For Quick Alerts
ALLOW NOTIFICATIONS  
For Daily Alerts

ರೆಸ್ಲರ್‌ಗಳ ಪ್ರತಿಭಟನೆ: ರೆಸ್ಲರ್‌ಗಳನ್ನು ನಡೆಸಿಕೊಂಡ ರೀತಿಗೆ 'ಯುನೈಟೆಡ್ ವರ್ಲ್ಡ್ ರೆಸ್ಲಿಂಗ್' ಖಂಡನೆ

ಭಾರತದ ರೆಸ್ಲಿಂಗ್ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಕುಸ್ತಿ ಪಟುಗಳು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ನಡೆಸಿಕೊಂಡ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ರೆಸ್ಲಿಂಗ್ ಸಂಸ್ಥೆಯಾದ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ಕೂಡ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು ಕುಸ್ತಿಪಟುಗಳನ್ನು ನಡೆಸಿಕೊಂಡ ರೀತಿಯನ್ನು ಕಟುವಾಗಿ ಖಂಡಿಸಿದೆ.

ಇನ್ನು ಈ ಖಂಡನೆಯನ್ನು ವ್ಯಕ್ತಪಡಿಸುವುದರ ಜೊತೆಗೆ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ರಾಷ್ಟ್ರೀಯ ಒಕ್ಕೂಟವನ್ನು ಅಮಾನತುಗೊಳಿಸುವ ಎಚ್ಚರಿಕೆಯನ್ನು ಕೂಡ ನೀಡಿದೆ. ನಿಗದಿತ ಸಮಯದೊಳಗೆ ಚುನಾವಣೆ ನಡೆಸದಿದ್ದರೆ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾವನ್ನು ಅಮಾನತುಗೊಳಿಸುವುದಾಗಿ ಅದು ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

Wrestlers protest: United World Wrestling strongly opposes the treatment of Wrestlers

ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ತನ್ನ ಹೇಳಿಕೆಯಲ್ಲಿ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸತಿ ಪಟುಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಗಮನಿಸುತ್ತಿರುವುದಾಗಿ ಹೇಳಿದೆ. ಈ ಪ್ರಕರಣದಲ್ಲಿ ಕೆಲ ಅಪ್ರಾಪ್ತ ರೆಸ್ಲರ್‌ಗಳ ಮೇಲೆ ಕೂಡ ಲೈಂಗಿಕ ದೌರ್ಜನ್ಯ ನಡೆಸಿದ ಆಪಾದನೆಯನ್ನು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕೇಳಿ ಬಂದಿದ್ದರೂ ಆ ಸ್ಥಾದಲ್ಲಿಯೇ ಮುಂದುವರಿದಿದ್ದಾರೆ. ಇನ್ನು ಕಳೆದ ಭಾನುವಾರ ರೆಸ್ಲರ್‌ಗಳು ಪ್ರತಿಭಟನಾ ನಿರತರು ನೂತನ ಸಂಸತ್ ಭವನದತ್ತ ತೆರಳಲು ಯತ್ನಿಸಿದಾಗ ಅವರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿರುವ ಘಟನೆ ಕುಡ ನಡೆದಿದೆ.

"ಪ್ರತಿಭಟನಾ ನಿತರರ ವಿಚಾರವಾಗಿ ಕಳೆದ ಕೆಲ ದಿನಗಹಳಿಮದ ನಡೆಯುತ್ತಿರುವ ಬೆಳವಣಿಗೆ ಮತ್ತಷ್ಟು ಆತಂಕಕಾರಿಯಾಗಿದೆ. ಪ್ರತಿಭಟನಾ ಮೆರವಣಿಗೆಯನ್ನು ಪ್ರಾರಂಭಿಸಿದ್ದಕ್ಕಾಗಿ ಕುಸ್ತಿಪಟುಗಳನ್ನು ಪೊಲೀಸರು ತಾತ್ಕಾಲಿಕವಾಗಿ ಬಂದಿಸಿದ್ದಾರೆ. ಇನ್ನು ಒಂದು ತಿಂಗಳಿಗಿಂತ ಹೆಚ್ಚು ಕಾಲ ಪ್ರತಿಭಟನೆ ನಡೆಸುತ್ತಿದ್ದ ಸ್ಥಳವನ್ನು ಕೂಡ ಅಧಿಕಾರಿಗಳು ತೆರವುಗೊಳಿಸಿದ್ದಾರೆ"

"ಕುಸ್ತಿಪಟುಗಳನ್ನು ನಡೆಸಿಕೊಂಡ ರೀತಿಗೆ ಹಾಗೂ ಅವರ ಬಂಧನವನ್ನು UWW ಬಲವಾಗಿ ಖಂಡಿಸುತ್ತದೆ. ಅಲ್ಲದೆ ಈ ವಿಚಾರವಾಗಿ ಈವರೆಗೆ ನಡೆಸಿರುವ ತನಿಖೆಗೆ ಕೂಡ ನಿರಾಸೆ ವ್ಯಕ್ತಪಡಿಸುತ್ತಿದೆ. ಆರೋಪಗಳ ಬಗ್ಗೆ ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ನಡೆಸಲು ಸಂಬಂಧಿತ ಅಧಿಕಾರಿಗಳಲ್ಲಿ UWW ಒತ್ತಾಯಿಸುತ್ತದೆ" ಎಂದು ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ತನ್ನ ಹೇಖಳಿಕೆಯಲ್ಲಿ ಉಲ್ಲೇಖಿಸಿದೆ.

ಕಳೆದ ಒಂದು ತಿಂಗಳಿಗಿಂತಲೂ ಹೆಚ್ಚು ಸಮಯದಿಂದ ಭಾರತದ ಅಗ್ರ ರೆಸ್ಲರ್‌ಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಶ್ತಿ ಗೆದ್ದುಕೊಟ್ಟಿರುವ ಸ್ಟಾರ್ ರೆಸ್ಲರ್‌ಗಳಾದ ವಿನೇಶ್ ಫೋಗಟ್, ಬಜರಂಗ್ ಪೂನಿಯಾ, ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಹಲವು ಕುಸ್ತಿಪಟುಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಇನ್ನು ನೂತನ ಸಂಸತ್ ಭವನದ ಉದ್ಘಾಟನೆಯ ಸಂದರ್ಭದಲ್ಲಿ ರೆಸ್ಲರ್‌ಗಳು ಭದ್ರತಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ತಾತ್ಕಾಲಿಕವಾಗಿ ಬಂಧಿಸಿ ಬಳಿಕ ಬಿಡುಗಡೆಗೊಳಿಸಲಾಗಿತ್ತು.

ಇನ್ನು ಬಂಧನದಿಂದ ಬಿಡುಗಡೆಗೊಂಡ ಬಳಿಕ ಪ್ರತಿಭಟನಾ ನಿರತ ರೆಸ್ಲರ್‌ಗಳು ತಾವು ಗೆದ್ದಿರುವ ಪದಕಗಳೊಂದಿಗೆ ಹರಿದ್ವಾರಕ್ಕೆ ಆಗಮಿಸಿ ಪದಕಗಳನ್ನು ಗಂಗಾ ನದಿಗೆ ಎಸೆಯಲು ಮುಂದಾಗಿದ್ದರು. ಆದರೆ ನಂತರ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಲು ಐದು ದಿನಗಳ ಗಡುವು ನೀಡಿದ್ದಾರೆ.

Story first published: Wednesday, May 31, 2023, 13:49 [IST]
Other articles published on May 31, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+