಸ್ವಿಯಾದರೂ, ಮಾಜಿ ರೈಲ್ವೇಸ್ ಸ್ಪೋರ್ಟ್ಸ್ ಪ್ರಮೋಷನ್ ಬೋರ್ಡ್ (ಆರ್ಎಸ್ಪಿಬಿ) ಕಾರ್ಯದರ್ಶಿ ಪ್ರೇಮ್ ಚಂದ್ ಲೋಚಬ್, ದರ್ಶನ್ ಲಾಲ್ ಅವರನ್ನು 27-19 ಅಂತರದಿಂದ ಸೋಲಿಸಿದರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಫುಡ್ ಜಾಯಿಂಟ್ಗಳ ಸರಣಿಯನ್ನು ನಡೆಸುತ್ತಿರುವ ದೇವೆಂದರ್ ಸಿಂಗ್ ಕಡಿಯನ್ ಅವರು ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಹತ್ತಿರವಾಗಿದ್ದಾರೆ ಎಂದು ಪರಿಗಣಿಸಲಾಗಿದೆ. ಹಿರಿಯ ಉಪಾಧ್ಯಕ್ಷ ಸ್ಥಾನಕ್ಕೆ ಐ.ಡಿ ನಾನಾವತಿ ಅವರನ್ನು 32-15 ಅಂತರದಿಂದ ಸೋಲಿಸಿದರು.
ಈ ಎರಡು ಹುದ್ದೆಗಳಿಗೆ ನಡೆದ ಚುನಾವಣೆಯಲ್ಲಿ ಮತಗಳು ವಿಭಜನೆಯಾದಾಗ ಸಂಜಯ್ ಸಿಂಗ್ ಭಾರಿ ಅಂತರದಿಂದ ಗೆದ್ದ ಕಾರಣ, ರಾಜಿ ಸೂತ್ರವನ್ನು ರೂಪಿಸಿರಬೇಕೆಂದು ಅನಿತಾ ಶಿಯೋರಾನ್ ಪಾಳಯದಿಂದ ಈ ಇಬ್ಬರು ಅಭ್ಯರ್ಥಿಗಳ ಗೆಲುವನ್ನು ಸೂಚಿಸುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications