For Quick Alerts
ALLOW NOTIFICATIONS  
For Daily Alerts

Wrestlers Protest: ಕುಸ್ತಿಪಟುಗಳ ನಿರ್ಧಾರಕ್ಕೆ ಕಳವಳ ವ್ಯಕ್ತಪಡಿಸಿದ 1983 ವಿಶ್ವಕಪ್ ವಿಜೇತ ತಂಡ

ನವದೆಹಲಿಯಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಎಸೆಯುವ ನಿರ್ಧಾರಕ್ಕೆ 1983ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ಸದಸ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ಕ್ರೀಡಾಪಟುಗಳು ಆತುರದ ಹೆಜ್ಜೆ ಇಡಬಾರದು ಎಂದು ಒತ್ತಾಯಿಸಿದ್ದಾರೆ.

ಪದಕಗಳನ್ನು ಗಂಗಾನದಿಯಲ್ಲಿ ಎಸೆಯದಂತೆ ಮತ್ತು ತೀವ್ರವಾದ ಹೆಜ್ಜೆ ಇಡಬಾರದು. ಶೀಘ್ರವೇ ಅವರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಲಾಗುತ್ತದೆ ಎಂದು ಆಶಿಸಿದ್ದಾರೆ.

Wrestlers Protest: 1983 World Cup Winning Team Expressed Concern Over Decision Of The Wrestlers

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಶೋಷಣೆ ಆರೋಪದ ಮೇಲೆ ಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬಿರ್ಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದ ಕುಸ್ತಿಪಟು ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಹಲವರು ಮೇ 30ರಂದು ಹರಿದ್ವಾರದ ಗಂಗಾ ನದಿಯಲ್ಲಿ ತಮ್ಮ ಪದಕಗಳನ್ನು ಎಸೆಯುವ ಬೆದರಿಕೆ ಹಾಕಿದ್ದರು.

ಮೇ 28ರಂದು ಅನುಮತಿಯಿಲ್ಲದೆ ಹೊಸ ಸಂಸತ್ ಭವನದ ಕಡೆಗೆ ಮೆರವಣಿಗೆ ನಡೆಸಿದಾಗ ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆಗಾಗಿ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದರು.

Wrestlers Protest: 1983 World Cup Winning Team Expressed Concern Over Decision Of The Wrestlers

ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದ ಪೊಲೀಸರು, ಕುಸ್ತಿಪಟುಗಳನ್ನು ಮತ್ತೆ ಜಂತರ್ ಮಂತರ್‌ಗೆ ಹಿಂತಿರುಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕುಸ್ತಿಪಟುಗಳ ವಿರುದ್ಧ ಪೊಲೀಸರ ಕ್ರಮಕ್ಕೆ ದೇಶದ ವಿವಿಧ ವಲಯಗಳಿಂದ ಟೀಕೆ ವ್ಯಕ್ತವಾಗಿತ್ತು.

"ನಮ್ಮ ಚಾಂಪಿಯನ್ ಕುಸ್ತಿಪಟುಗಳನ್ನು ಅಮಾನುಷವಾಗಿ ನಡೆಸಿಕೊಳ್ಳುತ್ತಿರುವ ಅಸಹಜ ದೃಶ್ಯಗಳಿಂದ ನಾವು ದುಃಖಿತರಾಗಿದ್ದೇವೆ ಹಾಗೂ ವಿಚಲಿತರಾಗಿದ್ದೇವೆ. ಕುಸ್ತಿಪಟುಗಳು ಕಷ್ಟಪಟ್ಟು ಗಳಿಸಿದ ಪದಕಗಳನ್ನು ಗಂಗಾ ನದಿಗೆ ಎಸೆಯಲು ಯೋಚಿಸುತ್ತಿದ್ದಾರೆ ಎಂಬುದನ್ನು ನೋಡಿ ನಾವು ಹೆಚ್ಚು ಕಳವಳಗೊಂಡಿದ್ದೇವೆ," ಎಂದು 1983ರ ವಿಶ್ವಕಪ್ ವಿಜೇತ ತಂಡವು ಪಿಟಿಐಗೆ ಹೇಳಿಕೆ ಬಿಡುಗಡೆ ಮಾಡಿದೆ.

Wrestlers Protest: 1983 World Cup Winning Team Expressed Concern Over Decision Of The Wrestlers

"ಆ ಪದಕಗಳು ಹಲವು ವರ್ಷಗಳ ಪ್ರಯತ್ನ, ತ್ಯಾಗ, ಸಂಕಲ್ಪ ಮತ್ತು ಶ್ರದ್ಧೆಗಳನ್ನು ಒಳಗೊಂಡಿವೆ. ಅವುಗಳು ತಮ್ಮದ್ದಲ್ಲ. ಆದರೆ ರಾಷ್ಟ್ರದ ಹೆಮ್ಮೆ ಮತ್ತು ಸಂತೋಷದ ಸಂಕೇತಗಳಾಗಿವೆ. ಈ ವಿಷಯದಲ್ಲಿ ಯಾವುದೇ ಆತುರದ ನಿರ್ಧಾರವನ್ನು ತೆಗೆದುಕೊಳ್ಳಬೇಡಿ ಎಂದು ನಾವು ಅವರನ್ನು ಒತ್ತಾಯಿಸುತ್ತೇವೆ. ಅವರ ಕುಂದುಕೊರತೆಗಳನ್ನು ಆಲಿಸಿ ತ್ವರಿತವಾಗಿ ಪರಿಹರಿಸಬೇಕೆಂದು ನಾವು ಆಶಿಸುತ್ತೇವೆ. ದೇಶದ ಕಾನೂನು ಮೇಲುಗೈ ಸಾಧಿಸಲಿ," ಎಂದು ವಿಶ್ವಕಪ್ ವಿಜೇತ ತಂಡ ಸದಸ್ಯರು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಲೆಜೆಂಡರಿ ನಾಯಕ ಕಪಿಲ್ ದೇವ್ ನಾಯಕತ್ವದಲ್ಲಿ ಭಾರತೀಯ ಕ್ರಿಕೆಟ್ ತಂಡವು ಬಲಿಷ್ಠ ಕ್ಲೈವ್ ಲಾಯ್ಡ್ ನಾಯಕತ್ವದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ ವಿಶ್ವದ ಮೂರನೇ ಹಾಗೂ ದೇಶದ ಮೊದಲ ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು.

ಸುನಿಲ್ ಗವಾಸ್ಕರ್, ಮೊಹಿಂದರ್ ಅಮರನಾಥ್, ಕೃಷ್ಣಮಾಚಾರಿ ಶ್ರೀಕಾಂತ್, ಸೈಯದ್ ಕಿರ್ಮಾನಿ, ಯಶ್ಪಾಲ್ ಶರ್ಮಾ, ಮದನ್ ಲಾಲ್, ಬಲ್ವಿಂದರ್ ಸಿಂಗ್ ಸಂಧು, ಸಂದೀಪ್ ಪಾಟೀಲ್, ಕೀರ್ತಿ ಆಜಾದ್, ರೋಜರ್ ಬಿನ್ನಿ ಅವರನ್ನೊಳಗೊಂಡ ತಂಡವು ಜೂನ್ 25, 1983ರಂದು ಲಂಡನ್‌ನ ಲಾರ್ಡ್ಸ್‌ನಲ್ಲಿ ಆಡಿದ ಸ್ಮರಣೀಯ ಫೈನಲ್‌ನಲ್ಲಿ ಗೆಲುವು ಸಾಧಿಸಿತ್ತು.

Story first published: Friday, June 2, 2023, 18:46 [IST]
Other articles published on Jun 2, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+