Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮತ್ತೆ ಪ್ರತಿಭಟನೆಗೆ ಇಳಿದ ರೆಸ್ಲರ್‌ಗಳು: 3 ತಿಂಗಳಾದರೂ ನ್ಯಾಯ ದೊರೆತಿಲ್ಲ ಎಂದ ವಿನೇಶ್ ಫೋಗಟ್

ಭಾರತದ ಸ್ಟಾರ್ ರೆಸ್ಲರ್ ವಿನೇಶ್ ಫೋಗಟ್ ದೆಹಲಿ ಪೊಲೀಸರ ವಿರುದ್ಧ ಸಿಡಿದೆದ್ದಿದ್ದಾರೆ. ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ(WFI)ದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ಪೊಲೀಸರು ನಿರಾಕರಿಸಿದ್ದಾರೆ ಎಂದು ಫೋಗಟ್ ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೊಮ್ಮೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ವಿನೇಶ್ ಫೋಗಟ್ ಹಾಗೂ ಭಜರಂಗ್ ಪುನಿಯಾ.

ಕಳೆದ ಜನವರಿ ತಿಂಗಳಿನಲ್ಲಿ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಮೊದಲಾದ ಸ್ಟಾರ್ ರೆಸ್ಲರ್‌ಗಳು WFI ಅಧ್ಯಕ್ಷ ಬ್ರಿಜ್ ಭೀಷನ್ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಹೋರಿಸಿದ್ದರು. ನಂತರ ದೆಹಲಿಯ ಜಂತರ್ ಮಂತರ್‌ನಲ್ಲಿ ಹಲವು ರೆಸ್ಲರ್‌ಗಳು ಪ್ರತಿಭಟನೆಯಲ್ಲಿ ತೊಡಗಿದ್ದರು. ಇದೀಗ ಮತ್ತೊಮ್ಮೆ ಸ್ಟಾರ್ ರೆಸ್ಲರ್‌ಗಳು ಪ್ರತಿಭಟನೆಯ ಹಾದಿಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.

Wrestlers protest at Jantar Mantar: Vinesh Phogat says FIR not taken in Delhi against Brij Bhushan Sharan

ವಿನೇಶ್ ಫೋಗಟ್ ಟ್ವಿಟ್ಟರ್‌ನಲ್ಲಿ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸದ ಬಗ್ಗೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. "ಪ್ರತಿಷ್ಠಿತ ಕುಸ್ತಿ ಸ್ಪರ್ಧೆಗಳಲ್ಲಿ ಈ ದೇಶಕ್ಕೆ ಪ್ರಶಸ್ತಿಗಳನ್ನು ತಂದುಕೊಟ್ಟ ಹಲವು ಮಹಿಳಾ ರೆಸ್ಲರ್‌ಗಳು WFI ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರಿಂದ ಲೈಂಗಿಕ ಶೋಷಣೆಗೆ ಹಾಗೂ ಕಿರುಕುಳಕ್ಕೆ ಒಳಗಾಗಿದ್ದಾರೆ. 21.04.2023 ರಂದು ದೂರು ನೀಡಿದ್ದರೂ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಳ್ಳುತ್ತಿಲ್ಲ" ಎಂದು ಟ್ವೀಟ್‌ನಲ್ಲಿ ಕಿಡಿಕಾರಿದ್ದಾರೆ ವಿನೇಶ್ ಫೋಗಟ್.

ಕಳೆದ ಜನವರಿಯಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳನ್ನು ಮಾಡಿ ಪ್ರತಿಭಟನೆ ನಡೆಸಿರುವ ಕುಸ್ತಿಪಟುಗಳು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ಗೆ (ಐಒಎ) ಪತ್ರ ಬರೆದು ಆರೋಪಗಳ ತನಿಖೆಗೆ ತನಿಖಾ ಸಮಿತಿಯನ್ನು ರಚಿಸುವಂತೆ ಒತ್ತಾಯಿಸಿದ್ದರು. ಇದಕ್ಕೆ ಪೂರಕವಾಗಿ ಭಾರತೀಯ ಒಲಿಂಪಿಕ್ಸ್ ಅಸೊಸಿಯೇಶನ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಸಲುವಾಗಿ 7 ಸದಸ್ಯರ ಸಮಿತಿಯನ್ನು ರಚಿಸಿತ್ತು. ತನಿಖೆಯ ದೃಷ್ಟಿಯಿಂದ ಬ್ರಿಜ್ ಭೂಷಣ್ ಸಿಂಗ್‌ಗೆ ಅಧ್ಯಕ್ಷಸ್ಥಾನದಿಂದ ಕೆಳಗಿಳಿಯುವಂತೆ ತಿಳಿಸಲಾಗಿತ್ತು.

ಕಳೆದ ಜನವರಿಯಲ್ಲಿ ರೆಸ್ಲಿಂಗ್ ಫೆಡರೇಶನ್‌ನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಸ್ಟಾರ್ ರೆಸ್ಲರ್ ವಿನೀಶ್ ಫೋಗಟ್ ಗಂಭೀರ ಆರೋಪ ಮಾಡಿದ್ದರು. ಮಹಿಳಾ ರೆಸ್ಲರ್‌ಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದಿದ್ದರು. ಇನ್ನು ಇದೇ ಸಂದರ್ಭದಲ್ಲಿ ವಿನೇಶ್ ಫೋಗಟ್ ಸ್ವತಃ ತನಗೆ ಬ್ರಿಜ್ ಭೂಷಣ್ ಮಾನಸಿಕ ಹಿಂಸೆಯನ್ನು ಕೂಡ ನೀಡುತ್ತಿದ್ದು ಆತ್ಮಹತ್ಯೆಗೂ ತಾನು ಪ್ರಯತ್ನಿಸಿರುವುದಾಗಿ ಹೇಳಿಕೆ ನಿಡಿದ್ದು ಸಾಕಷ್ಟು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು.

Story first published: Sunday, April 23, 2023, 17:06 [IST]
Other articles published on Apr 23, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+