ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಕೊಲೆ ಪ್ರಕರಣ: ರೈಲ್ವೆ ಇಲಾಖೆಯಿಂದ ರೆಸ್ಲರ್ ಸುಶೀಲ್ ಕುಮಾರ್ ಅಮಾನತು

 Arrested wrestler Sushil Kumar suspended from govt job in Indian Railways

ಮೇ 4ರಂದು ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಸಾಗರ್ ಧಂಖರ್ ಎಂಬ ಕುಸ್ತಿಪಟುವಿನ ಕೊಲೆ ನಡೆದಿತ್ತು. ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತನಾಗಿದ್ದ ರೆಸ್ಲರ್ ಸುಶೀಲ್ ಕುಮಾರ್ ಈ ಕೊಲೆಯಲ್ಲಿ ಶಾಮೀಲಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ಸುಶೀಲ್ ಕುಮಾರ್ ತಲೆಮರೆಸಿಕೊಂಡಿದ್ದರು. ದಿನದಿಂದ ದಿನಕ್ಕೆ ಜಾಗ ಬದಲಾಯಿಸುತ್ತಾ ತಲೆಮರೆಸಿಕೊಂಡಿದ್ದ ಸುಶೀಲ್ ಕುಮಾರ್ ಎರಡು ದಿನಗಳ ಹಿಂದೆಯಷ್ಟೇ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕೊಹ್ಲಿ ಅಲ್ಲ ಅತಿಹೆಚ್ಚು ಸಂಭಾವನೆ ಪಡೆಯುವ ನಾಯಕ; ಇಲ್ಲಿದೆ ಟಾಪ್ 5 ನಾಯಕರ ಪಟ್ಟಿಕೊಹ್ಲಿ ಅಲ್ಲ ಅತಿಹೆಚ್ಚು ಸಂಭಾವನೆ ಪಡೆಯುವ ನಾಯಕ; ಇಲ್ಲಿದೆ ಟಾಪ್ 5 ನಾಯಕರ ಪಟ್ಟಿ

ಕುಸ್ತಿಪಟು ಸಾಗರ್ ಧಂಖರ್ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಭಾಗಿಯಾಗಿರುವುದಕ್ಕೆ ದೆಹಲಿ ಪೊಲೀಸರ ಬಳಿ ಸಾಕ್ಷ್ಯಗಳಿವೆ ಎನ್ನಲಾಗುತ್ತಿದ್ದು ಇತ್ತೀಚೆಗಷ್ಟೇ ಕೊಲೆ ನಡೆದ ಸ್ಥಳಕ್ಕೆ ಸುಶೀಲ್ ಕುಮಾರ್‌‌ನ್ನು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದರು. ಇದಾದ ಬೆನ್ನಲ್ಲೇ ಇದೀಗ ಸುಶೀಲ್ ಕುಮಾರ್ ಪಾಲಿಗೆ ಮತ್ತೊಂದು ಕಹಿ ಸುದ್ದಿ ಎದುರಾಗಿದ್ದು ರೈಲ್ವೆ ಇಲಾಖೆಯ ಹುದ್ದೆಯಿಂದ ಅಮಾನತಾಗಿದ್ದಾರೆ.

ಒಂದು ಔಷಧಿಗೆ 16 ಕೋಟಿ; ಮುಗ್ಧ ಮಗುವಿನ ಜೀವ ಉಳಿಸಿ ಮಾನವೀಯತೆ ಮೆರೆದ ಕಿಂಗ್ ಕೊಹ್ಲಿಒಂದು ಔಷಧಿಗೆ 16 ಕೋಟಿ; ಮುಗ್ಧ ಮಗುವಿನ ಜೀವ ಉಳಿಸಿ ಮಾನವೀಯತೆ ಮೆರೆದ ಕಿಂಗ್ ಕೊಹ್ಲಿ

ಹೌದು ಸುಶೀಲ್ ಕುಮಾರ್‌‌ ವಿರುದ್ಧ ಕೊಲೆ ಪ್ರಕರಣದ ತನಿಖೆ ನಡೆಯುತ್ತಿರುವ ಕಾರಣದಿಂದಾಗಿ ಅವರನ್ನು ರೈಲ್ವೆ ಇಲಾಖೆಯ ಹುದ್ದೆಯಿಂದ ಅಮಾನತುಗೊಳಿಸಿರುವುದಾಗಿ ಉತ್ತರ ರೈಲ್ವೆಯ ಸಿಪಿಆರ್‌ಒ ದೀಪಕ್ ಕುಮಾರ್ ಹೇಳಿಕೆ ನೀಡಿದ್ದಾರೆ.

Story first published: Tuesday, May 25, 2021, 16:08 [IST]
Other articles published on May 25, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X